ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ : 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

|
Google Oneindia Kannada News

ಬೆಂಗಳೂರು, ಜೂನ್ 07 : ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಿದೆ. 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಶುಕ್ರವಾರ ಕರ್ನಾಟಕ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಹಲವು ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಸರ್ಕಾರಿ ಸೇವೆಗೆ ಮರಳಿದ ಐಎಎಸ್ ಅಧಿಕಾರಿ ವಿ.ರಶ್ಮಿ ಮಹೇಶ್ಸರ್ಕಾರಿ ಸೇವೆಗೆ ಮರಳಿದ ಐಎಎಸ್ ಅಧಿಕಾರಿ ವಿ.ರಶ್ಮಿ ಮಹೇಶ್

Karnataka government transferred 9 IPS officer

ಈ ವಾರ ಕೆಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಶುಕ್ರವಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಇಲ್ಲಿದೆ...

ಚುನಾವಣೆ ಮುಗಿಯುತ್ತಲೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆಚುನಾವಣೆ ಮುಗಿಯುತ್ತಲೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

* ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚೇತನ್ ಸಿಂಗ್ ರಾಥೋಡ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಎಸಿ ಕಾರು ಬಿಟ್ಟು ಬಸ್ ಏರಿ ಕಚೇರಿಗೆ ಬಂದ ಉಡುಪಿ ಜಿಲ್ಲಾಧಿಕಾರಿಎಸಿ ಕಾರು ಬಿಟ್ಟು ಬಸ್ ಏರಿ ಕಚೇರಿಗೆ ಬಂದ ಉಡುಪಿ ಜಿಲ್ಲಾಧಿಕಾರಿ

* ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ. ಡಿಸಿಪಿಯಾಗಿದ್ದ ಕೆ.ಅಣ್ಣಾಮಲೈ ಅವರನ್ನು ವರ್ಗಾವಣೆ ಮಾಡಲಾಗಿದೆ.

* ರಾಮನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಮೇಶ್ ಅವರನ್ನು ಮುಂದಿನ ಆದೇಶದ ತನಕ ಬಿಡಿಎನ ವಿಶೇಷ ಟಾಸ್ಕ್ ಫೋರ್ಸ್‌ ಎಸ್‌ಪಿಯಾಗಿ ನೇಮಿಸಲಾಗಿದೆ.

* ಕೆಜಿಎಫ್ ಎಸ್‌ಪಿಯಾಗಿದ್ದ ಕಾರ್ತಿಕ್ ರೆಡ್ಡಿ ಅವರನ್ನು ಕೋಲಾರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

* ಚಾಮರಾಜನರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ವೈರ್‌ ಲೆಸ್ ವಿಭಾಗದ ಎಸ್‌ಪಿಯಾಗಿ ನೇಮಿಸಲಾಗಿದೆ.

* ರಾಯಚೂರು ಎಸ್‌ಪಿ ಡಿ.ಕಿಶೋರ್ ಬಾಬು ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆತಂರಿಕ ಭದ್ರತೆ ವಿಭಾಗ, ಬೆಂಗಳೂರು ಎಸ್‌ಪಿಯಾಗಿ ನೇಮಿಸಲಾಗಿದೆ.

* ಮಂಗಳೂರು ಡಿಸಿಆರ್‌ಇ ಎಸ್‌ಪಿಯಾಗಿದ್ದ ಸಿ.ಬಿ.ವೇದಮೂರ್ತಿ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

* ಎ.ಎನ್.ಪ್ರಕಾಶ್ ಗೌಡ ಅವರನ್ನು ಮುಂದಿನ ಆದೇಶದ ತನಕ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

* ಬೆಂಗಳೂರು ಸಿಐಡಿಯ ಎಸ್‌ಪಿ ಎಚ್‌.ಡಿ.ಆನಂದ್ ಕುಮಾರ್ ಅವರನ್ನು ಚಾಮರಾಜನರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

English summary
9 IPS officers were transferred in Karnataka on June 7, 2019. IPS officer transferred after lok sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X