Ration Card: ಪಡಿತರ ಚೀಟಿ ರದ್ದಿಗೆ ರಾಜ್ಯ ಸರ್ಕಾರ ನಿರ್ಧಾರ.. ಇಲ್ಲಿದೆ ಸಂಪೂರ್ಣ ಮಾಹಿತಿ
Ration Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಈ ನಡುವೆಯೇ ಪಡಿತರ ಚೀಟಿದಾರರಿಗೆ ಸರ್ಕಾರ ಬಿಗ್ ಶಾಕ್‌ವೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅನರ್ಹರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡು ಬಡವರ ಅನ್ನ ಹಾಗೂ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು. ಈ ಹಿಂದೆಯೇ ಇದಕ್ಕೆ ಕಡಿವಾಣ ಹಾಕಲು ರಾಜ್ಯರ ಸರ್ಕಾರ ಮುಂದಾಗಿತ್ತು. ಈ ವೇಳೆ ಅಡೆತಡೆಗಳ ಕಾರಣ ಈ ಮಹತ್ವದ ಕಾರ್ಯವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಆದರೆ, ಇದೀಗ ಪರಿಶೀಲನೆ ನಡೆಸುವ ಮೂಲಕ ಅನರ್ಹರೆಂದು ಕಂಡುಬಂದರೆ ಯಾವುದೇ ಮುಲಾಜಿಲ್ಲದೆ, ಅವರ ಬಳಿಯ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮುಂದುವರೆಸಿದೆ.

ಇದೀಗ ರಾಜ್ಯದಲ್ಲಿ ಈ ನಡುವೆಯೇ ಪಡಿತರ ಚೀಟಿದಾರರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಆಹಾರ ಧಾನ್ಯ ಇಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವವರಿದ್ದಾರೆ. ಇಂತಹದ್ದರ ನಡುವೆಯೇ ಕೆಲವರು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತ ಪಡಿತರ ಪಡೆದು ಅದನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿರುವ ಆರೋಪಗಳು ಕೇಳಿಬಂದಿವೆ. ಇಂತಹವರ ವಿರುದ್ಧ ಆಹಾರ ಇಲಾಖೆ ಕಠಿಣ ಕ್ರಮ ಜರುಗಿಸಲು ನಿರ್ಧರಿಸಿದೆ.
ಒಂದು ವೇಳೆ ಯಾರಾದರೂ ಪಡಿತರ ಚೀಟಿದಾರರು ತಮಗೆ ವಿತರಣೆ ಮಾಡಲಾದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ, ಅಂತಹವರ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿ ಅಡಿಯಲ್ಲಿ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳಿನಿಂದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ.
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ ಪಿ.ಹೆಚ್.ಹೆಚ್. ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಸದಸ್ಯರಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಅಕ್ಟೋಬರ್ ಕೊನೆಯವರೆಗೆ ಪ್ರತಿದಿನ ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದು ಸರಿಯಾದ ಪ್ರಮಾಣದಲ್ಲಿ ಪಡಿತರ ವಿತರಣೆ ಮಾಡಬೇಕು.
ಒಂದು ವೇಳೆ ಇದನ್ನು ಪಾಲನೆ ಮಾಡದಿದ್ದರೆ ಅಥವಾ ಲೋಪ ಕಂಡುಬಂದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಸಂದೇಶವನ್ನು ಆಹಾರ ಇಲಾಖೆ ನೀಡಿದೆ. ಇನ್ನು ರಾಜ್ಯದ ಹಲವೆಡೆ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡಲಾಗುವ ಪಡಿತರವನ್ನು ಹಣಕ್ಕೋಸ್ಕರ ಮಾರಾಟ ಮಾಡುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಅಲ್ಲದೆ, ಕೆಲವೆಡೆ ನ್ಯಾಯಬೆಲೆ ಅಂಗಡಿಗಳು ಬೇಗ ಮುಚ್ಚುತ್ತವೆ ಎನ್ನುವ ಆರೋಪಗಳು ಕೂಡ ಕೇಳಿಬಂದಿವೆ. ಆದ್ದರಿಂದ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ, ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದುಕೊಂಡು ಬಡವರ ಹೊಟ್ಟೆಗೆ ಕಲ್ಲು ಹಾಕುತ್ತಿದ್ದವರ ವಿರುದ್ಧವೂ ಕೂಡ ರಾಜ್ಯ ಸರ್ಕಾರ ಸಮರ ಸಾರಿದೆ. ಬಡವರಿಗೆ ಸಿಗಬೇಕಾದ ಪಡಿತರ ಹಾಗೂ ಸೌಲಭ್ಯಗಳು ಸರಿಯಾಗಿ ಸಿಗಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯವನ್ನು ಮುಂದುವರೆಸಿದೆ.












Click it and Unblock the Notifications