ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1786 ಆಶಾ ಕಾರ್ಯಕರ್ತೆಯರ ನೇಮಕಕ್ಕೆ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 04: ಕರ್ನಾಟಕ ಸರ್ಕಾರ 1786 ಆಶಾ ಕಾರ್ಯಕರ್ತೆಯನ್ನು ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ. ಇದಕಾಗಿ ವಾರ್ಷಿಕ 23.58 ಕೋಟಿ. ರೂ. ವೆಚ್ಚವಾಗಲಿದೆ.

Recommended Video

BBMP Election ಮುಂದೂಡಲು ಪಾಲಿಕೆ ಪಾಲಿಟಿಕ್ಸ್!! | Oneindia Kannada

ಪ್ರಸ್ತುತ ರಾಜ್ಯದಲ್ಲಿ 1 ಸಾವಿರ ಜನಸಂಖ್ಯೆಗೆ ಒಬ್ಬರು ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಇರುವ ಆಶಾ ಕಾರ್ಯಕರ್ತೆಯರು 42,524.

 ಮಧ್ಯರಾತ್ರಿ ಆಟೋ ಓಡಿಸಿಕೊಂಡು ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿದ ಆಶಾ ಕಾರ್ಯಕರ್ತೆ ಮಧ್ಯರಾತ್ರಿ ಆಟೋ ಓಡಿಸಿಕೊಂಡು ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿದ ಆಶಾ ಕಾರ್ಯಕರ್ತೆ

ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ನೇಮಕಾತಿಯನ್ನು ಕೊಳಗೇರಿ ಪ್ರದೇಶ ಮತ್ತು ದುರ್ಬಲ ವರ್ಗದ ಜನಸಂಖ್ಯೆ ಇರುವ ಪ್ರದೇಶಕ್ಕೆ ಮಾತ್ರ ಸೀಮಿತಗೊಳಿಸಲಾಗುತ್ತಿದೆ.

12 ಸಾವಿರ ರೂ ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಮನವಿ12 ಸಾವಿರ ರೂ ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಮನವಿ

Karnataka Government To Appoint 1786 Asha Workers

ಸಾಮಾನ್ಯ ಜನರ ಆರೋಗ್ಯ ಸೇವಾ ಪೂರೈಕಾ ಜಾಲವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ 11 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ 500 ಜನಸಂಖ್ಯೆಗೆ ಇಬ್ಬರು ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡುವ ಅವಶ್ಯಕತೆ ಇದೆ.

ಆಶಾ ಕಾರ್ಯಕರ್ತೆಯರ ಮುಷ್ಕರಕ್ಕೆ ಡಿಕೆ ಶಿವಕುಮಾರ್ ಬೆಂಬಲ!ಆಶಾ ಕಾರ್ಯಕರ್ತೆಯರ ಮುಷ್ಕರಕ್ಕೆ ಡಿಕೆ ಶಿವಕುಮಾರ್ ಬೆಂಬಲ!

11 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 2021ನೇ ವರ್ಷಕ್ಕೆ ಅಂದಾಜಿಸಿರುವ ಜನಸಂಖ್ಯೆ 1,90,49,848. ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 11 ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಳಗೇರಿ ಪ್ರದೇಶಗಳಿಗೆ ಮಂಜೂರಾಗಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ 1728.

ರಾಜ್ಯದ 11 ಮಹಾನಗರ ಪಾಲಿಕೆ ವ್ಯಾಪ್ತಿಗೆ ಅಗತ್ಯವಿರುವ ಹೆಚ್ಚುವರಿ ಆಶಾ ಕಾರ್ಯಕರ್ತೆಯರ ಸಂಖ್ಯೆ 1786. ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 4000 ಗೌರವ ಧವನ್ನು ನೀಡುತ್ತದೆ.

English summary
Karnataka government approved to appoint 1786 asha workers for the 11 city corporations in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X