ಚಿತ್ರಗಳಲ್ಲಿ : ವಜುಭಾಯಿ ವಾಲಾ ಹಿಂದಿ ಭಾಷಣ
ಬೆಂಗಳೂರು, ಫೆ.2 : ಹಿಂದಿಯಲ್ಲಿ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಇತಿಹಾಸ ನಿರ್ಮಿಸಿದ್ದಾರೆ. ರೂಢಿಯಂತೆ ರಾಜ್ಯಪಾಲರು ಇಂಗ್ಲಿಷ್‌ನಲ್ಲಿ ಭಾಷಣ ಮಾಡುತ್ತಿದ್ದರು. ಆದರೆ, ಇಂದು ವಜುಭಾಯಿ ವಾಲಾ ಅವರು ಹಿಂದಿಯಲ್ಲಿ ಭಾಷಣ ಮಾಡಿದರು.
ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರನ್ನು ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ, ಸ್ಪೀಕರ್ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸ್ವಾಗತಿಸಿದರು. [ವಜೂಭಾಯಿ ವಾಲಾ ಹಿಂದಿ ಭಾಷಣದ ಮುಖ್ಯಾಂಶ]
'ಎಲ್ಲರಿಗೂ ನಮಸ್ಕಾರ' ಎಂದು ಕನ್ನಡದಲ್ಲಿ ಹೇಳಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ಹಿಂದಿಯಲ್ಲಿ ಭಾಷಣ ಆರಂಭಿಸಿದರು. ವಿಧಾನಸೌಧದ ಹೊರಗೆ ರಾಜ್ಯಪಾಲರ ಹಿಂದಿ ಭಾಷಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದರು. ಚಿತ್ರಗಳಲ್ಲಿ ನೋಡಿ ರಾಜ್ಯಪಾಲರ ಭಾಷಣ

ಇತಿಹಾಸ ನಿರ್ಮಿಸಿದ ರಾಜ್ಯಪಾಲರು
ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಧಾನಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡಿದರು. ಸೋಮವಾರ ರಾಜ್ಯಪಾಲ ವಜುಭಾಯಿ ವಾಲಾ ಜಂಟಿ ಅಧಿವೇಶನ ಉದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಿದರು.

ಮೊದಲ ಬಾರಿ ಹಿಂದಿ ಭಾಷಣ
ಕರ್ನಾಟಕದ ಮೊದಲನೇ ರಾಜ್ಯಪಾಲ ಜಯಚಾಮರಾಜ ಒಡೆಯರ್ ಮಾತ್ರ ಕನ್ನಡಿಗರಾಗಿದ್ದರು. ನಂತರ ಬಂದ ರಾಜ್ಯಪಾಲರು ಕನ್ನಡೇತರರು. ಆದ್ದರಿಂದ ಅವರೆಲ್ಲರೂ ಇಂಗ್ಲಿಷ್‌ನಲ್ಲಿಯೇ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದರು. ಈ ಬಾರಿ ಮಾತ್ರ ಹಿಂದಿಯಲ್ಲಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ.

ಸ್ವಾಗತ ಕೋರಿದ ಸಿಎಂ, ಸ್ಪೀಕರ್
ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರನ್ನು ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ, ಸ್ಪೀಕರ್ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸ್ವಾಗತಿಸಿದರು.

ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದ ರಾಜ್ಯಪಾಲರು
'ಎಲ್ಲರಿಗೂ ನಮಸ್ಕಾರ' ಎಂದು ಕನ್ನಡದಲ್ಲಿ ಹೇಳಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ಹಿಂದಿಯಲ್ಲಿ ಭಾಷಣ ಆರಂಭಿಸಿದರು. ಸುಮಾರು 40 ನಿಮಿಷಗಳ ಭಾಷಣದಲ್ಲಿ ಸರ್ಕಾರದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನಸೌಧಕ್ಕೆ ಮುತ್ತಿಗೆ ಯತ್ನ
ರಾಜ್ಯಪಾಲರ ಹಿಂದಿ ಭಾಷಣವನ್ನು ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದರು. 'ರಾಜ್ಯಪಾಲರು ಕನ್ನಡ ವಿರೋಧಿಯಾಗಿದ್ದಾರೆ. ಇದುವರೆಗೂ ಬಂದ ರಾಜ್ಯಪಾಲರು ಯಾರೂ ಹಿಂದಿಯಲ್ಲಿ ಭಾಷಣ ಮಾಡಿರಲಿಲ್ಲ. ಆದರೆ, ಇವರು ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ನೀಡಿರುವುದು ನಾಚಿಕೆಗೇಡಿನ ಸಂಗತಿ' ಎಂದು ವಾಟಾಳ್ ಹೇಳಿದರು.

ಭಾಷಣಕ್ಕೆ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ
ರಾಜ್ಯ ಸರ್ಕಾರ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಅತ್ಯಾಚಾರಗಳ ಸರಮಾಲೆಯಾಗಿದೆ. ಆದರೆ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂದು ಭಾಷಣ ಮಾಡಿಸಿದ್ದಾರೆ. ಎಲ್ಲೂ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿಲ್ಲ. ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು. ರಾಜ್ಯದ ಎಲ್ಲಾ ಬೆಳವಣಿಗೆಯನ್ನೂ ರಾಜ್ಯಪಾಲರು ಗಮನಿಸುತ್ತಿದ್ದಾರೆ ಎಂದರು.

ಪರಿಷತ್ತಿನಲ್ಲಿ ಅನುಮೋದನೆ
ವಿಧಾನಸಭೆಯಲ್ಲಿ ಅನುಮೋದನೆ ಆಗಿದ್ದ ರಾಜ್ಯಪಾಲರ ಭಾಷಣವನ್ನು ವಿಧಾನಪರಿಷತ್ತಿನಲ್ಲಿ ಅನುಮೋದನೆ ಮಾಡಲಾಯಿತು. ಮಧ್ಯಾಹ್ನ 1.15ಕ್ಕೆ ಸದನ ಆರಂಭವಾಗುತ್ತಿದ್ದಂತೆ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ರಾಜ್ಯಪಾಲರ ಭಾಷಣವನ್ನು ಮಂಡಿಸುವಂತೆ ಸಭಾ ನಾಯಕ ಎಸ್.ಆರ್.ಪಾಟೀಲ್ ಅವರಿಗೆ ಸೂಚಿಸಿದರು. ಸಚಿವ ಎಸ್.ಆರ್.ಪಾಟೀಲ್ ಅವರು ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡನೆ ಮಾಡಿ ಎಲ್ಲ ಸದಸ್ಯರ ಒಪ್ಪಿಗೆ ಪಡೆದರು.












Click it and Unblock the Notifications