ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾರ್ಮೆಂಟ್ಸ್‌ಗಳು ಕಾರ್ಯ ನಿರ್ವಹಿಸಲು ಕರ್ನಾಟಕ ಸರ್ಕಾರದ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಮೇ 10 : ಕಂಟೈನ್‌ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆ ಗಾರ್ಮೆಂಟ್ಸ್‌ ಘಟಕಗಳು ಕಾರ್ಯ ನಿರ್ವಹಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಸಾವಿರಾರು ಮಹಿಳೆಯರು ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಾರೆ.

ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಹಿಂದೆಯೇ ಕೈಗಾರಿಕೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿತ್ತು. ಈಗ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಸಿದ್ಧುಡುಪು ಘಟಕಗಳು ಕಾರ್ಯ ನಿರ್ವಹಣೆ ಮಾಡಲು ಒಪ್ಪಿಗೆ ನೀಡಲಾಗಿದೆ.

ಅಧಿಕೃತವಾಗಿ ಆಮದು ರಫ್ತು ಕೋಡ್ ಹೊಂದಿರುವ ಮತ್ತು ಉಡುಪು ರಫ್ತು ಉತ್ತೇಜನ ಮಂಡಳಿ (ಎಇಪಿಸಿ)ಯಲ್ಲಿ ನೋಂದಣಿಯಾಗಿರುವ ಘಟಕಗಳನ್ನು ಆರಂಭಿಸಬಹುದು ಎಂದು ಕರ್ನಾಟಕ ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

Garment

ಆದರೆ, ಘಟಕಗಳು ಒಟ್ಟು ಕಾರ್ಮಿಕರ ಸಂಖ್ಯೆಯಲ್ಲಿ ಮೂರನೇ ಒಂದರಷ್ಟು ಮಂದಿ ಕಾರ್ಮಿಕರು ಮಾತ್ರ ಕಾರ್ಯ ನಿರ್ವಹಣೆ ಮಾಡಬಹುದು. ಸರ್ಕಾರ ರಚನೆ ಮಾಡಿರುವ ಎಸ್‌ಒಪಿಯನ್ನು ಘಟಕಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಲಕ್ಷಾಂತರ ಮಹಿಳೆಯರು ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಾ ಬದುಕು ಕಟ್ಟಿಕೊಂಡಿದ್ದಾರೆ. ಬೆಂಗಳೂರು ನಗರದಲ್ಲಿಯೇ 850ಕ್ಕೂ ಅಧಿಕ ಗಾರ್ಮೆಂಟ್ಸ್‌ಗಳಿದ್ದು, ಸುಮಾರು 2 ಲಕ್ಷ ಜನರು ಕೆಲಸ ಮಾಡುತ್ತಾರೆ.

ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆಯಾದ ಬಳಿಕ ಗಾರ್ಮೆಂಟ್ಸ್‌ಗಳು ಕೆಲಸ ನಿಲ್ಲಿಸಿದ್ದವು. ಸುಮಾರು 2 ತಿಂಗಳ ಬಳಿಕ ಗಾರ್ಮೆಂಟ್ಸ್‌ ಮತ್ತೆ ತೆರೆಯಲು ಸರ್ಕಾರ ಅನುಮತಿ ನೀಡಿದೆ.

English summary
Karnataka government allowed garments to resume work. If garment in not in containment zone they can start work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X