ನಮ್ಮ ಸರಕಾರದ್ದು ಮಾತು ಅಂದ್ರೆ ಮಾತು: ಡಿಸಿಎಂ ಪರಮೇಶ್ವರ್
ನಮ್ಮ ಸರಕಾರದ್ದು ಮಾತು ಅಂದ್ರೆ ಮಾತು: ಪರಮೇಶ್ವರ್
ಬೆಂಗಳೂರು, ಜುಲೈ 18: 2018ರಲ್ಲಿ ನಡೆದ ಕಾಮನ್‌ವೆಲ್ತ್ ನ ವೈಟ್‌ಲಿಫ್ಟಿಂಗ್ ಪುರುಷರ 56 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ್ ಪೂಜಾರಿ ಅವರಿಗೆ 25 ಲಕ್ಷ ರು. ನಗದು ಬಹುಮಾನ ಘೋಷಿಸಿದ್ದ ಕರ್ನಾಟಕ ಸರಕಾರ ಎಂದೂ ಮಾತು ತಪ್ಪುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಹೇಳಿದ್ದಾರೆ.
ಚುನಾವಣೆ ಇದ್ದ ಕಾರಣಕ್ಕೆ ಗುರುರಾಜ್ ಅವರಿಗೆ ಹಣ ಸಂದಾಯ ತಡವಾಗಿದೆ. ಕೂಡಲೇ ಇವರನ್ನು ಭೇಟಿ ಮಾಡಿ ಘೋಷಣೆ ಮಾಡಿದ್ದ ಪ್ರಶಸ್ತಿಯ ಮೊತ್ತವನ್ನು ನೀಡಲಾಗುವುದು. ಗುರುರಾಜ್ ಪೂಜಾರಿ ಅವರಿಗೆ ಸರಕಾರ ಘೋಷಿಸಿದ್ದ ನಗದು ಬಹುಮಾನ ವಿತರಣೆ ಮಾಡದೇ ಇರುವ ಬಗ್ಗೆ ಮಾಧ್ಯಮದಲ್ಲಿ ಬಿತ್ತರಗೊಂಡಿರುವ ವರದಿಗೆ ಪರಮೇಶ್ವರ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಸರಕಾರ ಸದಾ ಕ್ರೀಡೆಗೆ ಉತ್ತೇಜನ ನೀಡಲಿದೆ. ಯುವಕರು ಕ್ರೀಡೆಗೆ ಹೆಚ್ಚು ಆದ್ಯತೆ ನೀಡುವಂತೆ ಪ್ರೋತ್ಸಾಹಿಸುತ್ತದೆ. ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ನಲ್ಲಿ ಗುರುರಾಜ್ ಪೂಜಾರಿ ವೈಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಇಡೀ ದೇಶಕ್ಕೆ ಹೆಮ್ಮೆ ತಂದಿದ್ದಾರೆ.
ಇವರ ಈ ಸಾಧನೆಯನ್ನು ಕರ್ನಾಟಕ ಸರಕಾರ ಶ್ಲಾಘಿಸಿ, ಆಗಿನ ಕ್ರೀಡಾ ಸಚಿವರು ನಗದು ಪ್ರಶಸ್ತಿ ಘೋಷಿಸಿದ್ದರು. ಆದರೆ, ಅದೇ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿದ್ದರಿಂದ ಈ ಪ್ರಕ್ರಿಯೆ ತಡವಾಗಿರಬಹುದು. ಆದರೆ, ಸರಕಾರ ನೀಡಿದ ಆಶ್ವಾಸನೆ ಎಂದೂ ಸುಳ್ಳಾಗದು ಎಂದು ಪರಮೇಶ್ವರ್ ಆಶ್ವಾಸನೆ ನೀಡಿದ್ದಾರೆ.
ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗುರುರಾಜ್ ಅವರನ್ನು ಸ್ವತಃ ಭೇಟಿ ಮಾಡಲಿದ್ದೇನೆ. ಕೂಡಲೇ ಪ್ರಶಸ್ತಿ ಮೊತ್ತ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ಅಥ್ಲೆಟಿಕ್‌ನಲ್ಲಿ ಭಾರತಕ್ಕೆ ಚಿನ್ನದ ಪದ ಗೆದ್ದು ತಂದ ಹಿಮಾದಾಸ್ ನಂತೆ ಸಾಕಷ್ಟು ಯುವಕರು ಕ್ರೀಡಾ ಕ್ಷೇತ್ರಕ್ಕೆ ಬರಬೇಕು.
ನಾನೂ ಕೂಡ ಯುವಕನಾಗಿದ್ದ ಸಂದರ್ಭದಲ್ಲಿ ಕ್ರೀಡಾ ಪಟುವಾಗಿದ್ದೆ. ಕ್ರೀಡೆಯನ್ನು ಗೌರವಿಸುವ ಹಾಗೂ ಪ್ರೋತ್ಸಾಹಿಸುವ ಆಸಕ್ತಿ ನನ್ನಲ್ಲಿದೆ. ಕ್ರೀಡಾ ಸಚಿವನಾಗಿ ಯಾವ ಕ್ರೀಡಾಪಟುಗೂ ನಗದು ಬಹುಮಾನ ತಡವಾಗಬಾರದು. ಗುರುರಾಜ್‌ಗೆ ಸರಕಾರ ನೀಡಿದ ಆಶ್ವಾಸನೆಯನ್ನು ಕಾಪಾಡಿಕೊಳ್ಳಲಿದೆ ಎಂದು ಹೇಳಿದ್ದಾರೆಂದು ಪರಮೇಶ್ವರ್ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications