IAS Officers Transfer: ರಾಜ್ಯ ಸರ್ಕಾರದಿಂದ 22 ಮಂದಿ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
IAS Officers Transfer: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ಹೊಸ ವರ್ಷದ ಮುನ್ನ ದಿನವೇ ಅಂದರೆ ಡಿಸೆಂಬರ್ 31ರಂದು ದಿಢೀರ್ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸೇರಿದಂತೆ 22 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ, ಯಾರನ್ನು ಎಲ್ಲಿಗೆ, ಯಾವ ಹುದ್ದೆಗೆ ವರ್ಗಾಹಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪ್ರಮುಖವಾಗಿ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಸೇರಿ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಹೊಸ ಜಿಲ್ಲಾಧಿಕಾರಿಗಳ ನೇಮಕ ಮಾಡಲಾಗಿದೆ. ಶಿವಮೊಗ್ಗ, ತುಮಕೂರಿಗೆ ಇನ್ನೂ ನಿಯೋಜನೆ ಮಾಡಿಲ್ಲ.

12 ಐಎಎಸ್ ಅಧಿಕಾರಿಗಳ ಹುದ್ದೆಗಳಲ್ಲಿ ಬದಲಾವಣೆ: ಒಟ್ಟು 12 ಐಎಎಸ್ ಅಧಿಕಾರಿಗಳ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆಗಿದ್ದ ರವೀಂದ್ರ ಪಿ.ಎನ್.ಅವರನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ತುಮಕೂರು ಜಿಲ್ಲಾ ಪಂಚಾಯತಿ ಸಿಇಒ ಆಗಿದ್ದ ಪ್ರಭು ಜಿ. ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಯಾರು ಎಲ್ಲಿಗೆ ವರ್ಗಾವಣೆ?: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆಗಿದ್ದ ಮೀನಾ ನಾಗರಾಜ್ ಅವರನ್ನು ಕಂದಾಯ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾದ್ದು, ಅವರ ಸ್ಥಾನಕ್ಕೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ನಾಗರಾಜ ಎನ್.ಎಂ. ಅವರನ್ನು ವರ್ಗಾಯಿಸಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಶಿಲ್ಪಾ ನಾಗ್ ಅವರನ್ನು ಪಶುಸಂಗೋಪನಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಯಾರು ಎಲ್ಲಿಂದ ಎಲ್ಲಿಗೆ ವರ್ಗಾವಣೆ?
* ಡಾ. ಅರುಂಧತಿ ಚಂದ್ರಶೇಖರ್: ಆಯುಕ್ತರು, ಪಂಚಾಯತ್ ರಾಜ್ಯ- ಆಯುಕ್ತರು, ಗ್ರಾಮೀಣಾಭಿವೃದ್ಧಿ ಇಲಾಖೆ (ಸಮವರ್ತಿ ಪ್ರಭಾರ)
* ರವೀಂದ್ರ ಪಿ.ಎನ್: ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ- ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು
* ಮೀನಾ ನಾಗರಾಜ್ ಸಿ.ಎನ್: ಜಿಲ್ಲಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ- ಆಯುಕ್ತರು, ಕಂದಾಯ ಇಲಾಖೆ, ಬೆಂಗಳೂರು
* ರವಿ ಕುಮಾರ್ ಎಂ.ಆರ್: ಹೆಚ್ಚುವರಿ ನಿರ್ದೇಶಕರು, ಆರ್ಥಿಕ ನೀತಿ ಸಂಸ್ಥೆ- ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ
* ಪಾಟೀಲ್ ಯಲಗೌಡ ಶಿವನಗೌಡ: ಆಯುಕ್ತರು, ಕೃಷಿ ಇಲಾಖೆ - ನಿರ್ದೇಶಕರು, ತೋಟಗಾರಿಕೆ ಇಲಾಖೆ
* ಸ್ನೇಹಲ್ ಆರ್: ಅಭಿಯಾನ ನಿರ್ದೇಶಕರು, NLM - ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ
* ಶುಭ ಕಲ್ಯಾಣ್: ಜಿಲ್ಲಾಧಿಕಾರಿ, ತುಮಕೂರು - ಜಿಲ್ಲಾಧಿಕಾರಿ ಜೊತೆ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (CEO), ಜಿಲ್ಲಾ ಪಂಚಾಯತ್ (ಹೆಚ್ಚುವರಿ ಹುದ್ದೆ)
* ಶಿಲ್ಪಾ ನಾಗ್ ಸಿ.ಟಿ: ಜಿಲ್ಲಾಧಿಕಾರಿ, ಚಾಮರಾಜನಗರ ಜಿಲ್ಲೆ- ಆಯುಕ್ತರು, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಅಭಿವೃದ್ಧಿ ಆಯುಕ್ತರು
* ಗುರುದತ್ ಹೆಗಡೆ: ಜಿಲ್ಲಾಧಿಕಾರಿ, ಶಿವಮೊಗ್ಗ ಜಿಲ್ಲೆ - ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ MD, KSMSCL
* ಪ್ರಭು ಜಿ: ಸಿಇಒ, ಜಿಲ್ಲಾ ಪಂಚಾಯತ್, ತುಮಕೂರು - ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ
* ನಾಗರಾಜ ಎನ್.ಎಂ: ಎಂಡಿ, ಕೌಶಲ್ಯಾಭಿವೃದ್ಧಿ ನಿಗಮ - ಜಿಲ್ಲಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ
* ಶ್ರೀರೂಪಾ: ಆಯುಕ್ತರು, ಪಶುಸಂಗೋಪನಾ ಇಲಾಖೆ - ಜಿಲ್ಲಾಧಿಕಾರಿ, ಚಾಮರಾಜನಗರ ಜಿಲ್ಲೆ
ಎಷ್ಟು ಮಂದಿಗೆ ಕಾಯ್ದಿರಿಸಲಾಗಿದೆ?: ವರ್ಗಾವಣೆ ಮಾಡಲಾದ ಇನ್ನೂ 10 ಮಂದಿ ಅಧಿಕಾರಿಗಳಿಗೆ ಯಾವುದೇ ಹುದ್ದೆಯನ್ನು ನಿಯೋಜನೆ ಮಾಡಿಲ್ಲ. ರವೀಂದ್ರ ಪಿಎನ್, ಕನಗವಲ್ಲಿ ಎಂ, ಶಿವಕುಮಾರ್ ಕೆಬಿ, ವಿನೋಂತಾ ಪ್ರಿಯಾ, ಶ್ರೀರೂಪಾ, ಗಿರೀಶ್ ಆರ್, ವಿವಿ ಜೋತ್ಸ್ನಾ, ಮುಲೈ ಮುಹಿಲನ್, ಪ್ರಭುಲಿಂಗ ಕವಲಿಕಟ್ಟಿ, ಸೋಮಶೇಖರ್ ಎಸ್ಜೆ ಅವರಿಗೆ ಇನ್ನೂ ಯಾವುದೇ ಹುದ್ದೆ ನೀಡದೇ, ಕಾಯ್ದಿರಿಸಲಾಗಿದೆ. ರಾಜ್ಯ ಸರ್ಕಾರ ಆಗಾಗ ಇಂತಹ ಮೇಜರ್ ಸರ್ಜರಿಗಳನ್ನ ಮಾಡುತ್ತಲಿರುತ್ತದೆ. ಅದರಲ್ಲೂ ಹೊಸ ವರ್ಷದ ಹಿಂದಿನ ದಿನವೇ ಇಂತಹ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications