ಹತ್ತು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ
ಬೆಂಗಳೂರು, ಜನವರಿ 16: ಕೆಎಎಸ್ ಹಿರಿಯ ಮತ್ತು ಕಿರಿಯ ಶ್ರೇಣಿಯ ಹತ್ತು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಈ ವರ್ಗಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ವಿ. ಶ್ರೀನಿವಾಸನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಸಿದ್ದೇಶ್ವರ ಎನ್ ಅವರನ್ನು ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
* ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತತ್ಉ ಹಣಕಾಸು ನಿಗಮ ನಿಯಮಿತದ (ಕೆಯುಐಡಿಎಫ್‌ಸಿ) ಪ್ರಧಾನ ವ್ಯವಸ್ಥಾಪಕರಾದ ಸೈಯಿದಾ ಆಯಿಷಾ ಅವರನ್ನು ಕೊಪ್ಪಳ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ದಂಡಾಧಿಕಾರಿಯನ್ನಾಗಿ ನೇಮಿಸಲಾಗಿದೆ.
* ಧಾರವಾಡ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ, ಕಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಜಯಶ್ರೀ ಶಿಂತ್ರಿ ಅವರನ್ನು ಬೆಳಗಾವಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪ ಆಡಳಿತಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ.

* ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಶಂಕರಗೌಡ ಎಸ್. ಸೋಮನಾಳ್ ಅವರನ್ನು ಯಾದಗಿರಿ ಉಪ ವಿಭಾಗದ ಡಾ.ಬಿ.ಎಸ್. ಮಂಜುನಾಥಸ್ವಾಮಿ ಅವರ ಜಾಗಕ್ಕೆ ಉಪ ವಿಭಾಗಾಧಿಕಾರಿಯನ್ನಾಗಿ ನೇಮಿಸಲಾಗಿದೆ.
* ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಂದಾಯ ಉಪ ಆಯುಕ್ತ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರನ್ನು ಕೊಪ್ಪಳ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರ ಹುದ್ದೆಗೆ ನಿಯೋಜಿಸಲಾಗಿತ್ತು. ಆ ವರ್ಗಾವಣೆ ಆದೇಶವನ್ನು ಮಾರ್ಪಡಿಸಿ ಹರಪನಹಳ್ಳಿ ಉಪವಿಭಾಗದ ಪಾಂಡ್ವೆ ರಾಹುಲ್ ತುಕಾರಾಮ್ ಅವರ ಸ್ಥಾನಕ್ಕೆ ಉಪವಿಭಾಗಾಧಿಕಾರಿಯನ್ನಾಗಿ ನೇಮಿಸಲಾಗಿದೆ.
* ಕಲಬುರಗಿ ಮಹಾನಗರ ಪಾಲಿಕೆಯ ಕೌನ್ಸಿಲ್ ಸೆಕ್ರೆಟರಿ ಹರ್ಷ ಎಸ್. ಶೆಟ್ಟಿ ಅವರನ್ನು ಬೆಳಗಾವಿ ಉಪ ವಿಭಾಗಾಧಿಕಾರಿಯನ್ನಾಗಿ ಕವಿತಾ ಯೋಗಪ್ಪನವರ್ ಅವರ ಸ್ಥಾನಕ್ಕೆ ವರ್ಗಾಯಿಸಲಾಗಿದೆ.
* ಆಲಮಟ್ಟಿಯ ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ ವಸತಿ ಅಧಿಕಾರಿ ಮಲ್ಲಿಕಾರ್ಜುಮ ವೈ.ಎಸ್. ಅವರನ್ನು ಬಾಗಲಕೋಟೆ ಜಿಲ್ಲೆ, ಬೀಳಗಿಯ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯನ್ನಾಗಿ ನೇಮಿಸಲಾಗಿದೆ.
* ಧಾರವಾಡದ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿಯನ್ನಾಗಿ ವರ್ಗಾವಣೆಯಾಗಿದ್ದ ಸಿದ್ದೇಶ್ವರ ಎನ್ ಅವರ ಆದೇಶವನ್ನು ಮಾರ್ಪಡಿಸಿ ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ.
* ಸ್ಥಳ ನಿರೀಕ್ಷಣೆಯಲ್ಲಿದ್ದ ಕಿರಿಯ ಶ್ರೇಣಿಯ ಅಧಿಕಾರಿ ಸಿ.ಎನ್. ಮಂಜುನಾಥ್ ಅವರನ್ನು ಹೆಬ್ಬಾಳದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯನ್ನಾಗಿ ಡಿ.ಬಿ. ನಟೇಶ್ ಅವರ ಸ್ಥಾನಕ್ಕೆ ನೇಮಿಸಲಾಗಿದೆ.
* ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪರೀಕ್ಷಾರ್ಥಿ ಮುಖ್ಯ ಆಡಳಿತಾಧಿಕಾರಿ ರಾಮಚಂದ್ರ ಗಡದೆ ಅವರನ್ನು ಕಲಬುರಗಿಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ.
* ಹಟ್ಟಿ ಚಿನ್ನದ ಗಣಿ ಕಂಪೆನಿಯ ಮುಖ್ಯ ಆಡಳಿತಾಧಿಕಾರಿ ಡಾ. ಜಗದೀಶ್ ಕೆ. ನಾಯಕ್ ಅವರ ದಕ್ಷಿಣ ವಲಯ ಬಿಬಿಎಂಪಿ ಜಂಟಿ ಆಯುಕ್ತರ ಹುದ್ದೆಗೆ ನಿಯೋಜಿಸಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಲಾಗಿದೆ. ಸಹಕಾರ ಇಲಾಖೆಯ ಅಧಿಕಾರಿ ಡಾ. ಟಿ.ಎಚ್. ವಿಶ್ವನಾಥ್ ಅವರನ್ನು ಬಿಬಿಎಂಪಿ ಜಂಟಿ ಆಯುಕ್ತರನ್ನಾಗಿಯೇ ಮುಂದುವರಿಸಿ ಆದೇಶಿಸಲಾಗಿದೆ.











Click it and Unblock the Notifications