KSRTC: ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ನೌಕರರಿಗೆ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು, ನವೆಂಬರ್ 29: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಅನುಮತಿ ನೀಡಿದೆ. ನಿಗಮದಿಂದ ಒಟ್ಟು ನೌಕರರ ಕೋರಿಕೆಯಂತೆ ಒಟ್ಟು 1308 ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅನುಮತಿ ನೀಡಲಾಗಿದೆ ಎಂದು ನಿಗಮ ಶುಕ್ರವಾರ ಮಾಹಿತಿ ನೀಡಿದೆ.
ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದೆ. ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅಂತರ ನಿಗಮ ವರ್ಗಾವಣೆ ಮಾಹಿತಿ
ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ನಿಗಮದ ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಘಿದೆ. ಒಟ್ಟು ಶೇಕಡಾ 10 ರಷ್ಟು ಮೀಸಲಾತಿ ಸೌಲಭ್ಯ ನೀಡಲಾಗಿದೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವರ್ಗಾವಣೆ ನೌಕರರ ಅಂಕಿ ಸಂಖ್ಯೆ, ವಿವರ
* ಅಂತರ ನಿಗಮ ಸಾಮಾನ್ಯ ವರ್ಗದಡಿ ವರ್ಗಾವಣೆಗೊಂಡ ನೌಕರರು ಸಂಖ್ಯೆ : 1175
* ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳನ್ನು ಪರಿಗಣಿಸಿ 72 ನೌಕರರು ವರ್ಗಾವಣೆಗೊಂಡಿದ್ದಾರೆ.
* ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್, ಕಿಡ್ನಿ ವೈಫಲ್ಯ ಹಾಗೂ ಮೆದಳು ಸಂಬಂಧಿಸಿದ ಖಾಯಿಲೆಗಳು) ಪ್ರಕರಣದಲ್ಲಿ ನೌಕರರ ಕೋರಿಕೆ ಪರಿಗಣಿಸಿ ಒಟ್ಟು 61 ವರ್ಗಾವಣೆಗೊಂಡಿದ್ದಾರೆ. ಇದೆಲ್ಲ ಸೇರಿ ಒಟ್ಟು 1308 ನೌಕರರು ಅಂತರ ನಿಗಮಕ್ಕೆ ವರ್ಗಾವಣೆಗೊಂಡಿದ್ದಾರೆ.












Click it and Unblock the Notifications