Government Employee: ಸರ್ಕಾರಿ ನೌಕರರ 2018ರ ವೇತನ ಶ್ರೇಣಿ ತುಟ್ಟಿಭತ್ಯೆ ದರ ಪರಿಷ್ಕರಣೆ

ಬೆಂಗಳೂರು, ನವೆಂಬರ್ 28: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್‌ನ್ಯುಸ್ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆಯ ದರಗಳನ್ನು ಪರಿಷ್ಕರಣೆ ಮಾಡಿ ಆದೇಶವನ್ನು ಹೊರಡಿಸಿದೆ. ತುಟ್ಟಿ ಭತ್ಯೆಯ ಪರಿಷ್ಕರಣೆಯ ಆರ್ಥಿಕ ಲಾಭವು 2024ರ ಜುಲೈ ಮಾಹೆಗೆ ಮಾತ್ರ ಸೀಮಿತವಾಗಿರತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ .ಕೆ ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆಯ ದರಗಳನ್ನು ಪರಿಷ್ಕರಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

Karnataka Government Revises Dearness Allowance Rates For 2018 Pay Scales

ರಾಜ್ಯ ಸರ್ಕಾರದ ನೀತಿಯಂತೆ ದಿನಾಂಕ 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ದಿನಾಂಕ 01.08.2024 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಸದರಿ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸಲು ಅವಕಾಶಗಳನ್ನು ಕಲ್ಪಿಸಲಾಗಿರುತ್ತದೆ ಎಂದು ಹೇಳಿದೆ.

ಸರ್ಕಾರದ ಆದೇಶ: ಭಾರತ ಸರ್ಕಾರದ ಆದೇಶವನ್ನು ರಾಜ್ಯ ಸರ್ಕಾರವು ಪರಿಗಣಿಸಿರುತ್ತದೆ ಮತ್ತು 6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿದ್ದ ರಾಜ್ಯ ಸರ್ಕಾರಿ ನೌಕರರುಗಳಿಗೆ ಜುಲೈ 2024ರ ಮಾಹೆಗೆ ಅನ್ವಯವಾಗುವಂತೆ ತುಟ್ಟಿ ಭತ್ಯೆಯ ದರಗಳನ್ನು ಜುಲೈ ಮಾಹೆಯ ಮೂಲ ವೇತನದ ಶೇ 42.50 ರಿಂದ ಶೇ 45.25ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಲು ಸರ್ಕಾರವು ಹರ್ಷಿಸುತ್ತದೆ. ತುಟ್ಟಿ ಭತ್ಯೆಯ ಪರಿಷ್ಕರಣೆಯ ಆರ್ಥಿಕ ಲಾಭವು 2024ರ ಜುಲೈ ಮಾಹೆಗೆ ಮಾತ್ರ ಸೀಮಿತವಾಗಿರತಕ್ಕದ್ದು ಎಂದು ಹೇಳಿದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ 'ಮೂಲ ವೇತನ ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ. 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ. ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ತುಟ್ಟಿಭತ್ಯೆಯ ದರಗಳನ್ನು ಪ್ರಸಕ್ತ 2018ರ ಪರಿಷ್ಕೃತ ವೇತನ ಶ್ರೇಣಿಗಳ 2024 ಜುಲೈ ಮಾಹೆಯ ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಶೇ 42.50 ರಿಂದ ಶೇಕಡ 45.25 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ. ತುಟ್ಟಿ ಭತ್ಯೆಯ ಪರಿಷ್ಕರಣೆಯ ಆರ್ಥಿಕ ಲಾಭವು 2024ರ ಜುಲೈ ಮಾಹೆಗೆ ಮಾತ್ರ ಸೀಮಿತವಾಗಿರತಕ್ಕದ್ದು.

ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ ಮತ್ತು ಅದು 2024ರ ಜುಲೈ ಮಾಹೆಗೆ ಮಾತ್ರ ಸೀಮಿತವಾಗಿರತಕ್ಕದ್ದು. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಶ್ರೇಣಿಗಳಲ್ಲಿರುವ ಪೂರ್ಣಾವಧಿ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.

ಆದೇಶದಲ್ಲಿ ತುಟ್ಟಿಭತ್ಯೆಯನ್ನು ಸಂಭಾವನೆ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+