Get Updates
Get notified of breaking news, exclusive insights, and must-see stories!

Cabinet meeting: ಸರ್ಕಾರದಿಂದ ಕಲ್ಯಾಣ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌

ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಕಾರಣಗಳಿಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ. ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಭಾಗದ ಸಮಸ್ಯೆಗಳು ಚರ್ಚೆಯಾಗುವ ಆಶಯ ಈ ಭಾಗದ ಜನರಲ್ಲಿ ಮೂಡಿದೆ. ಇನ್ನು ಇತ್ತೀಚಿನ ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ ಸರ್ಕಾರವು ಕಲ್ಯಾಣ ಕರ್ನಾಟಕದ ಭಾಗಕ್ಕೆ ತುಸು ಹೆಚ್ಚೆ ಪ್ರಾಶಸ್ತ್ಯ ನೀಡುತ್ತಿರುವಂತೆ ಕಾಣುತ್ತದೆ. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಈ ಭಾಗದಿಂದ ವ್ಯಕ್ತವಾದ ಬೆಂಬಲವೂ ಕಾರಣವಾಗಿರಬಹುದು.

ಇನ್ನು ನಾಳೆ ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಗ್‌ ಅಪ್ಡೇಟ್ಸ್‌ ಕೊಟ್ಟಿದ್ದಾರೆ. ಮಂಗಳವಾರ ಅಂದರೆ ಸೆಪ್ಟೆಂಬರ್‌ 16ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ನಾವು ಈ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಿದ್ದೇವೆ ಎಂದು ಹೇಳಿದ್ದಾರೆ.

Karnataka government will give good news to the unemployed in kalyana karnataka

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಬಜೆಟ್‌ನಲ್ಲಿ ರೂಪಿಸಲಾಗಿರುವ ಯೋಜನೆಗಳು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಕಳೆದ ಹಲವು ದಶಕಗಳಿಂದ ಈ ಭಾಗದ ಜನರ ಆಸೆಯಾಗಿರುವ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಡಿ ಇಟ್ಟಿದೆ ಎಂದು ಹೇಳಲಾಗುತ್ತಿದೆ.

ಇನ್ನು ಕಲ್ಯಾಣ ಕರ್ನಾಟಕದ ಭಾಗಕ್ಕೆ ಕಾಂಗ್ರೆಸ್‌ ಇಲ್ಲಿಯವರೆಗೆ ಏನೆಲ್ಲ ಮಾಡಿದೆ ಎನ್ನುವುದನ್ನೂ ಸಹ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿತ್ತು. ಇದಕ್ಕಾಗಿ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಅಪಾರ ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ನಮ್ಮ ಸರ್ಕಾರವೇ ಪ್ರಯತ್ನಿಸಿದ್ದು ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿತ್ತು . ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ನಾಗಮಂಗಲ ಪರಿಹಾರ ಪರಿಶೀಲನೆ

ಇನ್ನು ಮಂಡ್ಯದ ನಾಗಮಂಗಲ ಗಲಭೆ ಪ್ರಕರಣದ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್‌ಪೆಕ್ಟರನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟು, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+