Congress Government: ಕಾಂಗ್ರೆಸ್ ಸರ್ಕಾರ ರಚನೆಗೆ ಸಿದ್ದರಾಮಯ್ಯಗೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯಪಾಲರು!
ಬೆಂಗಳೂರು, ಮೇ 18: ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಸರ್ಕಾರ ರಚನೆಗೆ ಸಿದ್ದತೆ ನಡೆಸುತ್ತಿದೆ. ಹೈಕಮಾಂಡ್ ನಾಯಕರು ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ ಕೆ ಶಿವಕುಮಾರ್ ಅವರ ಘೋಷಣೆ ಮಾಡಿದ್ದಾರೆ.
ಇತತ್ತ ಗುರುವಾರ ನಡೆದ ಶಾಸಕಾಂಗ ಸಭೆಯ ನಂತರ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರಿಗೆ ಸರ್ಕಾರ ರಚನೆ ಮಾಡುವುದಾಗಿ ಅನುಮತಿಗೆ ಮನವಿ ಸಲ್ಲಿಸಿದ್ದರು.ಇನ್ನೂ ಇದಕ್ಕೆ ಹಕ್ಕುಮಂಡಿಸುವಂತೆ ರಾಜ್ಯಪಾಲರು ಕೂಡ ಹಸಿರು ನಿಶಾನೆ ತೋರಿಸಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಗುರುವಾರ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ135 ಶಾಸಕರ ಅನುಮೋದನೆಯೊಂದಿಗೆ ಬಹುಮತವನ್ನು ಗಳಿಸಿದ ನಂತರ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಹೆಚ್. ಕೆ ಪಾಟೀಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರಿಗೆ ಸರ್ಕಾರ ರಚನೆಗೆ ಅನುಮತಿಯನ್ನು ಕೇಳಿದರು.
ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರ ಅನುಮೋದನೆಯೊಂದಿಗೆ ಬಹುಮತವನ್ನು ಗಳಿಸಿದ ನಂತರ, ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಕಚೇರಿಗೆ ತೆರಳಿ ಸರ್ಕಾರ ರಚನೆ ಮಾಡುವುಕ್ಕೆ ಅನುಮತಿಯನ್ನು ಕೇಳಿದರು. ಇನ್ನೂ ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ದೊರೆತ ಬೆನ್ನಲ್ಲೇ ಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲು ಸಿದ್ಧತೆಯನ್ನ ನಡೆಸಿದ್ದಾರೆ.

ಇನ್ನೂ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ನವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಟ್ವೀಟರ್ ಮೂಲಕ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ. ಜೊತೆಗೆ, ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.












Click it and Unblock the Notifications