ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಹೋಂ ಕ್ವಾರಂಟೈನ್ ನಿಯಮ ಮತ್ತೆ ಬದಲಾವಣೆ

|
Google Oneindia Kannada News

ಬೆಂಗಳೂರು, ಜುಲೈ 06 : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾನುವಾರ ಒಂದೇ ದಿನ ರಾಜ್ಯದಲ್ಲಿ 1925 ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿದೆ.

Recommended Video

Huawei out of UK ಭಾರತದ ನಂತರ ಚೀನಾಗೆ ದೊಡ್ಡ ಶಾಕ್ ಕೊಟ್ಟ ಬ್ರಿಟನ್ | Oneindia Kannada

ಸೋಮವಾರ ಕರ್ನಾಟಕ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಅಂತರರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಇದ್ದ ಹೋಂ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ.

ಹೊರ ರಾಜ್ಯದವರ ಕ್ವಾರಂಟೈನ್ ನಿಯಮ ಮತ್ತೆ ಬದಲಾವಣೆ ಹೊರ ರಾಜ್ಯದವರ ಕ್ವಾರಂಟೈನ್ ನಿಯಮ ಮತ್ತೆ ಬದಲಾವಣೆ

ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸಿದರೆ 14 ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಈ ಹಿಂದೆ ಇದ್ದ 7 ದಿನದ ಹೋಂ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಲಾಗಿದೆ.

ಚಿತ್ರ ಮಾಹಿತಿ; ಹೋಂ ಐಸೋಲೇಷನ್ ಮಾರ್ಗಸೂಚಿಗಳು ಚಿತ್ರ ಮಾಹಿತಿ; ಹೋಂ ಐಸೋಲೇಷನ್ ಮಾರ್ಗಸೂಚಿಗಳು

Karnataka Government Revised Home Quarantine Norms

ಜನರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸಿದರೆ 7 ದಿನದ ಸಾಂಸ್ಥಿಕ ಕ್ವಾರಂಟೈನ್, 7 ದಿನದ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯದಿಂದ ಬಂದರೆ 7 ದಿನದ ಹೋಂ ಕ್ವಾರಂಟೈನ್‌ ಕಡ್ಡಾಯವಾಗಿತ್ತು.

 ಬೆಳಗಾವಿ; ಕ್ವಾರಂಟೈನ್ ನಿಯಮ ಮುರಿದು ತಿರುಗಾಡಿದ 573 ಜನರ ವಿರುದ್ಧ ಕೇಸ್ ಬೆಳಗಾವಿ; ಕ್ವಾರಂಟೈನ್ ನಿಯಮ ಮುರಿದು ತಿರುಗಾಡಿದ 573 ಜನರ ವಿರುದ್ಧ ಕೇಸ್

ಈಗ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನದ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ರೈಲು, ವಿಮಾನದ ಮೂಲಕ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವವರು ಹೊಸ ಕ್ವಾರಂಟೈನ್ ನಿಯಮಗಳನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.

English summary
Karnataka government issued revised quarantine norms. People coming from other states to Karnataka including Maharashtra shall be placed in 14-days home quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X