ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್

Written By: Ramesh
Subscribe to Oneindia Kannada

ಬೆಂಗಳೂರು, ಫೆಬ್ರವರಿ. 15 : ಮಹದಾಯಿ ನೀರಿಗಾಗಿ ಹೋರಾಟ ನಡೆಸಿದ ರೈತರ ಮೇಲೆ ಹೂಡಿರುವ 94 ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿದೆ.

ಬುಧವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

karnataka government taken back cases against mahadayi protesters

ಈ ಹಿಂದೆ ಮಹದಾಯಿ ಹೋರಾಟದ ವೇಳೆ ಗಲಭೆ ಪ್ರಕರಣದಲ್ಲಿ ರೈತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು ಎಂದು ಹಲವು ಹೋರಾಟಗಳು ನಡೆದಿದ್ದವು.

ಜುಲೈನಲ್ಲಿ ನಡೆದಿದ್ದ ಮಹದಾಯಿ ಹೋರಾಟದ ಹಿನ್ನಲೆಯಲ್ಲಿ ಗದಗ, ನವಲಗುಂದ, ನರಗುಂದ ಸೇರಿದಂತೆ ಹಲವು ಕಡೆಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಆ ವೇಳೆ ಪ್ರತಿಭನಾಕಾರರು ಪೊಲೀಸ್ ವಾಹನಗಳಿಗೆ ಸೇರಿದಂತೆ ಸರ್ಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ಮನೆ-ಮನೆಗೆ ತೆರಳಿ ಮಹಿಳೆಯರು, ಮುದುಕರು ಎನ್ನದೆ ಕೈಗೆ ಸಿಕ್ಕವರನ್ನು ಹಿಗ್ಗಾಮುಗ್ಗ ಥಳಿಸಿ ಬಂಧಿಸಿದ್ದರು.

ಬಳಿಕ ಜಾಮೀನಿನ ಮೇಲೆ ಬಳ್ಳಾರಿ, ಚಿತ್ರದುರ್ಗಾ ಜೈಲಿನಿಂದ ಹೊರ ಬಂದಿದ್ದರು. ಆ ಎಲ್ಲಾ ಪ್ರಕರಣಗಳನ್ನು ಈಗ ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka government taken back cases against mahadayi protesters.The decision taken in cabinet meeting on February 15.
Please Wait while comments are loading...