ಭ್ರಷ್ಟಾಚಾರದ ಉರುಳು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು 2ನೇ ಬಾರಿ ಅಮಾನತು ಮಾಡಿದ ರಾಜ್ಯಪಾಲರು!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರಿಗೆ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಉರುಳು ಸುತ್ತಿಕೊಂಡಿದೆ. ರಾಜ್ಯ ಸಚಿವ ಸಂಪುಟದ ಸಲಹೆ ಮತ್ತು ಅಧಿಕೃತ ಶಿಫಾರಸಿನ ಆಧಾರದ ಮೇಲೆ, ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಕೆಪಿಎಸ್‌ಸಿ ಅಧ್ಯಕ್ಷರನ್ನ ಹುದ್ದೆಯಿಂದ ಅಮಾನತುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಸರ್ಕಾರಿ ನೇಮಕಾತಿಯಲ್ಲಿ ಅಕ್ರಮವೆಸಗಿದ ಆರೋಪ ಎದುರಿಸುತ್ತಿರುವ ಶಿವಶಂಕರಪ್ಪನಿಗೆ ದೊಡ್ಡ ಆಘಾತ ಎದುರಾಗಿದೆ.

Karnataka Governor

ಶಿವಶಂಕರಪ್ಪ ಸಾಹುಕಾರ್ ವಿರುದ್ಧದ ಭ್ರಷ್ಟಾಚಾರ ಆರೋಪಗಳೇನು?

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಪ್ರತಿಷ್ಠಿತ ಸರ್ಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲಕ್ಷಾಂತರ ಯುವಕ-ಯುವತಿಯರು ಹಗಲಿರುಳು ಓದಿ ಈ ಪರೀಕ್ಷೆಗಳನ್ನ ಬರೆಯುತ್ತಾರೆ. ಆದರೆ, ಸ್ವತಃ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರು ತಮ್ಮ ಅಧಿಕಾರವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಇನ್ನೂ ಸರಿಯಾಗಿ ಹೇಳುವುದಾದರೆ, ಕೈಗಾರಿಕಾ ವಿಸ್ತರಣಾಧಿಕಾರಿಗಳ ಹುದ್ದೆಗೆ ತಮ್ಮ ಇಬ್ಬರು ಪುತ್ರಿಯರನ್ನ ಅಕ್ರಮವಾಗಿ ಆಯ್ಕೆ ಮಾಡಿಕೊಳ್ಳಲು ಅವರು ನೆರವಾಗಿದ್ದಾರೆ ಎಂಬ ದೂರು ಕೂಡ ದಾಖಲಾಗಿತ್ತು. ಇದಲ್ಲದೆ, ರಾಜ್ಯದಲ್ಲಿ ನಡೆದ ಪಶುವೈದ್ಯರ ನೇಮಕಾತಿ ಪ್ರಕ್ರಿಯೆಯಲ್ಲೂ ದೊಡ್ಡ ಮಟ್ಟದ ಭ್ರಷ್ಟಾಚಾರ ಮತ್ತು ಅವ್ಯವಹಾರಗಳು ನಡೆದಿವೆ ಎಂಬ ಆರೋಪಗಳು ಇವರ ಮೇಲಿವೆ. ಈ ಎಲ್ಲಾ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗುವ ಹಂತದಲ್ಲಿರುವ ಕಾರಣ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಎರಡನೇ ಬಾರಿಗೆ ಅಮಾನತು

ಕೆಪಿಎಸ್‌ಸಿ ಅಧ್ಯಕ್ಷ ಅಮಾನತು ಆಗಿರುವುದು ಇದು ಮೊದಲ ಬಾರಿಯಲ್ಲ. ಇದಕ್ಕೂ ಮುನ್ನ, ಇದೇ ವರ್ಷದ ಜುಲೈ 13ರಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಶಿವಶಂಕರಪ್ಪ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಆದರೆ, ಈ ಆದೇಶವನ್ನ ಪ್ರಶ್ನಿಸಿ ಸಾಹುಕಾರ್ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ , ಆಗಸ್ಟ್ 18 ರಂದು ರಾಜ್ಯಪಾಲರ ಆದೇಶವನ್ನ ರದ್ದುಗೊಳಿಸಿತ್ತು. ರಾಜ್ಯ ಸಚಿವ ಸಂಪುಟದ ಸಲಹೆ ಮತ್ತು ಶಿಫಾರಸು ಇಲ್ಲದೆ ರಾಜ್ಯಪಾಲರು ಏಕಾಏಕಿ ಈ ಕ್ರಮ ಕೈಗೊಂಡಿದ್ದಾರೆ ಎಂಬ ಕಾನೂನಾತ್ಮಕ ಅಂಶವನ್ನ ಮುಂದಿಟ್ಟುಕೊಂಡು ನ್ಯಾಯಾಲಯವು ಮೊದಲನೇ ಅಮಾನತು ಆದೇಶವನ್ನು ವಜಾಗೊಳಿಸಿತ್ತು. ಇದರಿಂದ ಸಾಹುಕಾರ್ ಅವರಿಗೆ ತಾತ್ಕಾಲಿಕ ಬಿಡುವು ಸಿಕ್ಕಿತ್ತು.

ಸಚಿವ ಸಂಪುಟದ ಶಿಫಾರಸು

ಹೈಕೋರ್ಟ್ ಆದೇಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ ಹೊತ್ತಿರುವ ಶಿವಶಂಕರಪ್ಪ ಅವರನ್ನ ಹುದ್ದೆಯಲ್ಲಿ ಮುಂದುವರಿಸದಂತೆ ನಿರ್ಧಾರ ಕೈಗೊಂಡಿತು. ಆಗಸ್ಟ್ 21ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತು ಮಾಡುವಂತೆ ರಾಜ್ಯಪಾಲರಿಗೆ ಮರು ಶಿಫಾರಸು ಮಾಡಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.

ಸರ್ಕಾರದ ಈ ಶಿಫಾರಸಿನ ಅನ್ವಯ , ಭಾರತೀಯ ಸಂವಿಧಾನದ 317 (2)ನೇ ವಿಧಿಯಡಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲರು ಇದೀಗ ಅಧಿಕೃತವಾಗಿ ಅಮಾನತು ಆದೇಶ ಹೊರಡಿಸಿದ್ದಾರೆ.

ಭಾರತದ ರಾಷ್ಟ್ರಪತಿಗಳು ಮುಂದಿನ ಆದೇಶವನ್ನ ಹೊರಡಿಸುವವರೆಗೆ ಈ ಅಮಾನತು ಚಾಲ್ತಿಯಲ್ಲಿರುತ್ತದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ, ಕೆಪಿಎಸ್‌ಸಿ ಆಯೋಗದ ಮುಂದಿನ ಅತ್ಯಂತ ಹಿರಿಯ ಸದಸ್ಯರಿಗೆ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+