ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಮೇ 18: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ರಾಜ್ಯ ಸರ್ಕಾರವು ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಜತೆಗೆ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದೆ ಎನ್ನುವ ಮಾಹಿತಿಯನ್ನೂ ನೀಡಿದೆ.
ಬ್ಲ್ಯಾಕ್ ಫಂಗಸ್ ಇರುವವರಿಗೆ 12-14ದಿನ ಚಿಕಿತ್ಸೆ ನೀಡಬೇಕು, ರಾಜ್ಯದ ಪ್ರಮುಖ 6 ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ, ಈ ನಿಗದಿತ ಆಸ್ಪತ್ರೆಗಳನ್ನೇ ಚಿಕಿತ್ಸೆ ಪಡೆಯಬೇಕು.
ಹುಬ್ಬಳ್ಳಿಯ ಕಿಮ್ಸ್, ಬೆಂಗಳೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆ, ಶಿವಮೊಗ್ಗದ ಮೆಡಿಕಲ್ ಕಾಲೇಜು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಕಲಬುರಗಿ ಮೆಡಿಕಲ್ ಕಾಲೇಜಿನಲ್ಲಿ ಮಾತ್ರ ಚಿಕಿತ್ಸೆ ಅವಕಾಶ ಮಾಡಿಕೊಡಲಾಗಿದೆ.

ಹಾಗೆಯೇ ನಗರದಲ್ಲಿ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.ಬ್ಲ್ಯಾಕ್ ಫಂಗಸ್ ಎನ್ನುವುದು ಒಬ್ಬರಿಂದ ಒಬ್ಬರಿಗೆ ಹರಡು ಸೋಂಕಲ್ಲ, ಫಂಗಸ್ ಎಂಬುದು ಗಾಳಿಯಲ್ಲಿ ಇರುತ್ತದೆ, ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ ದಾಳಿ ನಡೆಸುತ್ತದೆ.
ಇದು ಮೊದಲಿಗೆ ಕಣ್ಣಿನ ಮೇಲೆ ಪ್ರಭಾವ ಬೀರುತ್ತದೆ, ಬಳಿಕ ಮೂಗಿನ ಮೂಲಕ ಮೆದುಳನ್ನು ಸೇರುತ್ತದೆ. ಹೀಗಾಗಿ ಆರಂಭದಿಂದಲೇ ಎಚ್ಚರವಹಿಸಬೇಕಿದೆ. ವೆಂಟಿಲೇಟರ್‌ಗಳು ಸ್ವಚ್ಛವಾಗಿಲ್ಲದೆ ಇದ್ದರೂ ಹರಡುತ್ತದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಿ ವರದಿ ನೀಡಲು ತಿಳಿಸಲಾಗಿದೆ.
ಎಚ್‌ಐವಿ, ಕ್ಯಾನ್ಸರ್ ಪೀಡಿತರು, ಅಂಗಾಂಗ ಕಸಿ ಮಾಡಿಸಿಕೊಂಡವರಿಗೆ ಸೋಂಕು ತಗುಲುವ ಸಾಧ್ಯತೆ ಇದೆ, ಕೊರೊನಾದಿಂದ ಗುಣಮುಖರಾದ ಬಳಿಕ ಕಿವಿ, ಮೂಗು, ಕಣ್ಣು ತಪಾಸಣೆ ಮಾಡಿಸಿಕೊಳ್ಳುವುದನ್ನು ಮರೆಯಬೇಡಿ, ತಪಾಸಣೆ ಮಾಡಿಸಿಕೊಂಡ ಬಳಿಕವೇ ಆಸ್ಪತ್ರಯಿಂದ ಡಿಸ್ಚಾರ್ಜ್ ಆಗಿ ಎಂದು ಸಲಹೆ ನೀಡಲಾಗಿದೆ.
Recommended Video
ಕೊರೊನಾದಷ್ಟೇ ಬ್ಲ್ಯಾಕ್ ಫಂಗಸ್ ಹರಡುತ್ತಿಲ್ಲ, ಅನ್ ಕಂಟ್ರೋಲ್ಡ್ ಡಯಾಬಿಟಿಸ್ ಇರುವವರಿಗೆ ಸೀಮಕು ಬಂದಾಗ ಸ್ಟೀರಾಯ್ಡ್ ಬಳಸಿದರೆ ಸ್ವಾಭಾವಿಕವಾಗಿ ಶುಗರ್ ಹೆಚ್ಚಾಗುತ್ತದೆ, ಇಂತವರು ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಬೇಕಿದೆ.
-
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications