ರಂಜಾನ್ಗೆ ಉರ್ದು ಶಾಲೆಗಳ ಸಮಯ ಬದಲಾವಣೆ: ಸರ್ಕಾರದ ಈ ನಿರ್ಧಾರ 'ಓಲೈಕೆ' ಅಲ್ಲ ಎಂದ ಜಿ.ಪರಮೇಶ್ವರ್
ರಾಜ್ಯದಲ್ಲಿನ ಉರ್ದು ಮಾಧ್ಯಮ ಶಾಲೆಗಳ ಶಾಲಾ ಸಮಯವನ್ನು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಬದಲಾವಣೆ ಮಾಡಿ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಂಜಾನ್ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಬೆಳಿಗ್ಗೆ 8ರಿಂದ ಮಧ್ಯಾಹ್ನ 12.45ರವರೆಗೆ ತರಗತಿ
ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ, ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ಪರಿಷ್ಕೃತ ಸಮಯ ಅನ್ವಯವಾಗಲಿದೆ. ರಂಜಾನ್ ತಿಂಗಳು ಆರಂಭವಾಗುವ ದಿನದಿಂದ 2026ರ ಮಾರ್ಚ್ 20ರವರೆಗೆ ಶಾಲೆಗಳು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45ರವರೆಗೆ ಕಾರ್ಯನಿರ್ವಹಿಸಲಿವೆ. ಸಾಮಾನ್ಯ ದಿನಗಳಲ್ಲಿ ಶಾಲೆಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ನಡೆಯುತ್ತಿದ್ದವು. ಆದರೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಪುರಸ್ಕರಿಸಿ ಮತ್ತು 2002ರಲ್ಲಿದ್ದ ಹಳೆಯ ಆದೇಶವನ್ನು ಪರಿಶೀಲಿಸಿ ಸರ್ಕಾರ ಈ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇದು ಓಲೈಕೆಯ ರಾಜಕೀಯವಲ್ಲ: ಪರಮೇಶ್ವರ್ ಸ್ಪಷ್ಟನೆ
ಸರ್ಕಾರದ ಈ ನಡೆಗೆ ವಿರೋಧ ಪಕ್ಷಗಳಿಂದ 'ಅಲ್ಪಸಂಖ್ಯಾತರ ಓಲೈಕೆ' ಎಂಬ ಟೀಕೆ ವ್ಯಕ್ತವಾಗಿರುವ ಬೆನ್ನಲ್ಲೇ, ಗೃಹ ಸಚಿವ ಜಿ. ಪರಮೇಶ್ವರ್ ಅವರು ಸರ್ಕಾರದ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. "ಇದು ಅಲ್ಪಸಂಖ್ಯಾತರ ಓಲೈಕೆಯ ಪ್ರಶ್ನೆಯಲ್ಲ. ಸಂವಿಧಾನದಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ನೀಡಿರುವುದು ಮತ್ತು ಹಿಂದುಳಿದ ವರ್ಗಗಳನ್ನು ಪರಿಗಣಿಸಿರುವುದು ಅವರನ್ನು ಇತರರಿಗೆ ಸಮಾನರನ್ನಾಗಿ ಮಾಡಲು. ಸಾವಿರಾರು ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತಲು ಇಂತಹ ಪ್ರೋತ್ಸಾಹ ಅಗತ್ಯ," ಎಂದು ಅವರು ಹೇಳಿದ್ದಾರೆ. ಉರ್ದು ಮಾಧ್ಯಮದ ಮಕ್ಕಳು ಇತರರೊಂದಿಗೆ ಸಮಾನವಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳ ಮೂಲಕ ಸಣ್ಣ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಸಹಿಸದಿದ್ದರೆ, ನೀವು ಸಮಾನತೆಯ ವಿರೋಧಿಗಳು ಎಂದು ಅರ್ಥವಾಗುತ್ತದೆ ಎಂದು ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಈ ಹಿಂದೆಯೂ 2002ರ ಅಕ್ಟೋಬರ್ 31ರಂದು ಹೊರಡಿಸಲಾಗಿದ್ದ ಆದೇಶದಲ್ಲಿ ಉರ್ದು ಶಾಲೆಗಳಿಗೆ ಬೆಳಿಗ್ಗೆ ತರಗತಿ ನಡೆಸಲು ಅವಕಾಶ ನೀಡಲಾಗಿತ್ತು. ಇದೀಗ 2026ರ ಜನವರಿ 17ರಂದು ಸಂಘ ಸಲ್ಲಿಸಿದ ಮನವಿಯ ಮೇರೆಗೆ, ರಂಜಾನ್ ಆಚರಣೆಯ ದೃಷ್ಟಿಯಿಂದ ವಿಷಯವನ್ನು ಮರುಪರಿಶೀಲಿಸಿ ಜನವರಿ 30ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications