ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ಹಾಸನಕ್ಕೆ ಹೊಸ ಡಿಸಿ

ಬೆಂಗಳೂರು, ಆಗಸ್ಟ್ 27 : ಕರ್ನಾಟಕ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಹಾಸನ ಜಿಲ್ಲಾಧಿಕಾರಿ ಅಕ್ರಮ್ ಪಾಷ ಸೇರಿದಂತೆ ಮೂವರು ವರ್ಗಾವಣೆಗೊಂಡಿದ್ದಾರೆ.

ಮಂಗಳವಾರ ಸಂಜೆ ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕರಾಗಿದ್ದ ಆರ್. ಗಿರೀಶ್ ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಅಕ್ರಮ್ ಪಾಷರನ್ನು ಹಾಸನ ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆ ಮಾಡಲಾಗಿದೆ. ಆದರೆ, ಇಂದಿನ ಆದೇಶದಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ. 2019ರ ಫೆಬ್ರವರಿಯಲ್ಲಿ ಅಕ್ರಮ್ ಪಾಷಾ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

Karnataka Government Transferred 3 IAS Officers

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕೆ. ಎಸ್. ರಮೇಶ್‌ರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿದ್ದ ಆರ್. ಲತಾರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+