KPSC: ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಹೊಸ ಬದಲಾವಣೆ: ಸಿಎಂ ಮಹತ್ವದ ಮಾಹಿತಿ
ಕರ್ನಾಟಕ ಲೋಕಸೇವಾ ಆಯೋಗವನ್ನು (ಕೆಪಿಎಸ್‌ಸಿ) ಸದೃಢಗೊಳಿಸಲು ಹೆಚ್ಚಿನ ಸಂಪನ್ಮೂಲಗಳು, ಸಿಬ್ಬಂದಿ ಹಾಗೂ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಇತರ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕದ ಪಾಲಿಗೂ ಇದು ಅತ್ಯಂತ ಹೆಮ್ಮೆಯ ಸಂಗತಿ. ಲೋಕಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದಿದ್ದಾರೆ.

ಸಾರ್ವಜನಿಕ ಸೇವೆಯಲ್ಲಿ ಕರ್ನಾಟಕಕ್ಕೆ ಶ್ರೀಮಂತ ಐತಿಹ್ಯವಿದೆ. ಮೈಸೂರು ಸಿವಿಲ್ ಸರ್ವಿಸ್ ಪರೀಕ್ಷೆಗಳನ್ನು ದಿವಾನ್ ಕೆ.ಶೇಷಾದ್ರಿ ಅಯ್ಯರ್ ಅವರು 1892ರಲ್ಲಿಯೇ ಪ್ರಾರಂಭಿಸಿದರು. ಈ ಪ್ರಾರಂಭಿಕ ಹೆಜ್ಜೆಯು ವಿಶಿಷ್ಟ ಆಡಳಿತಗಾರರ ಪಡೆಯನ್ನು ನೇಮಕಾತಿ ಮಾಡಿಕೊಳ್ಳಲು ಭದ್ರ ಬುನಾದಿಯನ್ನು ಹಾಕಿದ್ದು, ಕರ್ನಾಟಕ ಈ ಪರಂಪರೆಯನ್ನು ಹೆಮ್ಮೆಯಿಂದ ಮುಂದುವರೆಸಿಕೊಂಡು ಬಂದಿದೆ ಎಂದು ಮೆಲುಕು ಹಾಕಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗವು 1951ರಲ್ಲಿ ಸಂವಿಧಾನಾತ್ಮಕ ಸಂಸ್ಥೆಯಾಗಿ ಸ್ಥಾಪನೆಯಾಗಿದ್ದು, ನಂತರದಲ್ಲಿ ಸಾಕಷ್ಟು ವಿಕಾಸಗೊಂಡಿದೆ. ಅಲ್ಲದೆ ದಕ್ಷತೆ ಮತ್ತು ಪಾರದರ್ಶಕತೆಗೆ ಗುರುತಾಗಿದೆ. ಪಿ.ಸಿ.ಹೋಟಾ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ನಮ್ಮ ಸರ್ಕಾರ ಕೆಲವು ಪ್ರಮುಖ ಸುಧಾರಣೆಗಳನ್ನು ಜಾರಿಮಾಡಿದೆ ಎಂದು ಹೇಳಿದ್ದಾರೆ.

ಗ್ರೂಪ್ ಸಿ ಹುದ್ದೆಗಳಿಗೆ ಸಂದರ್ಶನವನ್ನು ರದ್ದುಗೊಳಿಸಲಾಗಿದೆ. ಗ್ರೂಪ್ ಬಿ ಹುದ್ದೆಗಳಿಗೆ ಹಾಗೂ ಗೆಜೆಟೆಡ್ ಪ್ರೋಬೇಶನರ್ಸ್ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕಗಳನ್ನು ಕಡಿತಗೊಳಿಸಲಾಗಿದೆ. ನ್ಯಾಯಯುತ ಹಾಗೂ ಪಾರದರ್ಶಕತೆಯನ್ನು ಪ್ರೋತ್ಸಾಹಿಸಲು ನೇಮಕಾತಿ ಮಾದರಿಗಳನ್ನು ಸರಳೀಕೃತಗೊಳಿಸಿದೆ ಎಂದಿದ್ದಾರೆ.
ಕರ್ನಾಟಕ ಲೋಕ ಸೇವಾ ಆಯೋಗ (ನೇರ ನೇಮಕಾತಿ) ನಿಯಮಗಳು 2021 ನ್ನು ಪರಿಚಯಿಸಿದ್ದು, ಇದು ವ್ಯಕ್ತಿತ್ವ ಪರೀಕ್ಷೆಯ ಮೌಲ್ಯಕ್ಕಿಂತ, ಪ್ರಮಾಣೀಕರಿಸಿದ ಪ್ರಕ್ರಿಯೆಗಳಿಗೆ ಒತ್ತು ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆಗಳಂತಹ ಸವಾಲುಗಳನ್ನು ಎದುರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಪಾರದರ್ಶಕತೆಯನ್ನು ಖಾತ್ರಿಗೊಳಿಸಲು ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಪುನಃ ಗಳಿಸಲು ದೃಢವಾದ ಕ್ರಮಗಳನ್ನು ಅನುಷ್ಠಾನಗೊಳಿಸುವುದು ಅತ್ಯಗತ್ಯ ಎಂದು ಸಿಎಂ ಹೇಳಿದ್ದಾರೆ.

ಹೆಚ್ಚುತ್ತಿರುವ ನಿರುದ್ಯೋಗವು ನ್ಯಾಯಯುತ ಹಾಗೂ ತ್ವರಿತ ನೇಮಕಾತಿ ಪ್ರಕ್ರಿಯೆಗಳನ್ನು ಬೇಡುತ್ತದೆ. ಯುಪಿಎಸ್‌ಸಿಯಲ್ಲಿರುವಂತೆ ಸಕಾಲಕ್ಕೆ ಫಲಿತಾಂಶ ಪ್ರಕಟಿಸುವುದು ಮಾದರಿಯಾಗಬಹುದು. ಲೋಕಸೇವಾ ಆಯೋಗಗಳ ವಿರುದ್ಧ ಇರುವ ಬ್ಯಾಕ್‌ಲಾಗ್ ಪ್ರಕರಣಗಳನ್ನು ಬಗೆಹರಿಸುವುದು ದಕ್ಷತೆಯ ಸುಧಾರಣೆ ಹಾಗೂ ಸಾರ್ವಜನಿಕರ ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳಲು ಮುಖ್ಯ ಎಂದಿದ್ದಾರೆ.
ಮಹಿಳೆಯರು, ಯುವಜನರು ಹಾಗೂ ನಿರ್ಲಕ್ಷಿತ ವರ್ಗಗಳೂ ಸೇರಿದಂತೆ ಎಲ್ಲರನ್ನೂ ಒಳಗೊಂಡಂತೆ ಅವಕಾಶಗಳನ್ನು ನೀಡುವುದು ಸರ್ಕಾರದ ಆಶಯವಾಗಿದೆ. ಸ್ವತಂತ್ರ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಸೃಜಿಸುವ ಮೂಲಕ ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾದ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ನಂಬಿಕೆ ಇರಿಸಿದೆ. ಜನಕೇಂದ್ರಿತವಾಗಿದ್ದುಕೊಂಡು ಭವಿಷ್ಯದ ಸವಾಲುಗಳನ್ನು ಎದುರಿಸುವಂತಹ ಆಡಳಿತ ವೈಖರಿಯನ್ನು ಲೋಕಸೇವಾ ಆಯೋಗ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಉತ್ತಮ ಆಡಳಿತಕ್ಕಾಗಿ ಸರ್ಕಾರಿ ನೌಕರರಿಗೆ ಗುಣಮಟ್ಟದ ಸೇವೆಗೆ ತರಬೇತಿ ನೀಡುವುದು ಅವಶ್ಯಕ. ಈ ದಿಸೆಯಲ್ಲಿ ಇಂದು ನಡೆಯುತ್ತಿರುವ ಸಮ್ಮೇಳನ, ಅರ್ಥಪೂರ್ಣ ಚರ್ಚೆ, ಸಹಯೋಗ ಹಾಗೂ ವಿಚಾರ ವಿನಿಯಮಗಳ ಮೂಲಕ ಶಕ್ತಿ ತುಂಬಲಿದೆ. ನಾಗರಿಕ ಸೇವಾ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನಿಷ್ಠೆ ಹಾಗೂ ಹೊಣೆಗಾರಿಕೆಯನ್ನು ಕಾಪಾಡುವಲ್ಲಿ ಕರ್ನಾಟಕದ ಬದ್ಧತೆಯನ್ನು ನಿರೂಪಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications