karnataka assembly elections 2023: ಚುನಾವಣಾ ಹೊತ್ತಲಿ ಸಾಲು ಸಾಲು ನಿಗಮ ಮಂಡಳಿ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಆದೇಶ
ಚುನಾವಣಾ ಸಮಯದಲ್ಲಿ ಎಲ್ಲಾ ಸಮುದಾಯಗಳ ಮತಗಳನ್ನ ಸೆಳೆಯಲು ಹಲವು ನಿಗಮ ಮಂಡಳಿ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ.
ಬೆಂಗಳೂರು, ಮಾರ್ಚ್ 21: 2023 ರ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಸಮಯದಲ್ಲಿ ಎಲ್ಲಾ ಸಮುದಾಯಗಳ ಮತಗಳನ್ನ ಸೆಳೆಯಲು ಹಲವು ನಿಗಮ ಮಂಡಳಿ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ.
ವಿಶಿಷ್ಟವಾದ ಸಂಸ್ಕೃತಿ, ಆಚಾರ-ವಿಚಾರ,ಆಹಾರ ಪದ್ಧತಿಯನ್ನು ಹೊಂದಿರುವ ರಾಜ್ಯದ ಕೊಡವ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.
— CM of Karnataka (@CMofKarnataka) March 20, 2023
1/2 pic.twitter.com/Fb50hi2PoZ
ಈಗಾಗಲೇ ಅಬ್ಬರ ಪ್ರಚಾರವನ್ನ ನಡೆಸುತ್ತಿರುವ ಬಸರಾಜ ಬೊಮ್ಮಾಯಿ 2023 ರ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದು, ರಾಜ್ಯ ಸರ್ಕಾರ ನೀತಿ ಸಂಹಿತೆ ಜಾರಿಗೆ ಬರುವ ಮೊದಲೇ ವಿವಿಧ ಸಮುದಾಯದ ಬೇಡಿಕೆಗಳನ್ನು ಈಡೇರಿಸುತ್ತಾ, ಆಯಾ ಸಮುದಾಯಗಳ ಮತ ಸೆಳೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದು, ರಾಜ್ಯ ಸರಕಾರ ಕೊಡವ ಅಭಿವೃದ್ಧಿ ನಿಗಮವನ್ನ ಸ್ಥಾಪಿಸಿ ಆದೇಶ ಹೊರಡಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತ ಟ್ವೀಟರ್ ಮತ್ತು ಫೇಸ್ ಬುಕ್ ಅಕೌಂಟ್ ಗಳಲ್ಲಿ ಅದೇಶದ ಪ್ರತಿಗಳನ್ನು ಪ್ರಕಟಿಸಿದ್ದಾರೆ. ಈ ನಿಗಮವು ಕೊಡವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದು, ಕೊಡವ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಬದ್ಧವಾಗಿ ಕಾರ್ಯ ನಿರ್ವಹಿಸಲಿದೆ. ವಿಶಿಷ್ಟವಾದ ಸಂಸ್ಕೃತಿ, ಆಚಾರ-ವಿಚಾರ,ಆಹಾರ ಪದ್ಧತಿಯನ್ನು ಹೊಂದಿರುವ ರಾಜ್ಯದ ಕೊಡವ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೊಡವ ಜನಾಂಗದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವುದಾಗಿ ಮಾರ್ಚ್ 18ರಂದು ನಾಪೋಕ್ಲಿನಲ್ಲಿ ನಡೆದ ಕೊಡವ ಕೌಟುಂಬಿಕ ಹಾಕಿ ಟೂರ್ನಮೆಂಟ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿ ಮಾತನಾಡುವ ವೇಳೆ ಕೊಡವ ಜನಾಂಗದ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಭರವಸೆ ನೀಡಿದ್ದು, ಇದೀಗ ಅಧಿಕೃತವಾಗಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದಾರೆ.
ಕೊಡಗರು ಸಮುದಾಯ, ಶ್ರೇಣಿಕ ಹಾಗೂ ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದ್ದು, ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯವರು ಕರ್ನಾಟಕ ರಾಜ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಆದೇಶಿಸಲಾಗಿರುತ್ತದೆ.

ಕೊಡಗು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಜಿಲ್ಲೆಯ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಕೊಡವ ಸಂಘಟನೆಗಳ ಪ್ರಮುಖರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದರು. ಇದೀಗ ನಿಗಮ ಸ್ಥಾಪನೆಯಾಗಿರುವುದಕ್ಕೆ ಶಾಸಕ ಬೋಪಯ್ಯ, ಅಪ್ಪಚ್ಚು ರಂಜನ್ ಸಂತಸ ವ್ಯಕ್ತಪಡಿಸಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಚುನಾವಣೆಯಲ್ಲಿ ವಿವಿಧ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸರ್ಕಾರ ಸಮುದಾಯದ ಬೇಡಿಕೆಗಳನ್ನು ಈಡೇರಿಸುವ ಮೂಲಕ ಮತಗಳನ್ನ ಸೆಳೆಯಲು ಮುಂದಾಗಿದೆ. ಈ ಹಿಂದೆ ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು. ಹಡಪದ ಅಭಿವೃದ್ಧಿ ನಿಗಮವನ್ನು ಸ್ಥಾಪನೆ, ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ನೇಕಾರ ಸಮುದಾಯದ ಅಭಿವೃದ್ದಿ ನಿಗಮ ಸ್ಥಾಪಿಸುವ ಮೂಲಕ ಸಾಲು ಸಾಲು ನಿಗಮ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ.
ಇನ್ನೂ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಪಟ್ಟಿಯಲ್ಲಿರುವ ನೇಕಾರ ಸಮುದಾಯದ 38 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ನೇಕಾರರ ಅಭಿವೃದ್ಧಿ ನಿಗಮ ರಚನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೋಮವಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.












Click it and Unblock the Notifications