IAS Officers Transfer : ಸಿಎಂ ಕಚೇರಿಗೆ ನೂತನ ಅಧಿಕಾರಿಗಳ ಎಂಟ್ರಿ, 7 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮತ್ತು ಅಭಿವೃದ್ಧಿ ಕೆಲಸಗಳನ್ನಾ ತ್ವರಿತಗೊಳಿಸಲು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಸೋಮವಾರದಂದು ಪ್ರಮುಖ ಇಲಾಖೆಗಳ 7 ಮಂದಿ ಹಿರಿಯ ಐಎಎಸ್ ಅಧಿಕಾರಿಗಳನ್ನು ದಿಢೀರ್‌ ವರ್ಗಾವಣೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಿದೆ.

ಈ ವರ್ಗಾವಣೆಯು ಸರ್ಕಾರದ ವಿವಿಧ ಯೋಜನೆಗಳು ಹಾಗೂ ಇಲಾಖೆಗಳ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಮಾಡಲಾದ ಅತ್ಯಂತ ಪ್ರಮುಖ ಬೆಳವಣಿಗೆಯಾಗಿದೆ. ಮುಖ್ಯವಾಗಿ ರಾಜ್ಯದ ಶಕ್ತಿ ಕೇಂದ್ರವಾಗಿರುವ ಮುಖ್ಯಮಂತ್ರಿಗಳ ಕಚೇರಿ, ಪ್ರವಾಸೋದ್ಯಮ, ಆರ್ಥಿಕ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಗಳಿಗೆ ಹೊಸ ಮತ್ತು ದಕ್ಷ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

Karnataka Government

ಮುಖ್ಯಮಂತ್ರಿಗಳ ನೂತನ ಕಾರ್ಯದರ್ಶಿಯಾಗಿ ನಕುಲ್ ಎಸ್.ಎಸ್. ನೇಮಕ

ರಾಜ್ಯ ಸರ್ಕಾರದ ಆಡಳಿತದ ಪ್ರಮುಖ ಕೇಂದ್ರವಾಗಿರುವ ಮುಖ್ಯಮಂತ್ರಿ ಕಚೇರಿಗೆ ಇದೀಗ ಹೊಸ ಅಧಿಕಾರಿಗಳ ಪ್ರವೇಶವಾಗಿದೆ. ಆರ್ಥಿಕ ಇಲಾಖೆಯಲ್ಲಿ ಸರ್ಕಾರದ ಕಾರ್ಯದರ್ಶಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದ ದಕ್ಷ ಅಧಿಕಾರಿ ನಕುಲ್ ಎಸ್.ಎಸ್. ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಇವರ ಜತೆಗೆ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯತೀಶ್ ಆರ್. ಅವರನ್ನು ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ-1 ಹುದ್ದೆಗೆ ನೇಮಿಸಲಾಗಿದೆ. ವಿಶೇಷವೆಂದರೆ, ಯತೀಶ್ ಆರ್. ಅವರಿಗೆ ಬೆಂಗಳೂರು ನಗರ ಜಿ.ಪಂ. ಸಿಇಒ ಹುದ್ದೆಯ ಜವಾಬ್ದಾರಿಯಿಂದ ಮುಕ್ತಗೊಳಿಸದೆ, ಅದೇ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸಲು ಸರ್ಕಾರ ಸೂಚಿಸಿದೆ.

ಪ್ರವಾಸೋದ್ಯಮ ಇಲಾಖೆ ಹಾಗೂ ಆರ್ಥಿಕ ಇಲಾಖೆಯಲ್ಲಿ ಮಹತ್ವದ ಬದಲಾವಣೆ

ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಹೊಸ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಗೂ ಮೇಜರ್ ಸರ್ಜರಿ ಮಾಡಲಾಗಿದೆ. ಇಂಧನ ಇಲಾಖೆಯ ಪ್ರಮುಖ ನಿಗಮವಾದ ಕೆಪಿಟಿಸಿಎಲ್ ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ರಾಮ್ ಪ್ರಸಾತ್ ಮನೋಹರ್ ಅವರನ್ನ ಪ್ರವಾಸೋದ್ಯಮ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಅದೇ ರೀತಿ, ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಪ್ರಸಾದ್ ಪಿ.ಆರ್. ಅವರನ್ನು ಅದೇ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮತ್ತೊಂದೆಡೆ, ಆರ್ಥಿಕ ವಲಯದ ಬಲ ತುಂಬಲು ಒತ್ತು ನೀಡಿರುವ ಸರ್ಕಾರ, ಕೆಎಂಇಆರ್ ಸಿ ವ್ಯವಸ್ಥಾಪಕ ನಿರ್ದೇಶಕ ಅಭಿರಾಮ್ ಜಿ. ಶಂಕರ್ ಅವರನ್ನು ಆರ್ಥಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಿ ಮಹತ್ವದ ಆದೇಶ ಹೊರಡಿಸಿದೆ.

ಕೌಶಲ್ಯಾಭಿವೃದ್ಧಿ ಹಾಗೂ ಮೈಸೂರು ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಹೊಸ ಅಧಿಕಾರಿಗಳು

ಈ ಹಿಂದೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಪಾಟೀಲ್ ಯಳಗೌಡ ಶಿವನಗೌಡ ಅವರನ್ನು ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜಿಸಲಾಗಿದೆ. ಇನ್ನು, ಕಳೆದ ಕೆಲವು ದಿನಗಳಿಂದ ಯಾವುದೇ ಹುದ್ದೆ ನೀಡದೆ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಅಧಿಕಾರಿ ಶೇಕ್ ತಸ್ವೀರ್ ಆಸಿಫ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ಅವರನ್ನು ಮೈಸೂರಿನಲ್ಲಿರುವ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕ ಹುದ್ದೆಗೆ ನೇಮಕ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+