Reservation: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಎಂ ಡಿಕೆ ಶಿವಕುಮಾರ್ ಭರ್ಜರಿ ಗುಡ್‌ ನ್ಯೂಸ್‌

Reservation: ರಾಜ್ಯದಲ್ಲಿ ಸಿಎಂ ಡಿಕೆ ಶಿವಕುಮಾರ್ ಜನರಿಗೆ ಅನುಕೂಲ ಆಗುವಂತಹ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇದೀಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಪ್ರಜಾಸೇವೆ' ನೂತನ ಅಭಿಯಾನಕ್ಕೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಚಾಲನೆ ನೀಡಲಾಯಿತು. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆಗಳನ್ನು ಮಾಡಿ ಗಮನ ಸೆಳೆದರು.

Karnataka Government Schools Chief Minister DK Shivakumar Announces 7 reservation for Students

ಶೀಘ್ರದಲ್ಲೇ ಜಾರಿ..

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡಾ 7ರಷ್ಟು ಒಳ ಮೀಸಲಾತಿ ಕಲ್ಪಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಇದರ ನಿಯಮಾವಳಿಗಳು ಜಾರಿಗೆ ಬರಲಿವೆ,' ಎಂದು ಘೋಷಣೆ ಮಾಡಿದರು.

'ಶಿಕ್ಷಕರ ಹೆಸರಿನ ಹಿಂದೆ ಗೌರವಪೂರ್ವಕ ಪದನಾಮ ಬಳಕೆ'

ಇದೇ ವೇಳೆ ಅವರು 'ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರ ಗೌರವಾರ್ಥವಾಗಿ ಇನ್ನುಮುಂದೆ ವೈದ್ಯರಂತೆ ಶಿಕ್ಷಕರ ಹೆಸರಿನ ಮೊದಲೂ 'Tr'ಎಂಬ ಗೌರವಪೂರ್ವಕ ಪದನಾಮ ಬಳಸಲು ಸರ್ಕಾರ ನಿರ್ಧರಿಸಿದೆ,' ಎಂದು ತಿಳಿಸಿದರು. ಇನ್ನೂ 'ಬಾಗಿಲಿಗೆ ಬಂದಿದೆ ನಿಮ್ಮ ಸರ್ಕಾರ, ಸೇವೆಗಿರಲಿ ನಿಮ್ಮ ಸಹಕಾರ' ಎಂಬ ಧ್ಯೇಯವಾಕ್ಯದಡಿ ಆರಂಭವಾಗಿರುವ ಈ ಉಪಕ್ರಮವು ವಿಧಾನಸೌಧದ ಆಡಳಿತವನ್ನು ಹಳ್ಳಿಯ ಬಾಗಿಲಿಗೆ ತಲುಪಿಸಲಿದೆ ಎಂದರು.

224 ಕ್ಷೇತ್ರಗಳಲ್ಲಿ ಯೋಜನೆ ಜಾರಿ

ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಯಾವುದೇ ತಾರತಮ್ಯ ಇಲ್ಲದೆ ಯೋಜನೆ ಜಾರಿಯಾಗಲಿದೆ. ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರದಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಾಲೂಕು, ಹೋಬಳಿ ಮತ್ತು ಪಂಚಾಯಿತಿ ಮಟ್ಟಕ್ಕೆ ಖುದ್ದು ತೆರಳಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದು ತಿಳಿಸಿದರು.

ಶಾಸಕರ ಅನುಪಸ್ಥಿತಿಯಲ್ಲಿ ಹಿರಿಯ ಅಧಿಕಾರಿಗಳೇ ಗ್ರಾಮಮಟ್ಟದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದು ಕಡ್ಡಾಯವಾಗಿದೆ. ಈಗಾಗಲೇ ಸ್ವೀಕೃತವಾಗಿರುವ 50 ಸಾವಿರಕ್ಕೂ ಅಧಿಕ ಅರ್ಜಿಗಳಿಗೆ ಕೇವಲ ಸ್ವೀಕೃತಿ ರಸೀದಿ ನೀಡದೆ. ತಾರ್ಕಿಕ ಅಂತ್ಯ ಕಾಣುವವರೆಗೂ ಸರ್ಕಾರ ಬೆನ್ನಿಗೆ ನಿಲ್ಲಲಿದೆ ಎಂದು ಹೇಳಿದರು.

ಬಡವರಿಗೆ ಉಚಿತ ಕಾನೂನು ನೆರವಿನ ಭರವಸೆ

ಕಂದಾಯ ವ್ಯಾಜ್ಯಗಳು, ಖಾತೆ ಬದಲಾವಣೆ, ಭೂಮಿ ಹಕ್ಕುಪತ್ರ ಹಾಗೂ ನಿವೇಶನದ ಸಮಸ್ಯೆಗಳಲ್ಲಿ ಸಿಲುಕಿರುವ ಬಡ ನಾಗರಿಕರಿಗೆ ತಹಶೀಲ್ದಾರ್, ಎಸಿ ಅಥವಾ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕಾನೂನು ಹೋರಾಟ ನಡೆಸಲು ಸರ್ಕಾರದ ವತಿಯಿಂದಲೇ ಉಚಿತ ವಕೀಲರನ್ನು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಒಂದು ವೇಳೆ ಅರ್ಜಿ ತಿರಸ್ಕೃತವಾದರೆ ಅದಕ್ಕೆ ನಿಖರ ಕಾರಣವನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕಾಗುತ್ತದೆ.

'ನಾನು ನಾಡದೊರೆಯಲ್ಲ, ಪ್ರಜೆಗಳ ಸೇವಕ. ಅಧಿಕಾರ ಕೊಟ್ಟಿರುವ ಜನರೇ ನಮಗೆ ನಿಜವಾದ ಮಾಲೀಕರು,' ಎಂದರು. ಬರ-ನೆರೆ ಸಮೀಕ್ಷೆ ಕುರಿತ ವಿರೋಧ ಪಕ್ಷಗಳ ಟೀಕೆಗೆ ಉತ್ತರಿಸಿದರು. 'ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗಲೂ ಇದೇ ರೀತಿ ಅಪಹಾಸ್ಯ ಮಾಡಲಾಗಿತ್ತು. ಇಂದು ಅವು ಯಶಸ್ವಿಯಾಗಿ ಜನರ ಮನೆ ತಲುಪಿವೆ. ಟೀಕೆಗಳು ಕಾಲಕ್ರಮೇಣ ಅಳಿಸಿಹೋಗುತ್ತವೆ. ಆದರೆ ನಾವು ಮಾಡಿದ ಜನಪರ ಕೆಲಸಗಳು ಶಾಶ್ವತವಾಗಿ ಉಳಿಯಲಿವೆ,' ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+