ಜನ ಕೇಳಿದ್ದಕ್ಕೆ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಎಂದ ಸರ್ಕಾರ!
ಬೆಂಗಳೂರು (ಮೇ 30): ಕರ್ನಾಟಕ ಸರ್ಕಾರವು ಕರ್ನಾಟಕದ ಕರಾವಳಿ ಭಾಗವನ್ನು ನಿರ್ಲಕ್ಷ್ಯ ಮಾಡುತ್ತಿದೆಯೇ ಎನ್ನುವ ಗಂಭೀರ ಚರ್ಚೆಯ ನಡುವೆಯೇ ಕರ್ನಾಟಕ ಸರ್ಕಾರವು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಂದೇಶವನ್ನು ಹಂಚಿಕೊಂಡಿದೆ. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಅಲ್ಲಿನ ಜನರು ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಆಪೇಕ್ಷೆ ಪಟ್ಟಿದ್ದರಿಂದ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ. ಕಳೆದ ಬಾರಿ ಭೇಟಿ ನೀಡಿದಾಗ ಅಧಿಕಾರಿಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು. ಕೂಡಲೇ ಬದಲಾಯಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ಮಾಡಿರಲಿಲ್ಲ. ಈ ಬಾರಿಯೂ ಧ್ವನಿ ಎತ್ತಿದ್ದರಿಂದ ಬದಲಾಯಿಸಿದ್ದೇವೆ ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಯಾರು ಏನೇ ಹೇಳಿದರು, ನಾವು ಇದನ್ನು ಸಹಿಸುವುದಿಲ್ಲ. ಆ ಭಾಗದಲ್ಲಿ ಶಾಂತಿ ನೆಲೆಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮಾದರಿಯಾಗಿರುವ ಜಿಲ್ಲೆ. ಯಾರು ಶಾಂತಿ ಕದಡುವುದಕ್ಕೆ ಪ್ರಯತ್ನಿಸುತ್ತಾರೆ, ಅವರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಕರವಾಳಿ ಭಾಗದಲ್ಲಿ ಪ್ರಜ್ಞಾವಂತ ಜನರಿದ್ದಾರೆ. ಶಾಂತಿ ಕಾಪಾಡುವುದು ಬಹಳ ಮುಖ್ಯ ಎಂದು ತಿಳಿಸಿದ್ದೆ. ಇದು ಹೀಗೆ ನಡೆಯುತ್ತಿದ್ದರೆ ಸರ್ಕಾರ ಸಹಿಸುವುದಕ್ಕೆ ಆಗುತ್ತದೆಯೇ ? ಎಂದರು.
ಅಧಿಕಾರಿಗಳನ್ನು ಅನಿವಾರ್ಯವಾಗಿ ಬದಲಾಯಿಸಬೇಕಾದ ಪರಿಸ್ಥಿತಿ ಬಂದಿದ್ದರಿಂದ ಮಂಗಳೂರು ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಎಸ್‌ಪಿ, ಉಡುಪಿ ಎಸ್‌ಪಿಯನ್ನು ಬದಲಾಯಿಸಿದ್ದೇವೆ. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಈಗಾಗಲೇ ಅವರಿಗೆ ಸೂಚನೆ ಕೊಟ್ಟಿದ್ದೇವೆ. ಮುಂದೆ ಇದನ್ನು ನಡೆಯುವುದಕ್ಕೆ ಬಿಡುವುದಿಲ್ಲ. ಜನಸಮುದಾಯವು ಇದಕ್ಕೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.
ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆಗೆ ಕಾಲಾವಕಾಶ ಬೇಕಾಗಿತ್ತು. ನಿನ್ನೆ ಡಿಜಿಯವರೊಂದಿಗೆ ಚರ್ಚಿಸಿದ್ದೇನೆ. ಕಾರ್ಯಪಡೆಯನ್ನು ಯಾವ ರೀತಿ ನಿಯೋಜಿಸಬೇಕು. ಅವರಿಗೆ ನೀಡಬೇಕಾದ ಅಧಿಕಾರದ ಬಗ್ಗೆ ಚರ್ಚಿಸಲಾಗಿದೆ. ಉಡುಪಿ, ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಿಯೋಜಿಸುತ್ತೇವೆ ಎಂದರು.
ಪ್ರಚೋದನಾಕಾರಿ ಭಾಷಣಗಳಿಗೆ ಕಡಿವಾಣ ಹಾಕುತ್ತೇವೆ. ಈಗ ಇರುವ ಕಾನೂನು ಚೌಕಟ್ಟಿನಲ್ಲಿ ಮಾಡಬೇಕಾಗುತ್ತದೆ. ಇಂತಹ ಪ್ರಕರಣಗಳಿಗೆ ಕೋರ್ಟ್‌ಗಳಲ್ಲಿ ಅನೇಕ ಸಂದರ್ಭಗಳಲ್ಲಿ ತಡೆ ನೀಡುತ್ತಾರೆ. ಅಥವಾ ರದ್ದುಗೊಳಿಸುತ್ತಾರೆ. ಇದೆಲ್ಲವನ್ನು ನೋಡಿಕೊಂಡು ಮಾಡಬೇಕಾಗುತ್ತದೆ. ಸೋಷಿಯಲ್ ಮೀಡಿಯಾದಲ್ಲಿನ ಅನವಶ್ಯಕ ಪೋಸ್ಟ್‌ಗಳನ್ನು ನಿಯಂತ್ರಣ ಮಾಡುತ್ತೇವೆ ಎಂದರು ಹೇಳಿದರು.
ಸಚಿವ ದಿನೇಶ್ ಗುಂಡೂರಾವ್ ಅವರು ಮೊದಲಿನಿಂದಾನೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಬೇಡ ಎಂದಿದ್ದರು. ಅವರು ಈಗ ಬೆಳವಣಿಗೆ ನಂತರ ಹೊಸದಾಗಿ ಹೇಳಿಲ್ಲ. ನನಗೆ ದೂರವಾಗುತ್ತದೆ. ಆ ಭಾಗದಲ್ಲಿರುವವರಿಗೆ ಉಸ್ತುವಾರಿ ನೀಡಿದರೆ ಒಳ್ಳೆಯದು ಎಂದಿದ್ದರು. ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟದ್ದು ಎಂದು ಪ್ರತಿಕ್ರಿಯಿಸಿದರು.
ನಾವು ರಾಜ್ಯದಲ್ಲಿನ ಯಾವುದೇ ಭಾಗವನ್ನು ನಿರ್ಲಕ್ಷ್ಯ ಮಾಡುವುದಿಲ್ಲ. ಕರಾವಳಿ ಇರಬಹುದು, ಉತ್ತರ ಕರ್ನಾಟಕ ಇರಬಹುದು, ಇನ್ನೊಂದು ಅಗಿರಬಹುದು. ಯಾವ ಜಿಲ್ಲೆಯನ್ನು ಸಹ ನಿರ್ಲಕ್ಷ್ಯ ಮಾಡುವುದಿಲ್ಲ. ಕರಾವಳಿ ಭಾಗದಲ್ಲಿ ಹೆಚ್ಚಿನ ರೀತಿಯಲ್ಲಿ ಗಮನ ಹರಿಸಬೇಕಿದೆ, ಅದನ್ನು ಮಾಡುತ್ತೇವೆ ಎಂದರು.
ಘಟನೆಗಳ ಹಿನ್ನೆಲೆ ಏನಿದೆ. ಅದರ ಹಿಂದೆ ಯಾರಿದ್ದಾರೆ ಎಂಬ ಮೂಲ ಹುಡುಕುತ್ತಿದ್ದೇವೆ. ರಾಜಕೀಯ ಕಾರಣ ಅಥವಾ ಬೇರೆ ಕಾರಣಕ್ಕೆ ಭಾಗಿಯಾಗಿದ್ದರು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications