10,187 ಹುದ್ದೆ ಭರ್ತಿ, ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳಿವೆ?

ಬೆಂಗಳೂರು, ನವೆಂಬರ್ 18 : ಕರ್ನಾಟಕ ಸರ್ಕಾರ ಹಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. 10,187 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಶೀಘ್ರದಲ್ಲಿಯೇ ಭರ್ತಿ ಮಾಡಲಾಗುತ್ತದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸಂವಿಧಾನದ ಅನುಚ್ಛೇಧ 371 ಜೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ವೃಂದ ರಚಿಸಿ, ಅಧಿಸೂಚಿಸಿ, ಖಾಲಿ ಹುದ್ದೆಗಳನ್ನು ತುಂಬುವಂತೆ ಸೂಚಿಸಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುಚ್ಛೇಧ 371 (ಜೆ) ಅಡಿಯಲ್ಲಿ ರಚಿಸಲಾದ ಪ್ರಾದೇಶಿಕ ಮಟ್ಟದ, ರಾಜ್ಯ ಮಟ್ಟದ ಹಾಗೂ ರಾಜ್ಯವ್ಯಾಪಿ ಸ್ಥಳೀಯ ವೃಂದದಲ್ಲಿ ಅಪಾರ ಪ್ರಮಾಣದ ಹುದ್ದೆಗಳು ಖಾಲಿ ಇದ್ದು, ವಿವಿಧ ಇಲಾಖೆ ಹಾಗೂ ನೇಮಕಾತಿ ನಡೆಯಲಿದೆ.

ವಿವಿಧ ಇಲಾಖೆ ಹಾಗೂ ನೇಮಕಾತಿ ಪ್ರಾಧಿಕಾರಗಳಲ್ಲಿ ತುಂಬಬೇಕಾದ ನೇರ ನೇಮಕಾತಿ ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸುತ್ತೋಲೆಯಲ್ಲಿ ನೇಮಕಾತಿಗೆ ನಿರ್ದೇಶನ ನೀಡಲಾಗಿದೆ...

ಆಡಳಿತಕ್ಕೆ ತೊಂದರೆ

ಆಡಳಿತಕ್ಕೆ ತೊಂದರೆ

ಸುಗಮ ಆಡಳಿತಕ್ಕೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು ಹಾಗೂ ಕ್ಷೇತ್ರ, ಇಲಾಖೆ, ನಿಗಮ, ಮಂಡಳಿ ಹಾಗೂ ಸ್ವಾಯತ್ತ ಸಂಸ್ಥೆಗಳ ಮುಖ್ಯಸ್ಥರುಗಳು ಆದಷ್ಟು ಬೇಗ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

2008ರ ಆದೇಶ ಪಾಲನೆ

2008ರ ಆದೇಶ ಪಾಲನೆ

ಈಗಾಗಲೇ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುವ ಪ್ರಕರಣಗಳನ್ನು ಆದಷ್ಟು ಶೀಘ್ರವೇ ಪೂರ್ಣಗೊಳಿಸಬೇಕು. ಅನುಚ್ಛೇಧ 371(ಜೆ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ವೃಂದ ರಚಿಸಿ, ಅಧಿಸೂಚಿಸಿ, ಖಾಲಿ ಹುದ್ದೆಗಳನ್ನು ತುಂಬುವಲ್ಲಿ ಅನುಸರಿಸಬೇಕಾದ ವಿಧಾನಗಳನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಗ್ರೂಪ್ ಡಿ ಹಾಗೂ ವಾಹನ ಚಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ನಿಟ್ಟಿನಲ್ಲಿ 2008ರ ಆದೇಶದಲ್ಲಿ ನೀಡಲಾದ ಸೂಚನೆಗಳನ್ನು ಪಾಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?

ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?

ಕೃಷಿ ಇಲಾಖೆ 419, ಪಶುಸಂಗೋಪನೆ ಮತ್ತು ಮೀನುಗಾರಿಕೆ 291, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 386, ಸಹಕಾರ ಇಲಾಖೆ 164, ವಾಣಿಜ್ಯ ಮತ್ತು ಕೈಗಾರಿಕೆ 162, ಇಂಧನ 784, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 12, ಆರ್ಥಿಕ ಇಲಾಖೆ 159, ಆಹಾರ ಮತ್ತು ನಾಗರಿಕ ಸರಬರಾಜು 36, ಅರಣ್ಯ ಇಲಾಖೆ 38, ಆರೋಗ್ಯ ಮತ್ತು ಕುಟುಂಬ ಕಲ್ಯಾಣ 47, ಉನ್ನತ ಶಿಕ್ಷಣ1345, ಒಳಾಡಳಿತ 187, ತೋಟಗಾರಿಕೆ ಮತ್ತು ರೇಷ್ಮೆ 6 ಹುದ್ದೆಗಳು.

ಎಲ್ಲಿ ಎಷ್ಟು ಹುದ್ದೆಗಳು

ಎಲ್ಲಿ ಎಷ್ಟು ಹುದ್ದೆಗಳು

ವಸತಿ ಇಲಾಖೆ 5, ಕಾನೂನು ಇಲಾಖೆ 4, ಕನ್ನಡ ಮತ್ತು ಸಂಸ್ಕೃತಿ ಇಲಾಖೆ 61, ವೈದ್ಯಕೀಯ ಶಿಕ್ಷಣ ಇಲಾಖೆ 823, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಛ್ 361, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ 29, ಲೋಕೋಪಯೋಗಿ 417, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ 41,ಕಂದಾಯ ಇಲಾಖೆ 12, ಕೌಶಲಾಭಿವೃದ್ಧಿ ಇಲಾಖೆ 143, ಸಮಾಜ ಕಲ್ಯಾಣ ಇಲಾಖೆ 326, ಪ್ರವಾಸೋದ್ಯಮ ಇಲಾಖೆ 29, ಸಾರಿಗೆ ಇಲಾಖೆ 29, ನಗರಾಭಿವೃದ್ಧಿಇಲಾಖೆ 3467, ಜಲಸಂಪನ್ಮೂಲ ಇಲಾಖೆ 583, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 79.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+