BPL Card: ಬಿಪಿಎಲ್ ಕಾರ್ಡ್‌ಗಳ ರದ್ದಿಗೆ ಮತ್ತೊಂದು ಹಾದಿ ಹಿಡಿದ ರಾಜ್ಯ ಸರ್ಕಾರ
BPL Ration Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯವನ್ನು ಸರ್ಕಾರ ಮುಂದುವರೆಸಿದೆ. ಜೊತೆಗೆ ಅಂತಹವರನ್ನು ಎಪಿಎಲ್‌ಗಡ ವರ್ಗಾವಣೆ ಮಾಡಲಾಗುತ್ತಿದೆ. ಆದರೂ ಸಹ ಇನ್ನೂ ತುಂಬಾ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಇದ್ದು, ಇವರ ಪತ್ತೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಹಾಗಾದ್ರೆ, ಅದು ಹೇಗೆ ಕಾರ್ಯ ನಿರ್ವಹಿಸಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅನರ್ಹರು ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದು ಅರ್ಹರಿಗೆ ಸಿಗಬೇಕಾದ ಅನ್ನವನ್ನು ಕಿತ್ತುಕೊಳ್ಳುವ ಕೆಲಸ ರಾಜ್ಯದಲ್ಲಿ ನಡೆಯುತ್ತಲಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಬಳಿಕ ಎಚ್ಚೆತ್ತ ಸರ್ಕಾರ ಕೆಲ ತಿಂಗಳುಗಳ ಹಿಂದೆಯೇ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದು, ಅನರ್ಹರ ಬಳಿಯ ಪಡಿತರ ಚೀಟಿ ರದ್ದುಪಡಿಸುವ ಕಾರ್ಯಕ್ಕೆ ಮುಂದಾಗಿತ್ತು.

ಆದರೆ, ಆ ವೇಳೆ ಅರ್ಹರ ಬಳಿಯಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸಹ ರದ್ದುಪಡಿಸಲಾಗಿದೆ ಎಂದು ಆರೋಪಿಸಿ ಹಲವು ಜಿಲ್ಲೆಗಳಲ್ಲಿ ಜನರು ಪ್ರತಿಭಟಗನೆಗಳನ್ನು ನಡೆಸಿದ್ದರು. ಬಳಿಕ ಈ ಕಾರ್ಯವನ್ನು ನಿಲ್ಲಿಸಿದ ಸರ್ಕಾರ ಯಾರೆಲ್ಲಾ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿವೆಯೋ ಅಂತಹವರಿಗೆ ಮತ್ತೆ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸಲಾಗುತ್ತದೆ. ಜೊತೆಗೆ ಅವರಿಗೆ ಸಿಗಬೇಕಾದ ಪಡಿತರವನ್ನು ಕೂಡ ನೀಡಲಾಗುತ್ತದೆ ಎಂದು ಹೇಳಿತ್ತು.
ಆಗ ಯಾವುದೇ ಪೂರ್ವ ತಯಾರಿ ಇಲ್ಲದೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದರಿಂದ ರದ್ದು ಕಾರ್ಯವನ್ನು ನಿಲ್ಲಿಸಬೇಕಾಗಿ ಬಂತು. ಆದರೆ, ಇದೀಗ ಕೇಂದ್ರ ಸರ್ಕಾರ ಸೂಚಿಸಿದಂತೆ ಪರಿಶೀಲನೆ ನಡೆಸಿ ಬಳಿಕ ಅನರ್ಹರ ಬಳಿಯ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸುತ್ತಿದ್ದು, ಅಂತಹವರನ್ನು ಎಪಿಎಲ್‌ಗೆ ಸೇರಿಸುವ ಕೆಲಸ ನಡೆಯುತ್ತಿದೆ. ಇದರ ಬೆನ್ನಲ್ಲೇ ಅನರ್ಹ ಪಡಿತರ ಚೀಟಿದಾರರ ಪತ್ತೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರ್ಕಾರ ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ದಾರರನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿಬಿಟ್ಟಿತ್ತು. ಆದರೆ, ಇದೀಗ ಅನರ್ಹರಿಗೆ ಬಿಪಿಎಲ್ ಕಾರ್ಡ್ ಸಿಗದಂತೆ ಹಾಗೂ ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಕೇಂದ್ರ ನೇರ ತೆರಿಗೆ ಮಂಡಳಿ ವರದಿ ಮತ್ತು ಆಹಾರ ಇಲಾಖೆ ತನ್ನದೇ ಆದ ಪರಿಶೀಲನಾ ಮಾರ್ಗದಲ್ಲಿ 10.09 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಅನರ್ಹರು ಪಡೆದಿದ್ದಾರೆ ಎಂಬುದನ್ನು ಖಚಿತಪಡಿಸಿಕೊಂಡಿದೆ. ಬಳಿಕ ಇವುಗಳನ್ನು ಮತ್ತೆ ಪರಿಶೀಲನೆಗೊಳಪಡಿಸಿ ಅನರ್ಹರನ್ನು ಗುರುತಿಸಲು ಆಹಾರ ಇಲಾಖೆ ಮುಂದಾಗಿದೆ.
ಬಿಪಿಎಲ್ ಕಾರ್ಡ್ ಅನ್ನು ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿರುವ ಕುಡುಂಬಗಳಿಗೆ ನೀಡಲಾಗುತ್ತದೆ. ಈ ಕಾರ್ಡ್‌ನಿಂದ ಅವರಿಗೆ ಉಚಿತ ಪಡಿತರ ಸೇರಿಂತೆ, ಹಲವು ಸರ್ಕಾರಿ ಸೌಲಭ್ಯಗಳು ದೊರೆಯಲುವೆ. ಇದು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ವಿವಿಧ ರಾಜ್ಯ ಮತ್ತು ಕೇಂದ್ರ ಕಲ್ಯಾಣ ಯೋಜನೆಗಳಿಗೆ ಅರ್ಹತೆ ನೀಡುತ್ತದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಅದರ ವಿತರಣೆ ಮತ್ತು ಅರ್ಹತೆಯನ್ನು ನಿರ್ವಹಿಸುತ್ತದೆ. ಬಿಪಿಎಲ್ ಕಾರ್ಡ್ ವ್ಯವಸ್ಥೆಯು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಆಹಾರ ಭದ್ರತೆಯನ್ನು ಖಚಿತಪಡಿಸುತ್ತದೆ.
ವಿವಿಧ ಇಲಾಖೆಗಳ ತಂತ್ರಾಂಶಗಳೊಂದಿಗೆ ಆಹಾರ ಇಲಾಖೆಯು ತನ್ನ ದತ್ತಾಂಶಗಳನ್ನು ಸೇರಿಸಿ ಸಂಸ್ಕರಿಸುವ ಕಾರ್ಯದಲ್ಲಿ ನಿರತವಾಗಿದೆ. ಕೇಂದ್ರ ಸಿಟಿಡಿಬಿ ಕಳಿಸಿದ ಅರ್ನಹರ ಪಟ್ಟಿಯನ್ನು ಗಮನಿಸಲಾಗುತ್ತದೆ. ಇದರ ಆಧಾರದ ಮೇಲೆ ಜಿಲ್ಲಾವಾರು ಅನರ್ಹರ ಪಟ್ಟಿ ಸಿದ್ಧಪಡಿಸಿದೆ. ಬಳಿಕ ಜಿಲ್ಲೆಗಳ ಮುಖ್ಯಸ್ಥರಿಗೆ ಕಳುಹಿಸಿ, ಮರು ಪರಿಶೀಲನೆ ಕಾರ್ಯ ಕೂಡ ಜೋರಾಗಿ ನಡೆಯುತ್ತಿದೆ. ಈ ಮೂಲಕ ನೈಜ ಅನರ್ಹರ ಪಟ್ಟಿ ಸಿದ್ಧಡಿಸಿ ಸರಕಾರದ ನಿರ್ದೇಶನದಂತೆ ಎಪಿಎಲ್‌ಗೆ ಪರಿವರ್ತಿಸಲಾಗುವುದು ಎಂದು ಆಹಾರ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಅಂತಾ ವರದಿಯಾಗಿದೆ.
ಆಹಾರ ಇಲಾಖೆಯು ಹೊಂದಿರುವ ತಂತ್ರಾಂಶದ ಜೊತೆ ಸಾರಿಗೆ ಇಲಾಖೆಯ ಆರ್‌ಟಿಒ ತಂತ್ರಾಂಶ, ಕಂದಾಯ ಇಲಾಖೆ ಭೂಮಿ ತಂತ್ರಾಂಶ, ಆರೋಗ್ಯ ಇಲಾಖೆಯ ಇ-ಜನ್ಮ ಸಾಫ್ಟ್‌ವೇರ್, ಬ್ಯಾಂಕ್‌ಗಳ ತಂತ್ರಾಂಶ, ಎಚ್‌ಆರ್‌ಎಂಎಸ್ ತಂತ್ರಾಂಶಗಳನ್ನು ಅನರ್ಹರ ಪತ್ತೆಗೆ ಅಳವಡಿಕೆ ಮಾಡಿಕೊಂಡಿದೆ.
ಈಗಾಗಲೇ ಬಿಪಿಎಲ್ ಮಾನದಂಡಗಳನ್ನು ಮೀರಿಯೂ ಕಾರ್ಡ್ ವಿತರಣೆ ಆಗಿರುವುದರಿಂದ ಅನರ್ಹರ ಪಟ್ಟಿ ದೊಡ್ಡದಾಗಲು ಕಾರಣವಾಗಿದೆ. ಇನ್ಮುಂದೆ ಹೊಸ ಅರ್ಜಿ ಸಲ್ಲಿಕೆ ಸಂದರ್ಭದಲ್ಲೇ ಮಾನದಂಡ ಒಳಗೊಳ್ಳುವ ಅರ್ಜಿ ಮಾತ್ರ ಸ್ವೀಕೃತಿಯಾಗುವಂತೆ ನೋಡಿಕೊಳ್ಳಲು ವಿವಿಧ ಇಲಾಖೆಗಳ ತಂತ್ರಾಂಶ ಒಳಗೊಂಡು ಹೊಸದಾಗಿ ಪೂರ್ಣ ಪ್ರಮಾಣದ ಸಾಫ್ಟ್‌ವೇರ್ ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಆರಂಭದಲ್ಲೇ ಅನರ್ಹರಿಗೆ ಕಡಿವಾಣ ಹಾಕಿದಂತಾಗಲಿದೆ ಎಂದು ಅಂತಾ ಹೇಳಿದ್ಧಾರೆ ಎಂದು ತಿಳಿದುಬಂದಿದೆ. ಹೀಗೆ ಅರ್ಹರ ಅನ್ನ ಕಿತ್ತುಕೊಳ್ಳುತ್ತಿರುವ ಅನರ್ಹರಿಗೆ ಕಡಿವಾಣ ಹಾಕುವ ಮಹತ್ವದ ನಿರ್ಧಾರಕ್ಕೆ ಸರ್ಕಾರ ಮುಂದಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications