IAS officers transfer: ರಾಜ್ಯ ಸರ್ಕಾರದಿಂದ ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ
IAS Officers Transfer: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲಿರುತ್ತದೆ. ಇದೀಗ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಐವರು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ದಾವಣಗೆರೆ, ಬೀದರ್ ಹಾಗೂ ಯಾದಗಿರಿ ಜಿಲ್ಲಾ ಪಂಚಾಯಿತಿಗಳಿಗೆ ಹೊಸ ಸಿಇಒಗಳ ನೇಮಕ ಮಾಡಲಾಗಿದೆ.

ಯಾರು ಎಲ್ಲಿಗೆ ವರ್ಗಾವಣೆ?
* ಸಾಹಿತ್ಯ ಎಂ.ಆಲದಕಟ್ಟಿ: ಕಲಬುರಗಿಯ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿದ್ದ ಇವರನ್ನು ದಾವಣಗೆರೆ ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆಗಿ ನೇಮಿಸಲಾಗಿದೆ.
* ಗಿಟ್ಟೆ ಮಾಧವ್ ವಿಠ್ಠಲ್ ರಾವ್: ದಾವಣಗೆರೆ ಜಿಲ್ಲಾ ಪಂಚಾಯತಿ ಸಿಇಒ ಆಗಿದ್ದ ಇವರನ್ನು ಬೀದರ್ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾಯಿಸಲಾಗಿದೆ.
* ಜುಬಿನ್ ಮೊಹಾಪಾತ್ರ: ರಾಯಚೂರು ನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ನಿಯೋಜನೆ ಮಾಡಲಾಗಿದೆ.
* ಡಾ.ಗಿರೀಶ್ ದಿಲೀಪ್ ಬದೋಲೆ: ಬೀದರ್ ಜಿಲ್ಲಾ ಪಂಚಾಯತಿ ಸಿಇಒ ಹುದ್ದೆಯಿಂದ ವರ್ಗಾವಣೆಗೊಂಡಿದ್ದು, ಅವರಿಗೆ ಇನ್ನೂ ಸ್ಥಳ ನಿಯೋಜನೆ ಮಾಡಿಲ್ಲ.
* ಪಿ.ರಾಹುಲ್ ತುಕಾರಾಮ್: ಯಾದಗಿರಿ ಜಿಲ್ಲಾ ಪಂಚಾಯತಿ ಸಿಇಒ ಹುದ್ದೆಯಿಂದ ವರ್ಗಾವಣೆಗೊಂಡಿದ್ದು, ಮುಂದಿನ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.
ಚುನಾವಣಾ ಆಯೋಗದ ಅನುಮೋದನೆ ಕಡ್ಡಾಯ:
ರಾಜ್ಯದಲ್ಲಿ ಪ್ರಸ್ತುತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದ್ದರಿಂದ ನಿಯಮಾನುಸಾರ ಜುಬಿನ್ ಮೊಹಾಪಾತ್ರ ಮತ್ತು ಸಾಹಿತ್ಯ ಎಂ.ಆಲದಕಟ್ಟಿ ಅವರ ವರ್ಗಾವಣಾ ಆದೇಶವು ಭಾರತೀಯ ಚುನಾವಣಾ ಆಯೋಗದ ಅಂತಿಮ ಅನುಮೋದನೆಗೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು
* ಸಾಹಿತ್ಯ ಎಂ.ಆಲದಕಟ್ಟಿ
* ಗಿಟ್ಟೆ ಮಾಧವ್ ವಿಠ್ಠಲ್ ರಾವ್
* ಜುಬಿನ್ ಮೊಹಾಪಾತ್ರ
* ಡಾ.ಗಿರೀಶ್ ದಿಲೀಪ್ ಬದೋಲೆ
* ಪಿ.ರಾಹುಲ್ ತುಕಾರಾಮ್


Click it and Unblock the Notifications
