Good News: ರಾಜ್ಯದಲ್ಲಿ ಕೊನೆಗೂ ಜಾತಿ ಗಣತಿ ಸಮೀಕ್ಷಾದಾರರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ

Good News: ರಾಜ್ಯದಲ್ಲಿ ಜಾತಿ ಗಣತಿ ವೇಳೆ ಬಳಕೆ ಮಾಡಿಕೊಂಡಿದ್ದ ಸಮೀಕ್ಷಾದಾರರಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ ಈ ಕಾರ್ಯವನ್ನು ಮಾಡಲಾಗಿತ್ತು. ಹಾಗಾದ್ರೆ ಇದೀಗ ಸರ್ಕಾರ ಎಷ್ಟು ಅನುದಾನ ರಿಲೀಸ್‌ ಮಾಡಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಜಾತಿ ಗಣತಿ ಸಮೀಕ್ಷೆದಾರರಿಗೆ ಗುಡ್ ನ್ಯೂಸ್‌ ನೀಡಿದ್ದು, ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ. ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

Karnataka Government Releases Honorarium for Caste Census Enumerators and Supervisors

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಂಡ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕಾರ್ಯನಿರ್ವಹಿಸಿರುವ ಸಮೀಕ್ಷಾದಾರರಿಗೆ ಅನುದಾನ ಬಿಡುಗಡೆಗೊಳಿಸಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು 127,73,45,200 ರೂಪಾಯಿ (ನೂರ ಇಪ್ಪತ್ತೇಳು ಕೋಟಿ ಎಪ್ಪತ್ಮೂರು ಲಕ್ಷದ ನಲವತ್ತೈದು ಸಾವಿರದ ಇನ್ನೂರು ರೂಪಾಯಿಗಳು ಮಾತ್ರ) ಗಳನ್ನು ಒಳಪಟ್ಟು ಬಿಡುಗಡೆ ಮಾಡಿ ಆದೇಶಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ ಈ ಮೊತ್ತವನ್ನು ಮೊದಲ ಕಂತಿನಲ್ಲಿ ಜಿಲ್ಲಾಧಿಕಾರಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಪ್ರಮುಖ ಅಂಶಗಳು

* ಒಂದು ಮತ್ತು ಎರಡು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವವರಿಗೆ ತಲಾ 50 ರೂಪಾಯಿನಂತೆ ಹಾಗೂ ಮೂರು ಮತ್ತು ಮೂರಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವವವರಿಗೆ ತಲಾ 100 ರೂಪಾಯಿನಂತೆ ಪಾವತಿಸಲಾಗುವುದು.

* EDCS ನಿಂದ ಪಡೆದಿರುವಂತೆ ಸಮೀಕ್ಷಾದಾರರ ಹೆಸರು ಮತ್ತು ಅವರಿಗೆ ಪಾವತಿಸಬೇಕಾಗಿರುವ ಮೊತ್ತದ ವಿವರವನ್ನು ಜಿಲ್ಲಾವಾರು ಪ್ರತ್ಯೇಕವಾಗಿ ನೀಡಲಾಗಿದೆ.

* ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚದ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು ಹಾಗೂ ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪ್ರಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದು.

ಆಯೋಗದ ಪ್ರಕಟಣೆಯ ಪ್ರಕಾರ, ರಾಜ್ಯಾದ್ಯಂತ 1,46,48,053 ಮನೆಗಳ ಸಮೀಕ್ಷೆ ಕಾರ್ಯ ನಡೆದಿದ್ದು, ಇದಕ್ಕೆ ಈ ಮೊತ್ತ ಮೀಸಲಾಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಗೆ ಸಮೀಕ್ಷೆದಾರರಿಗೆ ಗೌರವಧನ ವಿತರಣೆಗೆ ಸಕಾಲದಲ್ಲಿ ಹಣ ಹಂಚಿಕೆ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಮೇಲ್ವಿಚಾರಕರಿಗೆ ತಲಾ 10,000 ರೂಪಾಯಿಗಳನ್ನು ನೀಡುವ ಪ್ರತ್ಯೇಕ ಪ್ರೋತ್ಸಾಹಧನವನ್ನು ಸಹ ಸರ್ಕಾರ ಅನುಮೋದನೆ ನೀಡಿದೆ. ಈ ನಿರ್ಧಾರದಿಂದ ರಾಜ್ಯಾದ್ಯಂತ ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರು ನೇರವಾಗಿ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತದೆ. ಹೀಗೆ ಸಮೀಕ್ಷೆಯಲ್ಲಿ ಪಾಲ್ಗೊಂಡವರಿಗೆ ರಾಜ್ಯ ಸರ್ಕಾರ ಗೌರವಧನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+