IAS Transfer: ಕೆಎ ದಯಾನಂದ ವರ್ಗಾವಣೆ, ಬೆಂಗಳೂರು ನಗರಕ್ಕೆ ಹೊಸ ಡಿಸಿ
ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಕೆಲವು ಬದಲಾವಣೆ ಮಾಡಿದೆ. ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಮುಖವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ, ಜಗದೀಶ್ ಜಿ. ಅವರನ್ನು ನೂತನ ಜಿಲ್ಲಾಧಿಕಾರಿಗಳಾಗಿ ನೇಮಕ ಮಾಡಿದೆ. ಕಳೆದ ಶನಿವಾರ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೇರಿ ಹಲವು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿತ್ತು.
ಐಎಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಾಲತೇಶ್, ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ & ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ನೀಡಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಕೆ. ಎ. ದಯಾನಂದ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಿಸೆಂಬರ್ 18, 2022ರಂದು ಕೆ. ಎ. ದಯಾನಂದ ಅವರನ್ನು ಬೆಂಗಳೂರು ನಗರದ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು.
ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು
* ಶ್ರೀನಿವಾಸ ಕೆ. ಐಎಎಸ್ (ಕೆಎನ್: 2012). ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಬೆಂಗಳೂರು. ಈಗಿರುವ ಹುದ್ದೆಯ ಜೊತೆಗೆ ಆಯುಕ್ತರು, ಹಿಂದುಳಿದ ವರ್ಗಗಳು, ಬೆಂಗಳೂರು ಹುದ್ದೆಗೆ ತತ್ ಕ್ಷಣದಿಂದ ಜಾರಿಗೆ ಬರುವಂತೆ ನೇಮಕ. ಈ ಹುದ್ದೆಯಲ್ಲಿದ್ದ ದಯಾನಂದ ಕೆ. ಎ. ಐಎಎಸ್ ವರ್ಗಾವಣೆ.
* ದಯಾನಂದ ಕೆ. ಎ. ಐಎಎಸ್ (ಕೆಎನ್: 2012). ಬೆಂಗಳೂರು ನಗರ ಜಿಲ್ಲಾಧಿಕಾರಿ, ಬೆಂಗಳೂರು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಎಂಡ್ ಕಮೀಷನರ್ ಆಫ್ ಸ್ಟಾಂಪ್ಸ್, ಬೆಂಗಳೂರು ಹುದ್ದೆಗೆ ನೇಮಕ.
* ಜಗದೀಶ್ ಜಿ. ಐಎಎಸ್ (ಕೆಎನ್: 2012), ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಜಿಲ್ಲಾಧಿಕಾರಿಗಳು ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಆಗಿ ನೇಮಕ. ಈ ಹುದ್ದೆಯಲ್ಲಿದ್ದ ದಯಾನಂದ ಕೆ. ಎ. ವರ್ಗಾವಣೆ.
ಅಧಿಸೂಚನೆ: ಬಿ. ಕೆ. ಭುವನೇಂದ್ರ ಕುಮಾರ್ ಸರ್ಕಾರದ ಅಧೀನ ಕಾರ್ಯದರ್ಶಿ (ಪ), ಒಳಾಡಳಿತ ಇಲಾಖೆ (ಪೊಲೀಸ್ ಸೇವೆಗಳು-ಎ) ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅಧಿಸೂಚನೆಯೊಂದನ್ನು ಹೊರಡಿಸಿದ್ದಾರೆ.
ಬಿ. ಎಂ. ಪ್ರಸಾದ್, ಕಮಾಂಡೆಂಟ್, 7ನೇ ಪಡೆ, ಕೆ.ಎಸ್.ಆರ್.ಪಿ, ಮಂಗಳೂರು ಇವರನ್ನು ಕಮಾಂಡೆಂಟ್, ಐ.ಆರ್.ಬಿ, ಮುನಿರಾಬಾದ್, ಕೊಪ್ಪಳ ಜಿಲ್ಲೆ ಈ ಖಾಲಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಶನಿವಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಡಾ. ತ್ರಿಲೋಕ್ ಚಂದ್ರ ಕೆ. ವಿ. (ಕೆಎನ್: 2007). ಮುಖ್ಯಮಂತ್ರಿಗಳ ಕಾರ್ಯದರ್ಶಿ, ಬೆಂಗಳೂರು. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.
ಬಿ. ಬಿ. ಕಾವೇರಿ (ಕೆಎನ್: 2008). ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, ಬೆಂಗಳೂರು. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಹುದ್ದೆಯಲ್ಲಿದ್ದ ನೇಮಕ ಮಾಡಲಾಗಿತ್ತು.
ಬಿ. ಬಿ. ಕಾವೇರಿ ಅವರಿಗೆ ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಕಾರ್ಯದರ್ಶಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೆಚ್ಚುವರಿ ಹೊಣೆಯನ್ನು ಸಹ ನೀಡಲಾಗಿತ್ತು.












Click it and Unblock the Notifications