ರಾಜ್ಯಾದ್ಯಂತ 246 ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಒಪ್ಪಿಗೆ

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 11 : ಕರ್ನಾಟಕ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಿದೆ. ರಾಜ್ಯಾದ್ಯಂತ 246 ಕ್ಯಾಂಟೀನ್ ನಿರ್ಮಾಣಗೊಳ್ಳಲಿದ್ದು, 1/1/2018ರಂದು ಉದ್ಘಾಟನೆಗೊಳ್ಳಲಿವೆ.

ಇಂದಿರಾ ಕ್ಯಾಂಟೀನ್ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಮಾರ್ಷಲ್!

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ವಿಸ್ತರಣೆಗೆ ಒಪ್ಪಿಗೆ ಸಿಕ್ಕಿದೆ. ನ.17ರೊಳಗೆ ರಾಜ್ಯಾದ್ಯಂತ ಕ್ಯಾಂಟೀನ್ ನಿರ್ಮಾಣ ಮಾಡಲು ಜಾಗ ಗುರುತಿಸಲಾಗುತ್ತದೆ.

47 ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಇನ್ನೂ ಜಾಗ ಸಿಕ್ಕಿಲ್ಲ

Karnataka government to set 246 Indira Canteen across the state

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, 'ತಾಲೂಕು ಮತ್ತು ಜಿಲ್ಲಾ ಕೇಂದ್ರಗಳು ಸೇರಿ 171 ಸ್ಥಳಗಳಲ್ಲಿ 246 ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ 185 ಕೋಟಿ ರೂ. ವೆಚ್ಚ ಮಾಡಲು ಅನುಮೋದನೆ ಸಿಕ್ಕಿದೆ' ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‌ನಲ್ಲಿ ಇಡ್ಲಿ ಸವಿದ ಜಿ.ಪರಮೇಶ್ವರ

'ಒಂದು ಲಕ್ಷ ಜನರಿಗೆ ಒಂದು ಕ್ಯಾಂಟೀನ್ ಆಧಾರದ ಮೇಲೆ 246 ಕ್ಯಾಂಟೀನ್ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ನವೆಂಬರ್ 17ರೊಳಗೆ ಕ್ಯಾಂಟೀನ್ ನಿರ್ಮಾಣಕ್ಕೆ ಜಾಗ ಗುರುತಿಸಲಾಗುತ್ತದೆ. ಡಿಸೆಂಬರ್ 20ರೊಳಗೆ ಅಡುಗೆ ಮನೆಯ ಪೀಠೋಪಕರಣ ಖರೀದಿ ನಡೆಯಲಿದೆ. 1/1/2018ರಂದು ಕ್ಯಾಂಟೀನ್ ಉದ್ಘಾಟನೆ ಮಾಡಲಾಗುತ್ತದೆ' ಎಂದರು.

ಕರ್ನಾಟಕ ಸರ್ಕಾರ 2017ನೇ ಸಾಲಿನ ಬಜೆಟ್‌ನಲ್ಲಿ ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿತ್ತು. ಕ್ಯಾಂಟೀನ್‌ನಲ್ಲಿ 5 ರೂ.ಗೆ ಉಪಹಾರ, 10 ರೂ.ಗೆ ಊಟ ನೀಡಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Cabinet approves opening of Indira Canteens across the state. 171 places, 246 Canteens at a Cost of 185 core. Canteens operational from 1st Jan 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ