ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ : ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು

By Gururaj
|
Google Oneindia Kannada News

ಬೆಂಗಳೂರು, ಜುಲೈ 02 : ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಅವರು ಸೋಮವಾರ ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಜುಲೈ 2 ರಿಂದ 9ರ ತನಕ ಒಟ್ಟು 12 ದಿನಗಳ ಕಾಲ ಬಜೆಟ್ ಅಧಿವೇಶನ ನಡೆಯಲಿದೆ.

ಚಿತ್ರ : ಜಂಟಿ ಸದನದ ಉದ್ದೇಶಿಸಿ ವಜುಭಾಯಿ ವಾಲಾ ಭಾಷಣ

ಮಂಗಳವಾರ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಸ್ಪೀಕರ್ ರಮೇಶ್ ಕುಮಾರ್ ಸ್ವಾಗತಿಸಿ, ಬರಮಾಡಿಕೊಂಡರು.

Karnataka governor Vajubhai Vala address joint session on July 2, 2018

Newest FirstOldest First
1:11 PM, 2 Jul

ಭಾಷಣ ಅಂತ್ಯಗೊಳಿಸಿದ ರಾಜ್ಯಪಾಲ ವಜುಭಾಯಿ ವಾಲಾ
12:59 PM, 2 Jul

2031ಕ್ಕೆ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಯೋಜನೆಗಳನ್ನು ಪೂರ್ಣಗೊಳಿಸಲಾಗುತ್ತದೆ
12:58 PM, 2 Jul

ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ನಗರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.
12:57 PM, 2 Jul

ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಹಲವು ಯೋಜನೆಗಳನ್ನು ರೂಪಿಸಲಾಗಿದೆ. ನಗರ ಮತ್ತು ಪಟ್ಟಣದ ನಡುವಿನ ಅಂತರವನ್ನು ಕಡಿಮೆ ಮಾಡಲಾಗುತ್ತದೆ
12:54 PM, 2 Jul

ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ರಾಜ್ಯದ ನಗರ ,ಪಟ್ಟಣ ಪ್ರದೇಶಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತದೆ
12:52 PM, 2 Jul

ಉತ್ತಮ ಶಿಕ್ಷಣ ಪದ್ಧತಿ ಮೂಲಕ 2030ಕ್ಕೆ ಕರ್ನಾಟಕವನ್ನು ಬಾಲ ಕಾರ್ಮಿಕ ಮುಕ್ತವನ್ನಾಗಿ ಮಾಡಲಾಗುತ್ತದೆ
12:51 PM, 2 Jul

ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ.ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಈ ಪದ್ಧತಿ ಜಾರಿಗೆ ತರಲಾಗುತ್ತಿದೆ. ಬೇಸಿಗೆಯಲ್ಲಿ ಜಾನುವಾರಗಳ ರಕ್ಷಣೆಗೆ ಮೇವು ಭದ್ರತಾ ನೀತಿ ಜಾರಿಗೆ ತರಲಾಗುತ್ತದೆ
Advertisement
12:49 PM, 2 Jul

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೆರವಾಗಲು ಸ್ಕಾಲರ್ ಶಿಪ್ ಘೋಷಣೆ ಮಾಡಲಾಗಿದೆ. ಶಿಕ್ಷಣದಲ್ಲಿ ಸುಧಾರಣೆ ತರಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ
12:47 PM, 2 Jul

ನದಿಗಳನ್ನು ಉಳಿಸುವ, ಮಾಲಿನ್ಯದಿಂದ ಅವುಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಕ್ರಮ ಕೈಗೊಂಡಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
12:46 PM, 2 Jul

ಕಾಡು ಪ್ರಾಣಿಗಳಿಂದ ರೈತರು ಬೆಳೆದ ಬೆಳೆಗಳು ನಾಶವಾದರೆ ಪರಿಹಾರವನ್ನು ನೀಡಲಾಗುತ್ತಿದೆ. ಯಾವುದೇ ರೈತರು ಆತ್ಮಹತ್ಯೆಯಂತಹ ಆಲೋಚನೆ ಮಾಡಬಾರದು ಎಂದು ಸರ್ಕಾರ ಮನವಿ ಮಾಡುತ್ತದೆ.
12:45 PM, 2 Jul

ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ಈ ಭಾಗದ ಜನರಿಗೆ ಮೀಸಲಾತಿ ನೀಡಲಾಗಿದೆ. ನೀರಾವರಿ ಸೌಲಭ್ಯಕ್ಕೆ ಬೇಕಾದ ಅಗತ್ಯ ನೆರವನ್ನು ನೀಡಲಾಗುತ್ತಿದೆ.
12:44 PM, 2 Jul

ಆಡಳಿತಯಂತ್ರವನ್ನು ಚುರುಕುಗೊಳಿಸುವತ್ತ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ಮಾಡಲಾಗುತ್ತದೆ.
Advertisement
12:42 PM, 2 Jul

ಪ್ರಸ್ತುತ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳನ್ನು ತಡೆಯಲು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಗೃಹ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗಳ ನೇಮಕಕ್ಕೂ ಆದ್ಯತೆ ನೀಡಲಾಗಿದೆ.
12:41 PM, 2 Jul

ಈ ಬಾರಿಯ ಮುಂಗಾರು ಹಂಗಾಮಿನಲ್ಇ ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
12:41 PM, 2 Jul

ಆಧುನಿಕ ಸಲಕರಣೆಗಳ ಮೂಲಕ ಕೃಷಿ ಕ್ಷೇತ್ರದ ಅಭಿವೃದ್ಧಿ ಮಾಡಬೇಕಿದೆ. ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ದಿಟ್ಟ ಹೆಜ್ಜೆ ಇಡಲಿದೆ.
12:38 PM, 2 Jul

ಬಡವರು, ಕಾರ್ಮಿಕರು, ಮಹಿಳೆಯರು, ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ
12:37 PM, 2 Jul

ಸುಮಾರು 100 ಹೊಸ ಸದಸ್ಯರು ಆಯ್ಕೆಯಾಗಿದ್ದಾರೆ. ಜನರಪರ ಕಾರ್ಯಗಳನ್ನು ಮಾಡಿ. ಹಿರಿಯ ಸದಸ್ಯರು ಕಿರಿಯರಿಗೆ ಮಾರ್ಗದರ್ಶನ ಮಾಡಿ ಎಂದು ರಾಜ್ಯಪಾಲರು ಸಲಹೆ ನೀಡಿದರು
12:36 PM, 2 Jul

ಹೊಸದಾಗಿ ಶಾಸಕರಾಗಿ ಆಯ್ಕೆಯಾದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ ರಾಜ್ಯಪಾಲರು
12:35 PM, 2 Jul

ಜಂಟಿ ಅಧಿವೇಶನಕ್ಕೆ ನಿಮಗೆಲ್ಲಾ ಸ್ವಾಗತ ಕೋರುತ್ತೇನೆ ಎಂದು ಭಾಷಣ ಆರಂಭಿಸಿದ ರಾಜ್ಯಪಾಲರು
12:35 PM, 2 Jul

ಹಿಂದಿಯಲ್ಲಿ ಭಾಷಣ ಆರಂಭಿಸಿದ ರಾಜ್ಯಪಾಲ ವಜುಭಾಯಿ ವಾಲಾ
12:35 PM, 2 Jul

ಸ್ಪೀಕರ್ ರಮೇಶ್ ಕುಮಾರ್, ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದಾರೆ
12:33 PM, 2 Jul

ವಿಧಾನಸಭೆಗೆ ಆಗಮಿಸಿದ ರಾಜ್ಯಪಾಲ ವಜುಭಾಯಿ ವಾಲಾ

English summary
Karnataka Governor Vajubhai Vala addressed the joint session of the state legislature on July 2, 2018. Chief Minister H.D.Kumaraswamy will present budget on July 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X