ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಹನಗಳ ನಾಮಫಲಕ ಉಲ್ಲಂಘನೆ; ಹೈಕೋರ್ಟ್‌ಗೆ ಸರ್ಕಾರ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಜನವರಿ 29: ನಿಯಮ ಉಲ್ಲಂಘಿಸಿ ಖಾಸಗಿ ವಾಹನಗಳ ಮೇಲೆ ವಿವಿಧ ರೀತಿಯ ನಾಮಫಲಕಗಳನ್ನು ಹಾಕಿದವರ ಮೇಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದು ತಿಳಿದು ಬಂದಿದೆ.

ರಾಜ್ಯಾದ್ಯಂತ 2019 ರ ಏಪ್ರಿಲ್‌ನಿಂದ 2019 ರ ಆಗಸ್ಟ್‌ವರೆಗೆ ನಾಮಫಲಕ ನಿಯಮ ಉಲ್ಲಂಘಿಸಿದ 1,71,157 ಖಾಸಗಿ ವಾಹನಗಳಿಗೆ 12,17,900 ರುಪಾಯಿ ದಂಡ ವಿಧಿಸಿದ್ದೇವೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರಸನ್ನ ದೇಶಪಾಂಡೆ ಅವರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಲಷ್ಕರ್ ಉಗ್ರನಿಗೆ ಜೀವಾವಧಿ ಶಿಕ್ಷೆ ನೀಡಿದ ಕರ್ನಾಟಕ ಹೈಕೋರ್ಟ್‌ ಲಷ್ಕರ್ ಉಗ್ರನಿಗೆ ಜೀವಾವಧಿ ಶಿಕ್ಷೆ ನೀಡಿದ ಕರ್ನಾಟಕ ಹೈಕೋರ್ಟ್‌

ವಾಣಿಜ್ಯ ಹಾಗೂ ಖಾಸಗಿ ವಾಹನಗಳಲ್ಲಿ ವಿವಿಧ ವಿನ್ಯಾಸ, ಗಾತ್ರ, ಚಿನ್ಹೆ, ಸಂಖ್ಯೆ ಹಾಗೂ ಅಕ್ಷರಗಳ ನಾಮಫಲಕ ಅಳವಡಿಸುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಕಳೆದ ವರ್ಷ ಅರ್ಜಿ ಸಲ್ಲಿಸಲಾಗಿತ್ತು. ನಿಯಮ ಉಲ್ಲಂಘಿಸಿ ನಾಮಫಲಕ ಅಳವಡಿಸಿದವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿಕೊಂಡಿದ್ದರು.

Karnataka Government Takes Strict Action Against Vehicle Nameplate Violations

ಅರ್ಜಿಯನ್ನು ಮಾನ್ಯ ಮಾಡಿದ್ದ ನ್ಯಾಯಮೂರ್ತಿ ಆರ್ ದೇವದಾಸ್ ಅವರು, ಯಾರೇ ಆಗಲಿ ತಮ್ಮ ಖಾಸಗಿ ವಾಹನಗಳ ಮೇಲೆ ಸರ್ಕಾರಿ, ಅರೆ ಸರ್ಕಾರಿ, ಸಂಘ ಸಂಸ್ಥೆಗಳ ಬಗೆಗೆ ನಾಮಫಲಕಗಳನ್ನು ಅಳವಡಿಸುವಂತಿಲ್ಲ ಎಂದು ಆದೇಶ ನೀಡಿದ್ದರು. ಅಲ್ಲದೇ ಈ ಬಗ್ಗೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದನ್ನು ವರದಿ ನೀಡುವಂತೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರಸನ್ನ ದೇಶಪಾಂಡೆ ಅವರಿಗೆ ನಿರ್ದೇಶಿಸಿದ್ದರು.

English summary
Karnataka Government Takes Strict Action Against Vehicle Nameplate Violations. 12,17,900 rupees fine collect by government from Vehicle Nameplate Violatiors.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X