ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ಹಾಸನಕ್ಕೆ ಹೊಸ ಡಿಸಿ

|
Google Oneindia Kannada News

ಬೆಂಗಳೂರು, ಆಗಸ್ಟ್ 27 : ಕರ್ನಾಟಕ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಹಾಸನ ಜಿಲ್ಲಾಧಿಕಾರಿ ಅಕ್ರಮ್ ಪಾಷ ಸೇರಿದಂತೆ ಮೂವರು ವರ್ಗಾವಣೆಗೊಂಡಿದ್ದಾರೆ.

ಮಂಗಳವಾರ ಸಂಜೆ ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕರಾಗಿದ್ದ ಆರ್. ಗಿರೀಶ್ ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಯಡಿಯೂರಪ್ಪ ಅಧಿಕಾರಕ್ಕೆ ಬಂದು ತಿಂಗಳಲ್ಲಿ 47 ಐಎಎಸ್ ಅಧಿಕಾರಿಗಳ ವರ್ಗಾವಣೆಯಡಿಯೂರಪ್ಪ ಅಧಿಕಾರಕ್ಕೆ ಬಂದು ತಿಂಗಳಲ್ಲಿ 47 ಐಎಎಸ್ ಅಧಿಕಾರಿಗಳ ವರ್ಗಾವಣೆ

ಅಕ್ರಮ್ ಪಾಷರನ್ನು ಹಾಸನ ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆ ಮಾಡಲಾಗಿದೆ. ಆದರೆ, ಇಂದಿನ ಆದೇಶದಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ. 2019ರ ಫೆಬ್ರವರಿಯಲ್ಲಿ ಅಕ್ರಮ್ ಪಾಷಾ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

ಶಿವಮೊಗ್ಗ ಜನತೆಗೆ ಭಾವುಕ ವಿದಾಯ ಪತ್ರ ಬರೆದ ಕೆ. ದಯಾನಂದಶಿವಮೊಗ್ಗ ಜನತೆಗೆ ಭಾವುಕ ವಿದಾಯ ಪತ್ರ ಬರೆದ ಕೆ. ದಯಾನಂದ

Karnataka Government Transferred 3 IAS Officers

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕೆ. ಎಸ್. ರಮೇಶ್‌ರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಸರ್ಕಾರಿ ಸೇವೆಗೆ ಮರಳಿದ ಐಎಎಸ್ ಅಧಿಕಾರಿ ವಿ.ರಶ್ಮಿ ಮಹೇಶ್ಸರ್ಕಾರಿ ಸೇವೆಗೆ ಮರಳಿದ ಐಎಎಸ್ ಅಧಿಕಾರಿ ವಿ.ರಶ್ಮಿ ಮಹೇಶ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿದ್ದ ಆರ್. ಲತಾರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

English summary
Karnataka government on August 27, 2019 Transferred 3 IAS Officers including Akram Pasha Deputy Commissioner of Hassan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X