ಒಂಭತ್ತು ಐಎಎಸ್ ಅಧಿಕಾರಿಗಳ ವರ್ಗಾವಣೆ, ಎಲ್ಲಿಗೆ ಯಾರು?

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 20 : ಒಂಭತ್ತು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಅಧಿಕಾರಿಗಳು ಆದೇಶ ಕೈ ಸೇರಿದ ತಕ್ಷಣ ತಮ್ಮ ಸ್ಥಳಕ್ಕೆ ತೆರಳಿ ಕಾರ್ಯ ನಿರ್ವಹಿಸಬೇಕೆಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ, ಕರ್ನಾಟಕ ಮೇಲ್ಮನವಿ ನ್ಯಾಯಮೂರ್ತಿಯಾಗಿದ್ದ ಕಪಿಲ್ ಮೋಹನ್ ಅವರನ್ನು ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದಾರೆ.

Karnataka government transferred nine IAS officers on April 20th

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಯಾಗಿದ್ದ ಹರ್ಷಗುಪ್ತರನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರಾಗಿ ವರ್ಗಾಹಿಸಲಾಗಿದೆ. ಕಲಬುರಗಿ ಪ್ರಾದೇಶಿಕ ಆಯುಕ್ತರಾಗಿದ್ದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿಯನ್ನಾಗಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಕಮೀಷನರ್ ಆಗಿದ್ದ ಪಾಂಡುರಂಗ ಬೊಮ್ಮಯಿ ನಾಯ್ಕ್ ಅವರನ್ನು ಹುಬ್ಬಳ್ಳಿಯ NWKRTC ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ

ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿನೋತ್ ಪ್ರಿಯಾ ಅವರನ್ನು ಬೆಂಗಳೂರಿನ ವಿಶೇಷ ಡೆಪ್ಯುಟಿ ಕಮಿಷನರ್ -1 ಆಗಿ ವರ್ಗಾಯಿಸಲಾಗಿದೆ.

ವೆಂಕಟೇಶ್ ಟಿ ಅವನ್ನು ವಾಣಿಜ್ಯ ಮತ್ತು ಕೈಗಾರಿಕಾ ಸೇವೆಗಳ ಇಲಾಖೆಯಿಂದ ಹಿಂತೆಗೆದುಕೊಳ್ಳಲಾಗಿದೆ. ಮತ್ತು ಕರ್ನಾಟಕ ನ್ಯಾಯಮಂಡಳಿ ಮೇಲ್ಮನವಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.

ಬೆಳಗಾವಿ ವ್ಯವಸ್ಥಾಪಕ ನಿರ್ದೇಶಕ, ಹಾಗೂ ವಾಹನಗಳ ಕಮಿಷನರ್ ಆಗಿದ್ದ ಮೂಲೈ ಮಹಿಲಾನ್ ಎಂ ಪಿ ಅವರನ್ನು ಶಿವಮೊಗ್ಗ ಸಿಟಿ ಕಾರ್ಪೊರೇಶನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ವರ್ಗಾಹಿಸಲಾಗಿದೆ.

ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಕೆ. ದಯಾನಂದ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Karnataka state government on Thursday transferred nine IAS officers with immediate effect.
Please Wait while comments are loading...