BPL Card: ಈ ಬಿಪಿಎಲ್ ಪಡಿತರ ಚೀಟಿದಾರರು ಗಮನಿಸಲೇಬೇಕಾದ ಮಾಹಿತಿ: ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ
BPL Card: ಪಡಿತರ ಚೀಟಿಯಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಹೆಚ್ಚಿನ ಸರ್ಕಾರಿ ಸೌಲಭ್ಯಗಳು ಸಿಗುವುದು ಬಿಪಿಎಲ್ ಕಾರ್ಡುದಾರರಿಗೆ ಮಾತ್ರ. ಇದನ್ನು ಸಾಮಾನ್ಯವಾಗಿ ಬಡತನ ರೇಖೆಗಿಂತ ಕಳೆಗಿರುವವರಿಗೆ ನೀಡಲಾಗುತ್ತದೆ. ಆದರೆ, ಅರ್ಹರಲ್ಲದವರು ಕೂಡ ಈ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಇಂತಹವರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಡುವೆಯೇ ಇದೀಗ ಸಿಎಂ ಸಿದ್ದರಾಯಮ್ಮ ಅವರು ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ.
ರಾಜ್ಯದಲ್ಲಿ ಒಂದೆಡೆ ಅರ್ಹರಲ್ಲದವರು ಅಂದರೆ ಶ್ರೀಮಂತರು ಪಡಿತರ ಚೀಟಿಗಳನ್ನು ಪಡೆದುಕೊಂಡು ದುರುಪಯೋಗಪಡಿಸಿಕೊಂಡರೆ, ಮತ್ತೊಂದೆಡೆ ಅನರ್ಹರು ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಇದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸೂಚನೆ ನೀಡಿದ್ದಾರೆ. ಅದೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

ಸರ್ಕಾರ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದ್ದು, ಇದರಡಿಯಲ್ಲಿ ಉಚಿತ ಅಕ್ಕಿಯನ್ನು ನೀಡಲಾಗುತ್ತಿದೆ. ಅದರಲ್ಲೂ ಬಿಪಿಎಲ್ ಕಾರ್ಡ್‌ದಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಪಡಿತರ ನೀಡಲಾಗುತ್ತಿದೆ. ಜೊತೆಗೆ ಈ ಪಡಿತರ ಚೀಟದಾರರಿಗೆ ಬಡೀ ಪಡಿತರ ಅಷ್ಟೇ ಅಲ್ಲದೆ, ಜೊತೆಗೆ ಅನೇಕ ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಒಂದಷ್ಟು ಸಲಹೆ ಸೂಚನೆಗಳನ್ನು ನೀಡಲಾಗಿದೆ. ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಕೈಗೊಂಡಿದ್ದ ಮಹತ್ವದ ಸಭೆಯಲ್ಲಿ ಸೂಚನೆ ನೀಡಿದರು.
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು. ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಐದು ಗ್ಯಾರಂಟಿ ಯೋಜನೆ ಅಡಿಯಲ್ಲಿ ಇದುವರೆಗೆ 97,813 ಕೋಟಿ ರೂಪಾಯಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು 50,005 ಕೋಟಿ ರೂಪಾಯಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ 18,139 ಕೋಟಿ ರೂಪಾಯಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ 623 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ಪ್ರಯಾಣಿಕರಿಗೆ 13,903 ಕೋಟಿ ರೂಪಾಯಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸಭೆಯಲ್ಲಿ ತಿಳಿಸಿದರು.
ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಐಟಿ ರಿಟರ್ನ್ ಸಲ್ಲಿಕೆ ಮಾಡುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.












Click it and Unblock the Notifications