ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದ ವಾದವೇನು?

|
Google Oneindia Kannada News

ಬೆಂಗಳೂರು, ನವೆಂಬರ್ 28 : ಮೇಕೆದಾಟು ಯೋಜನೆಗೆ ಕೇಂದ್ರ ಜಲ ಮಂಡಳಿ ಪ್ರಾಥಮಿಕ ಒಪ್ಪಿಗೆ ಕೊಟ್ಟಿದೆ. ಆದರೆ, ತಮಿಳುನಾಡು ಸರ್ಕಾರ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬಿದ್ದರೆ ತಮಿಳುನಾಡಿಗೆ ಹರಿದು ಹೋಗುವ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಂಡು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡುವುದು ಕರ್ನಾಟಕ ಸರ್ಕಾರದ ಯೋಜನೆಯಾಗಿದೆ.

ಮೇಕೆದಾಟು ಯೋಜನಗೆ ಕ್ಯಾತೆ, ಮೋದಿಗೆ ತಮಿಳುನಾಡು ಪತ್ರಮೇಕೆದಾಟು ಯೋಜನಗೆ ಕ್ಯಾತೆ, ಮೋದಿಗೆ ತಮಿಳುನಾಡು ಪತ್ರ

ಜಲಸಂಪನ್ಮೂಲ ಇಲಾಖೆ 66 ಟಿಎಂಸಿ ಅಡಿ ನೀರು ಸಂಗ್ರಹ ಮಾಡಬಹುದು ಎಂದು ಸಾಧ್ಯತಾ ವರದಿಯಲ್ಲಿ ಹೇಳಿದೆ. ಆದರೆ, ಇಷ್ಟು ನೀರು ಸಂಹಗ್ರವಾಗಲು ಅಣೆಕಟ್ಟೆ ನಿರ್ಮಾಣ ಮಾಡಿದರೆ 4500 ಹೆಕ್ಟೇರ್ ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರದ ಒಪ್ಪಿಗೆಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರದ ಒಪ್ಪಿಗೆ

ಅರಣ್ಯ ಮತ್ತು ಪರಿಸರ ಇಲಾಖೆ ಯೋಜನೆಗೆ ಒಪ್ಪವುದು ಕಷ್ಟವಾಗಿದೆ. ಆದ್ದರಿಂದ, 20 ಟಿಎಂಸಿ ಅಡಿ ನೀರು ಸಂಗ್ರಹ ಮಾಡುವ 2 ಅಥವ 3 ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾವನೆಯೂ ಇದೆ. ಯೋಜನೆ ಬಗ್ಗೆ ಸರ್ಕಾರದ ನಿಲುವೇನು? ಚಿತ್ರಗಳಲ್ಲಿ ನೋಡಿ......

ಮೇಕೆದಾಟು ಯೋಜನೆ ವಿವಾದ ಏಕೆ, ಏನು?ಮೇಕೆದಾಟು ಯೋಜನೆ ವಿವಾದ ಏಕೆ, ಏನು?

2013ರಲ್ಲಿ ಯೋಜನೆಯ ರೂಪುರೇಷೆ ಸಿದ್ಧ

2013ರಲ್ಲಿ ಯೋಜನೆಯ ರೂಪುರೇಷೆ ಸಿದ್ಧ

2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೇಲೆ ಮೇಕೆದಾಟು ಯೋಜನೆ ರೂಪುರೇಷೆ ಸಿದ್ಧವಾಯಿತು. ಅಂದಿನ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಯೋಜನೆ ಬಗ್ಗೆ ಆಸಕ್ತಿ ವಹಿಸಿದರು. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಮತ್ತು ಜಲ ಆಯೋಗಕ್ಕೆ ಪತ್ರ ಬರೆದರು.

ತಮಿಳುನಾಡು ವಿರೋಧ

ತಮಿಳುನಾಡು ವಿರೋಧ

ಅಂದಿನ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಒತ್ತಡ ಹಾಕಿದರು. ಆದ್ದರಿಂದ, ಕೇಂದ್ರ ಸರ್ಕಾರ ಯಾವುದೇ ತೀರ್ಮಾನವನ್ನು ಕೈಗೊಂಡಿರಲಿಲ್ಲ.

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಬಳಿಕ ಪ್ರಧಾನಿಗಳನ್ನು ಭೇಟಿ ಮಾಡಿ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿದ್ದರು. ಈಗ ಕೇಂದ್ರ ಜಲ ಆಯೋಗ ಯೋಜನೆಗೆ ಪ್ರಾಥಮಿಕ ಒಪ್ಪಿಗೆ ಕೊಟ್ಟಿದೆ.

ಕರ್ನಾಟಕದ ವಾದ -1

ಕರ್ನಾಟಕದ ವಾದ -1

ಕಾವೇರಿ ನ್ಯಾಯಮಂಡಳಿ ಅಂತಿಮ ತೀರ್ಪಿನಂತೆ ಪ್ರತಿ ವರ್ಷ 177ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು. ವಾಡಿಕೆಯಷ್ಟು ಮಳೆಯಾದಲ್ಲಿ 80 ರಿಂದ 90 ಟಿಎಂಸಿ ಅಡಿಯಷ್ಟು ನೀರು ಹೆಚ್ಚುವರಿಯಾಗಿ ತಮಿಳುನಾಡಿಗೆ ಹರಿದುಹೋಗುತ್ತಿದೆ. ಇದನ್ನು ಸಂಗ್ರಹಿಸುವುದು ಮೇಕೆದಾಟು ಯೋಜನೆ.

ಕರ್ನಾಟಕದ ವಾದ - 2

ಕರ್ನಾಟಕದ ವಾದ - 2

ನ್ಯಾಯಮಂಡಳಿ ಹಂಚಿಕೆ ಮಾಡಿದ ಕರ್ನಾಟಕದ ಪಾಲನ್ನು ಮಾತ್ರ ಬಳಕೆ ಮಾಡುತ್ತಿದ್ದೇವೆ. ತಮಿಳುನಾಡಿನ ಆಕ್ಷೇಪಕ್ಕೆ ಅರ್ಥವೇ ಇಲ್ಲ.ಕಾವೇರಿ ನಿರ್ವಹಣಾ ಪ್ರಾಧಿಕಾರದ ಉಸ್ತುವಾರಿಯು ಜಲ ಆಯೋಗದ ಅಡಿಯಲ್ಲಿಯೇ ಬರುವುದರಿಂದ ಯೋಜನೆ ಜಾರಿಗೊಳಿಸಬಹುದು.

ಕರ್ನಾಟಕದ ವಾದ - 3

ಕರ್ನಾಟಕದ ವಾದ - 3

ಕುಡಿಯುವ ನೀರಿನ ಯೋಜನೆಗೆ ಮೊದಲ ಆದ್ಯತೆ ಎಂಬುದು ಅಂತರಾಷ್ಟ್ರೀಯ ಜಲನೀತಿಯಾಗಿದೆ. ಇದು ಕುಡಿಯುವ ನೀರಿನ ಉದ್ದೇಶದ ಏಕೈಕ ಯೋಜನೆ. ಆದ್ದರಿಂದ, ತಮಿಳುನಾಡು ತಕರಾರು ಮಾಡಬಾರದು.

English summary
Central Water Commission approved for Mekedatu project. Tamil Nadu Chief Minister Edappadi K.Palaniswamy opposed for this. What is the Karnataka Government stand in the project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X