Get Updates
Get notified of breaking news, exclusive insights, and must-see stories!

ಡಿಸೆಂಬರ್‌ನಲ್ಲಿ ಬೆಳಗಾವಿ ಅಧಿವೇಶನ, ಬರಾಕ್ ಒಬಾಮಾ ಆಗಮನ?

ಬೆಂಗಳೂರು, ಅಕ್ಟೋಬರ್ 24: ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಮಾ ಆಹ್ವಾನಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ವಿಧಾನಮಂಡಲ ಅಧಿವೇಶನಕ್ಕೆ ತಯಾರಿಗಳು ನಡೆದಿದ್ದು, ಅಧಿಕೃತವಾಗಿ ದಿನಾಂಕವನ್ನು ಇನ್ನೂ ಸಹ ನಿಗದಿ ಮಾಡಿಲ್ಲ.

ವಿಧಾನಸೌಧದಲ್ಲಿ ನಡೆದ ಬೆಳಗಾವಿಯ ಕಾಂಗ್ರೆಸ್ ಶತಮಾನೋತ್ಸವ ಸಮಿತಿಯ ಮೊದಲ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಈ ಕುರಿತು ಮಾಹಿತಿ ನೀಡಿದ್ದಾರೆ.

Karnataka Government To Invite Barack Obama To Belagavi Winter Session

ಸಚಿವರು ಮಾತನಾಡಿ, "1924ರಲ್ಲಿ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ" ಎಂದರು.

"ಗಾಂಧೀ ಭಾರತ ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಬೆಳಗಾವಿಯಲ್ಲಿ ಬರುವ ಡಿಸೆಂಬರ್‌ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ" ಎಂದು ಹೇಳಿದರು.

ಬರಾಕ್ ಒಬಮಾಗೆ ಆಹ್ವಾನ: "ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಂಟಿ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರನ್ನು ಜಗತ್ತಿನ ನಾಯಕ ಎಂದು ಕರೆದ ಅಮೆರಿಕಾದ ಮಾಜಿ ಅಧ್ಯಕ್ಷರಾಗಿರುವ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಲು ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಬರಾಕ್ ಒಬಾಮಾ ಅವರಿಗೆ ಪತ್ರ ಬರೆದು ಆಗಮಿಸಲು ಕೋರುವುದಾಗಿ ತಿಳಿಸಿದ್ದಾರೆ" ಎಂದು ಸಚಿವ ಎಚ್. ಕೆ. ಪಾಟೀಲ ತಿಳಿಸಿದರು.

"1924ರ ಡಿಸೆಂಬರ್ 26, 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇದರ ನೆನಪನ್ನು ಮರುಸ್ಥಾಪಿಸಲು ಛಾಯಾಚಿತ್ರ ಪ್ರದರ್ಶನ, ಒಂದು ವರ್ಷ ಕಾಲ ವಸ್ತು ಪ್ರದರ್ಶನ, ಸ್ಮಾರಕ ಸ್ಥಂಭ ಸ್ಥಾಪನೆ ಮತ್ತಿತರ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶಗಳಿವೆ" ಎಂದರು.

"ಗಾಂಧೀಜಿಯವರಿಗೆ ಆಪ್ತವಾದ ಗ್ರಾಮೀಣಾಭಿವೃದ್ಧಿ ಮತ್ತು ಸ್ವರಾಜ್ ಚಟುವಟಿಕೆಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಹಮ್ಮಿಕೊಳ್ಳಲಾಗುವುದು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಗಾಂಧಿ ವಿಚಾರಗಳ ಪರಿಣಿತರ ಸಲಹೆ ಪಡೆದು ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು" ಎಂದು ಎಚ್. ಕೆ. ಪಾಟೀಲ ಹೇಳಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಾತನಾಡಿ, "ಶತಮಾನೋತ್ಸವದ ಅಂಗವಾಗಿ ಒಂದು ವರ್ಷದ ಕಾಲ ಮಹಾತ್ಮ ಗಾಂಧೀಜಿಯವರ ಚಿಂತನೆ, ಪ್ರಯೋಗಗಳನ್ನು ಪುನರ್ ಮನನ ಮಾಡುವಂತೆ ಕಾರ್ಯಕ್ರಮಗಳನ್ನು ರೂಪಿಸಬೇಕು. ಮಕ್ಕಳು, ಯುವಜನರ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ನವೆಂಬರ್ 14 ಜವಾಹರಲಾಲ್ ನೆಹರು ಅವರ ಜನ್ಮದಿನದಂದು ನೆಹರು ಅವರು ಗಾಂಧೀಜಿಯವರಿಂದ ಪ್ರಭಾವಿತರಾಗಿ ದೇಶದ ಅಭಿವೃದ್ಧಿಗೆ ಜಾರಿಗೊಳಿಸಿದ ಕಾರ್ಯಕ್ರಮಗಳನ್ನು ಸ್ಮರಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕೆಂದು" ಸಲಹೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, "ರಾಜ್ಯದಲ್ಲಿ 57 ಸಾವಿರಕ್ಕೂ ಹೆಚ್ಚು ಶಾಲೆಗಳಿವೆ. ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿ ವ್ಯತ್ಯಯವಾಗದಂತೆ ಗಾಂಧೀಜಿಯವರ ಕುರಿತು ಪ್ರಬಂಧ, ಭಾಷಣ, ಚಿತ್ರಕಲೆ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಗಾಂಧೀಜಿಯವರ ಉಕ್ತಿಗಳು ಹಾಗೂ ಅವರು ಹೇಳಿದ ಏಳು ಸಾಮಾಜಿಕ ಪಾತಕಗಳ ಕುರಿತು ಡಿಜಿಟಲ್ ಮುದ್ರಣಗಳನ್ನು ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಅನಾವರಣಗೊಳಿಸಲು ಕ್ರಮ ವಹಿಸಲಾಗುವುದು" ಎಂದರು.

ಇಂಧನ ಸಚಿವ ಕೆ. ಜೆ. ಜಾರ್ಜ್ ಮಾತನಾಡಿ, "ಶತಮಾನೋತ್ಸವ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಆಕರ್ಷಕವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು. ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಪ್ರಮುಖ ಸ್ಥಳಗಳಲ್ಲಿ ಸ್ಥಳೀಯ ಆಡಳಿತ ಹಾಗೂ ಸಂಸ್ಥೆಗಳ ಸಹಯೋಗದಲ್ಲಿ ದೀಪಾಲಂಕಾರ ಮಾಡಲು ಕ್ರಮ ವಹಿಸುವುದಾಗಿ" ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, "ಹೊಸ ತಂತ್ರಜ್ಞಾನದ ಮೂಲಕ ಬೆರಳ ತುದಿಯಲ್ಲಿ ಗಾಂಧೀಜಿಯವರ ಮಹತ್ವ ಕುರಿತ ಮಾಹಿತಿಗಳನ್ನು ಯುವಜನರು ಮತ್ತು ಹೊಸ ಪೀಳಿಗೆಗೆ ಮರುಪರಿಚಯಿಸುವ ಹಾಗೂ ಜಾಗತಿಕವಾಗಿ ಸುಮಾರು 100ಕ್ಕೂ ಹೆಚ್ಚು ದೇಶಗಳಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಮತ್ತು ಸಂಬಂಧಿತ ಸ್ಥಳಗಳ ಕುರಿತ ಮಾಹಿತಿಯನ್ನು ಯುವಜನರು ಮತ್ತು ಹೊಸಪೀಳಿಗೆಗೆ ಪರಿಚಯಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಮೂಲಕ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು" ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+