ಕರ್ನಾಟಕದ ರಾಜ್ಯಪಾಲ ಭ್ರಷ್ಟ: ಹಿರಿಯ ವಕೀಲ ರಾಮ್ಜೇಠ್ಮಲಾನಿ
ನವ ದೆಹಲಿ, ಮೇ 17: ಕರ್ನಾಟಕದ ರಾಜ್ಯಪಾಲರು ಭ್ರಷ್ಟರಾಗಿದ್ದಾರೆ ಹಾಗಾಗಿ ಅವರೇ ಬಿಜೆಪಿಗೆ ಭ್ರಷ್ಟಾಚಾರ ಮಾಡಲು ಅವಕಾಶ ನೀಡಿದ್ದಾರೆ ಎಂದು ದೇಶದ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯಪಾಲರು ಯಾವ ಆಧಾರದ ಮೇಲೆ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ ಮತ್ತು ಅಷ್ಟು ಸಮಯ ನೀಡಿರುವ ಉದ್ದೇಶವನ್ನು ರಾಜ್ಯಪಾಲರು ಜನರ ಮುಂದಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯಪಾಲರ ಈ ನಿರ್ಣಯ ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿ ಎಂದು ಹೇಳಿದ ಅವರು, ಯಾವುದು ಏನೇ ಆಗಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಬಾರದು ಆದರೆ ಇದು ಪ್ರಜಾಪ್ರಭುತ್ವವನ್ನು ತಿದ್ದುವ ಅದಕ್ಕೆ ಅಡ್ಡಗಾಲು ಹಾಕುವ ಯತ್ನ ಎಂದು ಜೇಠ್ಮಲಾನಿ ಹೇಳಿದ್ದಾರೆ.

ಬಹುಮತ ಸಾಬೀತು ಪಡಿಸಲು ಇಷ್ಟು ದಿನಗಳ ಅವಕಾಶ ನೀಡುವ ಮೂಲಕ ರಾಜ್ಯಪಾಲರೇ ಭ್ರಷ್ಟಾಚಾರಕ್ಕೆ, 'ಕುದುರೆ ವ್ಯಾಪಾರ'ಕ್ಕೆ ಕುಮ್ಮಕ್ಕು ಕೊಟ್ಟಿದ್ದಾರೆ. ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಟ್ಟಿದ್ದಾರೆಂದರೆ ರಾಜ್ಯಪಾಲರೂ ಭ್ರಷ್ಟರೇ ಆಗಿರಬೇಕು ಅಷ್ಟೆ ಎಂದು ರಾಮ್ ಜೇಠ್ಮಲಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
#WATCH Senior lawyer Ram Jethmalani speaks on Karnataka politics, says, 'What has BJP said to Guv, that he did such a stupid action? Order of Guv is open invitation to do corruption.' Jethmalani has approached SC against Karnataka Guv's invitation to Yeddyurappa for forming govt. pic.twitter.com/uLa0oXcPQZ
— ANI (@ANI) May 17, 2018
ರಾಮ್ ಜೇಠ್ಮಲಾನಿ ಅವರು ರಾಜ್ಯಪಾಲರ ನಿರ್ಣಯದ ವಿರುದ್ಧ ಸುಪ್ರೀಂ ಕೋರ್ಟ್ ಬಾಗಿಲು ಬಡಿದಿದ್ದು, ತುರ್ತಾಗಿ ತಮ್ಮ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications