ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವಿರುದ್ಧ ಹೋರಾಡಲು ರೆಡಿಯಾಗುತ್ತಿದ್ದಾರೆ ಕೊರೊನಾ ಯೋಧರು!

|
Google Oneindia Kannada News

ಬೆಂಗಳೂರು, ಮಾರ್ಚ್ 21: ಚೀನಾದಲ್ಲಿ ಹುಟ್ಟಿ ಈಗ ಇಡೀ ಜಗತ್ತನ್ನು ತಲ್ಲಣಗೊಳಿಸಿರುವ ಮಾರಕ ಕೊರೊನಾ ವೈರಸ್ ಸೋಂಕನ್ನು ಎದುರಿಸಲು ಜಗತ್ತಿನ ಎಲ್ಲ ರಾಷ್ಟ್ರಗಳೂ ಹೆಣಗಾಡುತ್ತಿವೆ.

ಕರ್ನಾಟಕದಲ್ಲೂ 19 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ರಾಜ್ಯ ಸರ್ಕಾರವು ಕೊರೊನಾ ಹರಡುವಿಕೆ ತಡೆಯಲು ಹಾಗೂ ಅದರ ನಿಯಂತ್ರಣಕ್ಕೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹರಸಾಹಸ ಪಡುತ್ತಿದೆ.

Covid-19: ಸತ್ಯ ಮತ್ತು ಸುಳ್ಳಿನ ಹುಡುಕಾಟ; ಕೊರೊನಾ ವೈರಸ್ ಸುತ್ತCovid-19: ಸತ್ಯ ಮತ್ತು ಸುಳ್ಳಿನ ಹುಡುಕಾಟ; ಕೊರೊನಾ ವೈರಸ್ ಸುತ್ತ

ಅದರ ಭಾಗವಾಗಿ, ಕೊರೊನಾ ವೈರಸ್ ಬಗ್ಗೆ ಹರಡುವ ವದಂತಿಗಳು ಹಾಗೂ ಅಪಪ್ರಚಾರಗಳನ್ನು ತಡೆದು ಜನರಿಗೆ ನೈಜ ಮಾಹಿತಿ ಒದಗಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ಪ್ರಾರಂಭಿಸಿರುವ ಕಾರ್ಯಕ್ರಮಕ್ಕೆ ಸ್ವಯಂ ಸೇವಕರನ್ನು ಆಹ್ವಾನಿಸಿದೆ.

ಬರುತ್ತಿದ್ದಾರೆ ಕೊರೊನಾ ಯೋಧರು

ಬರುತ್ತಿದ್ದಾರೆ ಕೊರೊನಾ ಯೋಧರು

ಸರ್ಕಾರದೊಂದಿಗೆ ಕೈಜೋಡಿಸಿ ಕೊರೊನಾ ವಿರುದ್ಧ ಹೋರಾಡಲು ಇದೊಂದು ಸದಾವಕಾಶವಾಗಿದೆ. ಕೊರೊನಾ ಯೋಧರೆಂದೇ ಕರೆಯಲ್ಪಡುವ ಈ ಸ್ವಯಂ ಸೇವಕರು ರಾಜ್ಯಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಹರಡುವ ವದಂತಿಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೈಜ ಮಾಹಿತಿಯನ್ನು ಜನರಿಗೆ ತಲುಪಿಸಲು ಸಹಕಾರಿಯಾಗಲಿದ್ದಾರೆ. ಅಲ್ಲದೇ ಸ್ಥಳೀಯವಾಗಿ ಕೊರೊನಾ ಸಂಬಂಧಿತ ವಿದ್ಯಮಾನಗಳನ್ನು ತಂಡದ ಗಮನಕ್ಕೆ ತರಲು ಕ್ರಮವಹಿಸುವರು.

ಕನಿಷ್ಟ 4 ಸ್ವಯಂಸೇವಕರು

ಕನಿಷ್ಟ 4 ಸ್ವಯಂಸೇವಕರು

ರಾಜ್ಯದ ಪ್ರತಿ ತಾಲೂಕಿನಲ್ಲಿ ಕನಿಷ್ಟ 4 ಸ್ವಯಂಸೇವಕರು ದಿನಕ್ಕೆ ನಾಲ್ಕು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುವರು. ಬೆಂಗಳೂರು ನಗರದಲ್ಲೆ ಸುಮಾರು 120 ಸ್ವಯಂ ಸೇವಕರಿಗೆ ಅವಕಾಶವಿದ್ದು, ರಾಜ್ಯಾದ್ಯಂತ ಸುಮಾರು 3000 ಕೊರೊನಾ ಯೋಧರು ನೋಂದಾಯಿಸುವ ನಿರೀಕ್ಷೆಯಿದೆ. ಆನ್‍ಲೈನ್ ಅರ್ಜಿ ಮೂಲಕ ಮೊದಲ ದಿನವೇ 400 ಕ್ಕೂ ಹೆಚ್ಚು ಸ್ವಯಂ ಸೇವಕರು ನೋಂದಾಯಿಸಿಕೊಂಡಿದ್ದಾರೆ.

ಭಾರತದಲ್ಲಿ 300ರ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಭಾರತದಲ್ಲಿ 300ರ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ

ನೈಜ ಮಾಹಿತಿಯನ್ನು ಜನರಿಗೆ ತಲುಪಿಸಲು

ನೈಜ ಮಾಹಿತಿಯನ್ನು ಜನರಿಗೆ ತಲುಪಿಸಲು

ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿಗಳು ಸ್ವೀಕೃತವಾಗುತ್ತಿದೆ. ನೋಂದಾಯಿತ ಸ್ವಯಂ ಸೇವಕರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಛೇರಿಗಳಲ್ಲಿ ಸೂಕ್ತ ತರಬೇತಿ, ಸುರಕ್ಷತಾ ಕಿಟ್ ಹಾಗೂ ಗುರುತಿನ ಚೀಟಿಯನ್ನು ನೀಡಲಾಗುವುದು.

ಎಲ್ಲಿ ಹೆಸರು ನೋಂದಾಯಿಸಬೇಕು?

ಎಲ್ಲಿ ಹೆಸರು ನೋಂದಾಯಿಸಬೇಕು?

ಆಸಕ್ತರು ಈ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಬಯಸಿದ್ದರೆ, ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳಿ. ಜನರಲ್ಲಿ ವದಂತಿಗಳು ಹುಟ್ಟುಹಾಕುವ ಆತಂಕವನ್ನು ತಡೆದು, ನೈಜ ಮಾಹಿತಿಯನ್ನು ನೀಡಲು ಸಹಕರಿಸಿ ಎಂದು ಇಲಾಖೆ ತಿಳಿಸಿದೆ.

English summary
Coronavirus In Karnataka: Karnataka Government Recruiting Corona Soldiers for controlling coronavirus fake news.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X