ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವಾಲಯದಲ್ಲಿ ಸೇವೆ, ಪ್ರಸಾದ ವಿತರಣೆಗೆ ಸರ್ಕಾರದ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಜುಲೈ 23; ಲಾಕ್‌ಡೌನ್ ಬಳಿಕ ಕರ್ನಾಟಕದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಆದರೆ ಸೇವೆಗಳು, ಪ್ರಸಾದ ವಿನಿಯೋಗಕ್ಕೆ ಅವಕಾಶ ಇರಲಿಲ್ಲ.

ಕರ್ನಾಟಕ ಸರ್ಕಾರ ಶುಕ್ರವಾರ ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ, ಸೇವೆಗಳಿಗೆ ಅವಕಾಶ ನೀಡುವ ಕುರಿತು ತೀರ್ಮಾನ ಕೈಗೊಂಡಿದೆ. ಜುಲೈ 25ರಿಂದ ಪ್ರಸಾರ ವಿನಿಯೋಗ ಆರಂಭಿಸಲು ಒಪ್ಪಿಗೆ ನೀಡಲಾಗಿದೆ.

ಕೋಟ್ಯಧಿಪತಿಯಾಗಿಯೇ ಮುಂದುವರೆದ ಮಾದಪ್ಪ! ಕೋಟ್ಯಧಿಪತಿಯಾಗಿಯೇ ಮುಂದುವರೆದ ಮಾದಪ್ಪ!

ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿ ಈ ಕುರಿತು ಮನವಿ ಮಾಡಿದ್ದರು. ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದು, ಪ್ರಸಾದ, ಸೇವೆಗಳನ್ನು ಆರಂಭಿಸಲು ಒಪ್ಪಿಗೆ ಸಿಕ್ಕಿದೆ.

ತಿರುಪತಿ ದೇವಾಲಯ ಇನ್ನು ಎರಡು ತಿಂಗಳುಗಳಲ್ಲಿ ಪ್ಲಾಸ್ಟಿಕ್ ಮುಕ್ತತಿರುಪತಿ ದೇವಾಲಯ ಇನ್ನು ಎರಡು ತಿಂಗಳುಗಳಲ್ಲಿ ಪ್ಲಾಸ್ಟಿಕ್ ಮುಕ್ತ

Karnataka Govt Allowed To Seva And Prasada Distribution In Temple

ಜುಲೈ 25ರಿಂದ ರಾಜ್ಯದಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ ಮತ್ತು ಪ್ರಸಾದ ವಿತರಣೆಗೆ ಅವಕಾಶ ನೀಡಲಾಗುತ್ತದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಲಾಕ್‌ಡೌನ್ ಘೋಷಣೆ ಮಾಡಲಾಯಿತು. ಆಗ ದೇವಾಲಯದ ಬಾಗಿಲು ಮುಚ್ಚಲಾಯಿತು. ಅನ್‌ಲಾಕ್ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ ದೇವಾಲಯಗಳಲ್ಲಿ ದರ್ಶನಕ್ಕೆ ಅವಕಾಶ ನೀಡಿತ್ತು.

ತಮಿಳುನಾಡಲ್ಲಿ 'ಕೊರೊನಾ ದೇವಿ' ದೇವಾಲಯ; ವಿಶೇಷ ಪೂಜೆ ತಮಿಳುನಾಡಲ್ಲಿ 'ಕೊರೊನಾ ದೇವಿ' ದೇವಾಲಯ; ವಿಶೇಷ ಪೂಜೆ

ಈಗ ಮುಜರಾಯಿ ಇಲಾಖೆ ಸಚಿವರ ಮನವಿಯಂತೆ ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ ಮತ್ತು ಸೇವೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಇನ್ನೂ ಅನುಮತಿ ನೀಡಿಲ್ಲ.

English summary
Karnataka government allowed to seva and prasada distribution in temple from July 25, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X