ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

16 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ಭಾಗ್ಯ!

|
Google Oneindia Kannada News

ಬೆಂಗಳೂರು, ಜ.14 : ಕರ್ನಾಟಕ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಮಾರ್ಚ್ ಅಂತ್ಯದ ವೇಳೆಗೆ ಆಯ್ಕೆ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆ ಇದ್ದು, ಹೈದರಾಬಾದ್ ಕರ್ನಾಟಕ ಭಾಗಕ್ಕೂ ಆದ್ಯತೆ ನೀಡಲಾಗುತ್ತದೆ.

ಗೆಜೆಟೆಡ್ ಪ್ರೊಬೆಷನರಿ ಗ್ರೇಡ್ - 1, ಗ್ರೇಡ್ - 2, ಗ್ರೇಡ್ - 3, ಗ್ರೇಡ್ - 4 ಹುದ್ದೆಗಳನ್ನು ಹೊರತುಪಡಿಸಿ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲು ಮುಂದಾಗಿದೆ. [ಟಿಸಿಎಸ್ : ಕೇವಲ ಶೇ 1 ರಷ್ಟು ಮಾತ್ರ ಉದ್ಯೋಗ ಕಡಿತ!]

vidanasoudha

ಮಾರ್ಚ್ ತಿಂಗಳ ಅಂತ್ಯದಲ್ಲಿ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆ ಸಹ ಅನುಮೋದನೆ ನೀಡಿದೆ. ಈ ಕುರಿತ ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆ ಇದೆ. [ಬಿಬಿಎಂಪಿಯಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ]

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ನಗರಾಭಿವೃದ್ಧಿ, ಕಂದಾಯ, ಲೋಕೋಪಯೋಗಿ, ಸಾರಿಗೆ, ಸಹಕಾರ, ಇಂಧನ, ಅಬಕಾರಿ, ಅರಣ್ಯ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. [ಮಂಡ್ಯದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ]

ಇವುಗಳನ್ನು ಭರ್ತಿ ಮಾಡಲು ನಿರ್ಧರಿಸಿರುವ ಸರ್ಕಾರ ಮೊದಲ ಹಂತದಲ್ಲಿ 16 ಸಾವಿರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಿದೆ. ಹೈದರಾಬಾದ್-ಕರ್ನಾಟಕ ವಿಭಾಗಕ್ಕೆ ಪ್ರತ್ಯೇಕ ಮೀಸಲಾತಿ ನೀಡಬೇಕಾಗಿದ್ದು, ನೇಮಕಾತಿ ಸಂದರ್ಭದಲ್ಲಿ ಹೈ-ಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ.

ಕೆಪಿಎಸ್‌ಸಿ ಮೂಲಕ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕಾಗಿದೆ. ಆದರೆ, ಅಧ್ಯಕ್ಷರು ಮತ್ತು ಸದಸ್ಯರ ಶಿಫಾರಸು ಪಟ್ಟಿ ವಿವಾದದ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ. ಶಿಫಾರಸು ಪಟ್ಟಿಗೆ ಒಪ್ಪಿಗೆ ದೊರೆತರೆ ಗ್ರೇಡ್-1ರಿಂದ ಗ್ರೇಡ್-4 ವರೆಗಿನ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ.

English summary
Karnataka Government decided to recruit over 16,000 posts in various departments. Recruitment notification likely to announced in March 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X