ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು, ಡಿಸೆಂಬರ್ 5: ರಾಜ್ಯದಲ್ಲಿ ಸರ್ಕಾರವು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಆಗಾಗ ಮಹತ್ವದ ಮಾಹಿತಿಯನ್ನ ನೀಡುತ್ತಲಿರುತ್ತದೆ. ಇದೀಗ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲಾಗಿದೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದ್ದು, ಈ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದು, 1ರಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯ ಇಲ್ಲ ಎಂದು ಹೇಳಲಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ಪದವಿ ಪೂರೈಸಿದ ಪ್ರಾಥಮಿಕ ಶಿಕ್ಷಕರಿಗೆ ಟಿಇಟಿ ಕಡ್ಡಾಯ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ. ಸಂಪುಟ ಸಭೆ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ಬಗ್ಗೆ ಮಾತನಾಡಿ, 1ರಿಂದ 5ನೇ ತರಗತಿವರೆಗೆ ಬೋಧಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯ ಇಲ್ಲ. 6 ಮತ್ತು 7ನೇ ತರಗತಿ ಹಾಗೂ ಮುಂದಿನ ತರಗತಿಗಳಿಗೆ ಟಿಇಟಿ ಅಗತ್ಯ ಎಂದು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
ಹೊಸ ಪಿಂಚಣಿ ಕುರಿತು ಮಾಹಿತಿ: ರಾಜ್ಯದಲ್ಲಿ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲು ಈ ವರ್ಷದಲ್ಲಿ ನೇಮಕಗೊಂಡ ಶಿಕ್ಷಕರು ಅರ್ಹರು ಎಂದು ತಿಳಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಏಪ್ರಿಲ್ 1, 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಹಳೆಯ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ ಮಾಹಿತಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಕೆ ಮಾಡಲಾಗಿದೆ.
ಸದರಿ ಮಾಹಿತಿಯನ್ನಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಈ ಸಂಬಂಧ ದೃಡೀಕರಣ ಪತ್ರವನ್ನು ಸಲ್ಲಿಸಲು ಸೂಚಿಸಲಾಗಿದ್ದು, ಅದರಂತೆಯೇ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ದೃಢೀಕರಿಸಲಾಗಿದೆ ಎಂದು ತಿಳಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಲ್ಲಿ ಏಪ್ರಿಲ್ 1, 2006 ಪೂರ್ವದಲ್ಲಿ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿ ಅಥವಾ ತದನಂತರ ನೇಮಕಗೊಂಡ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಮಾರ್ಚ್ 10, 2025ರ ಪತ್ರದೊಂದಿಗೆ ಸಲ್ಲಿಕೆ ಮಾಡಲಾಗಿದೆ.
ಒಟ್ಟು 2,302 ಪ್ರಾಥಮಿಕ ಶಾಲಾ ಶಿಕ್ಷಕರ ಮಾಹಿತಿಯನ್ನು ಪರಿಶೀಲನೆ ಮಾಡಲಾಗಿದೆ. ಈ ಪ್ರಾಥಮಿಕ ಶಾಲಾ ಶಿಕ್ಷಕರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಅರ್ಹರಿರಾಗಿದ್ದಾರೆ ಎಂದು ಈ ಮೂಲಕ ದೃಡೀಕರಿಸಿದೆ ಎಂದು ತಿಳಿಸಲಾಗಿದ ಎಂದು ಉಲ್ಲೇಖ ಮಾಡಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications