ಕೊರೊನಾ ವೈರಸ್: ಅಂಕಿ-ಅಂಶ ನೀಡಿದ ಕರ್ನಾಟಕ ಸರ್ಕಾರ
ಬೆಂಗಳೂರು, ಫೆಬ್ರವರಿ 12: ಕೊರೊನಾ ವೈರಸ್ ಕುರಿತಂತೆ ಬಹುತೇಕ ರಾಜ್ಯ ಸರ್ಕಾರಗಳು ಅಂಕಿ-ಅಂಶವನ್ನು ಇಂದು ಬಿಡುಗಡೆ ಮಾಡಿವೆ. ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯು ಅಂಕಿ-ಅಂಶ ಬಿಡುಗಡೆ ಮಾಡಿದೆ.
ರಾಜ್ಯ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಚೀನಾ ಸೇರಿ ಕೊರೊನಾ ವೈರಸ್ ಪೀಡಿತ ದೇಶಗಳಿಂದ 212 ಮಂದಿ ಕರ್ನಾಟಕಕ್ಕೆ ಬಂದಿದ್ದಾರೆ.
212 ಮಂದಿಯಲ್ಲಿ ನಾಲ್ಕು ಜನ ಚೀನಾ ನಾಗರೀಕರೇ ಆಗಿದ್ದು, ಅವರನ್ನು ಮರಳಿ ಚೀನಾಕ್ಕೆ ವಾಪಸ್ ಕಳುಹಿಸಲಾಗಿದೆ. ಉಳಿದವರನ್ನು ನಿಗಾವಣೆಯಲ್ಲಿ ಇಡಲಾಗಿದೆ. ಕೆಲವರನ್ನು ಮನೆಯಲ್ಲಿಯೇ ನಿಗಾ ಘಟಕ ನಿರ್ಮಿಸಿ ಪರಿಶೀಲನೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಈವರೆಗೆ ಯಾವುದೇ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಕೊರೊನಾ ವೈರಸ್ ಇರುವ ಬಗ್ಗೆ ಯಾವ ಆಸ್ಪತ್ರೆಗಳೂ ಸಹ ಈ ವರೆಗೆ ವರದಿ ನೀಡಿಲ್ಲ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ 19,೦೦೦ ಕ್ಕೂ ಹೆಚ್ಚು ಮಂದಿಯನ್ನು ತಪಾಸಣೆ ನಡೆಸಲಾಗುತ್ತಿದೆ.
ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಚಿಕಿತ್ಸೆಗಾಗಿ ವಿಶೇಷ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ಸಲಹೆ, ತರಬೇತಿಗಳನ್ನು ನೀಡಲಾಗಿದೆ.












Click it and Unblock the Notifications