Transport Employees: ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರ ಒತ್ತಾಯ; ಅಷ್ಟಕ್ಕೂ ನೌಕರರ ಬೇಡಿಕೆಗಳೇನು ಗೊತ್ತಾ?
ಬೆಂಗಳೂರು: ನಾಲ್ಕು ದಶಕಗಳ ಕಾಲ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿದ ಅವರು, ಸಾರಿಗೆ ನೌಕರರ ಬೇಡಿಕೆಗಳಿಗಾಗಿ ಧ್ವನಿ ಎತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ ಅವರು ಜನವರಿ 28 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರ್ಕಾರದ ಮುಂದೆ ಹಲವು ಬಾರೀ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧ್ವನಿ ಎತ್ತಿದ್ದ ಅನಂತ ಸುಬ್ಬರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಜನವರಿ 29 ರಂದು ನಡೆಯಬೇಕಾಗಿದ್ದ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಿರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ ಅವರ ನೇತೃತ್ವದಲ್ಲಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಿದ್ದರು. ಈ ಹಿಂದೆ ಸುಮಾರು 1.15 ಲಕ್ಷ ನೌಕರರು ಭಾಗವಹಿಸಲಿದ್ದರು. ಅಲ್ಲದೇ ವೇತನ ಬಾಕಿ, ಸೌಲಭ್ಯಗಳು, ಖಾಸಗೀಕರಣ ವಿರೋಧ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ನಡೆಸಿದ್ದರು. ಇನ್ನೂ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ, ನೌಕರರ ಮನವೊಲಿಕೆಗೆ ಸರ್ಕಾರ ಪ್ರಯತ್ನಿಸಿತ್ತು. ಆದರೆ, ಸಂಧಾನ ವಿಫಲವಾದ ಹಿನ್ನಲೆ ಸರ್ಕಾರದ ವಿರುದ್ದ ಮತ್ತೆ ಬೆಂಗಳೂರು ಚಲೋ ಪ್ರತಿಭಟನೆಗೆ ಸಾರಿಗೆ ನೌಕರರು ಸಜ್ಜಾಗಿದ್ದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಮುಖಂಡರೂ ಆಗಿದ್ದ ಹಿರಿಯ ನಾಯಕ ಅನಂತ ಸುಬ್ಬರಾವ್ ಅವರು ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಜನವರಿ 29ರಂದು ಬೆಂಗಳೂರು ಚಲೋಗೆ ಕರೆ ನೀಡಿದ್ದರು. ಈ ಬಗ್ಗೆ ಬುಧವಾರವೂ ನಾನಾ ಸಾರಿಗೆ ಸಂಘಟನೆಗಳ ನಾಯಕರೊಂದಿಗೆ ಚರ್ಚಿಸಿದ್ದರು. ಸಂಜೆ ಶೇಷಾದ್ರಿಪುರ ರಸ್ತೆಯಲ್ಲಿರುವ ಸಂಘಟನೆಯ ಕಚೇರಿಯಲ್ಲಿಸೇರಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲು ನಿರ್ಧರಿಸಿದ್ದರು. ಸಭೆಗೆ ತೆರಳುವ ಮುನ್ನವೇ ಅನಂತ ಸುಬ್ಬರಾವ್ ನಿಧನದ ಹಿನ್ನೆಲೆಯಲ್ಲಿಬೆಂಗಳೂರು ಚಲೋ ಮುಂದೂಡಲಾಗಿದೆ.
ಸಾರಿಗೆ ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ನಾಲ್ಕು ಸಂಸ್ಥೆಗಳ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಸದ್ಯದಲ್ಲಿ ದಿನಾಂಕ ನಿಗದಿಯಾಗಲಿದೆ. ಈ ಹಿಂದೆ ಘೋಷಿಸಿದ್ದ ಮುಷ್ಕರವು ವಿವಿಧ ಕಾರಣಗಳಿಂದ ಮುಂದೂಡಿಕೆ ಆಗಿತ್ತು. ಇದೀಗ ಸರ್ಕಾರ ಯಾವುದೇ ರೀತಿಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣಕ್ಕೆ ರಾಜ್ಯವ್ಯಾಪಿ ಬೆಂಗಳೂರು ಚಲೋ ಮುಷ್ಕರ ನಡೆಸುವುದಾಗಿ ನೌಕರರ ಸಂಘಟನೆ, ಸಮಿತಿಗಳು ಅಧಿಕೃವಾಗಿ ಘೋಷಿಸಿವೆ.
ಈ ಹಿಂದೆಯೇ ರಾಜ್ಯ ಸರ್ಕಾರದೊಂದಿಗೆ ಸಾರಿಗೆ ನೌಕರರು ಕೆಲವು ಬಾರಿ ಮಾತುಕತೆ ನಡೆಸಿದ್ದಾರೆ. ಆದರೆ ಸರ್ಕಾರ ಭರವಸೆ ನೀಡಿತೇ ವಿನಃ ಬೇಡಿಕೆ ಈಡೇರಿಕೆಗೆ ಮುಂದಾಗಿಲ್ಲ. 2024 ಜನವರಿ 1ರಿಂದ ಜಾರಿಗೆ ಬರಬೇಕಿದ್ದ ವೇತನ ಪರಿಷ್ಕರಣೆ ಜಾರಿಗೆ ಬಂದಿಲ್ಲ. ವೇತನ ಹೆಚ್ಚಳ ಹಿಂಬಾಕಿ ಇದುವರೆಗೂ ನೌಕರರ ಕೈ ಸೇರಿಲ್ಲ. ಹೀಗಾಗಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.
ಇನ್ನೂ ಸಾರಿಗೆ ನೌಕರರ ಪರವಾಗಿ ಜನರು ಸಹ ಧ್ವನಿ ಎತ್ತಿದ್ದಾರೆ. ಸಾರಿಗೆ ನೌಕರರಿಗೂ ಮನೆ, ಮಕ್ಕಳು ಕುಟುಂಬ ಇದೆ. ತಿಂಗಳುಗಟ್ಟಲೇ ವೇತನ ಹೆಚ್ಚಳ ಬಾಕಿ ಉಳಿಸಿಕೊಂಡರೇ ಹೇಗೆ ಎಂದು ಕೆಲವರು ನೌಕರರ ಪರ ಮಾತನಾಡಿದ್ದಾರೆ. ಸಾರಿಗೆ ನೌಕರರ ಮುಷ್ಕರದಿಂದ ನಿತ್ಯ ವ್ಯಾಪಾರ ವಹೀವಾಟಿನ ಮೇಲೆ ಪರಿಣಾಮ ಬೀರುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ, ಜನರ ಸಂಚಾರಕ್ಕೆ, ಉದ್ಯೋಗಿಗಳಿಗೆ ತೊಂದರೆ ಆಗುತ್ತದೆ. ಸರ್ಕಾರ ಎಚ್ಚೆತ್ತು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸಾರ್ವಜನಿರಕು ಒತ್ತಾಯಿಸಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳೇನು?
* ಸ್ಯಾಲರಿ ಅರಿಯರ್ಸ್: ಕಳೆದ 38 ತಿಂಗಳಿಂದ ಬಾಕಿ ಇರುವ ವೇತನ ಅರಿಯರ್ಸ್‌ಗಳನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂಬುದೇ ನೌಕರರ ಬೇಡಿಕೆ
* ವೇತನ ಪರಿಷ್ಕರಣೆ: ಜನವರಿ 1, 2024 ರಿಂದ ಜಾರಿಗೆ ಬರಬೇಕಿದ್ದ ವೇತ ಪರಿಷ್ಕರಣೆಯನ್ನು ತಕ್ಷಣ ಜಾರಿಗೆ ಬರುವಂತೆ ಆಗ್ರಹಿಸಲಾಗಿದೆ.
*ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನವನ್ನು ನಮಗೂ ನೀಡಬೇಕು.
*ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸಬೇಕು.
*ಖಾಸಗೀಕರಣ, ಭ್ರಷ್ಟಾಚಾರ, ಕಾರ್ಮಿಕರ ಕಿರುಕುಳ ನಿಲ್ಲಬೇಕು.
*ನಮ್ಮ ಹಕ್ಕಿನ ರಜೆಯನ್ನು ಅಗತ್ಯ ಸಂದರ್ಭದಲ್ಲಿ ನೀಡಬೇಕು.
*1-1-2024 ರಿಂದ ವೇತನ ಜಾರಿಗೊಳಿಸಬೇಕು.
*ನೌಕರರಿಗೆ ಉತ್ತಮವಾದ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಬೇಕು.
*ಸಾರಿಗೆ ನಿಗಮದ ವಿದ್ಯುತ್ ಚಾಲಿತ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು.
*ಖಾಸಗಿ ಗುತ್ತಿಗೆದಾರರಿಗೆ ಇ-ಬಸ್‌ಗಳ ನಿರ್ವಹಣೆಯನ್ನು ನೀಡುವ ಪದ್ಧತಿ ಕೈಬಿಡಬೇಕು.
*ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು.












Click it and Unblock the Notifications