ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಜಿಮ್ ಕೇಂದ್ರ ತೆರೆಯಲು ಅನುಮತಿ: ಷರತ್ತುಗಳು ಅನ್ವಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ನಡುವೆ ಕರ್ನಾಟಕ ಸರ್ಕಾರ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಿದೆ. ರಾಜ್ಯದ ಜಿಮ್ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 2ರಂದು ಕೊರೊನಾವೈರಸ್ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದ್ದು, ಏಪ್ರಿಲ್ 20ರವರೆಗೂ ಈ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿತ್ತು. ಆದರೆ ಜಿಮ್ ಕೇಂದ್ರಗಳನ್ನು ಮುಚ್ಚುವುದಕ್ಕೆ ಸರ್ಕಾರ ನೀಡಿದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಕೋವಿಡ್ ಮಾರ್ಗಸೂಚಿಗೆ ಜಿಮ್ ಅಸೋಸಿಯೇಷನ್ ತೀವ್ರ ಆಕ್ಷೇಪ
ರಾಜ್ಯ ಸರ್ಕಾರದ ನೂತನ ಆದೇಶಕ್ಕೆ ರಾಜ್ಯ ಜಿಮ್ ಅಸೋಸಿಯೇಷನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ದಿಢೀರನೇ ಜಿಮ್ ಬಂದ್ ಮಾಡುವಂತೆ ಆದೇಶ ಹೊರಡಿಸಿದರೆ ಹೇಗೆ. ಕಟ್ಟಡದ ಬಾಡಿಗೆ ಕಟ್ಟಲಾಗದೇ ಆರ್ಥಿಕ ಹೊರೆಯನ್ನು ಎದುರಿಸಬೇಕಾಗುತ್ತದೆ. ಈ ಸಮಸ್ಯೆಗಳನ್ನು ಯಾರು ನಿಭಾಯಿಸಬೇಕು ಎಂದು ಅಸೋಸಿಯೇಷನ್ ಅಧ್ಯಕ್ಷ ರವಿ ಪ್ರಶ್ನೆ ಮಾಡಿದ್ದರು. ಇದೀಗ ಆದೇಶವನ್ನು ಹಿಂಪಡೆದ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಜಿಮ್ ಕೇಂದ್ರಗಳನ್ನು ತೆರೆಯಲು ಷರತ್ತುಬದ್ಧ ಅನುಮತಿ ನೀಡಲಾಗಿದೆ.

Karnataka Govt Allows To Open The Gym Center: Conditions Apply

ಜಿಮ್ ಕೇಂದ್ರಗಳನ್ನು ತೆರೆಯಲು ಅನುಮತಿ; ಷರತ್ತುಗಳು ಅನ್ವಯ
- ಯಾವುದೇ ಕಾರಣಕ್ಕೂ ಶೇ.50ಕ್ಕಿಂತ ಹೆಚ್ಚು ಜನರನ್ನು ಜಿಮ್ ಕೇಂದ್ರಗಳಲ್ಲಿ ಸೇರಿಸುವಂತಿಲ್ಲ
- ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯ
- ಪ್ರತಿ ಬಾರಿ ಬಳಸಿದ ಸಾಮಗ್ರಿಗಳ ಮೇಲೆ ಸ್ಯಾನಿಟೈಸರ್ ಸಿಂಪಡಿಸುವುದು ಕಡ್ಡಾಯ
- ಒಂದು ವೇಳೆ ಕೊವಿಡ್-19 ನಿಯಮಗಳ ಉಲ್ಲಂಘನೆ ಬಗ್ಗೆ ಕಂಡು ಬಂದಲ್ಲಿ ಸಾಂಕ್ರಾಮಿಕ ಪಿಡುಗು ಅಂತ್ಯದವರೆಗೂ ಆ ಜಿಮ್ ಕೇಂದ್ರವನ್ನು ಮುಚ್ಚುವುದು

Recommended Video

ಏ.7ರವರೆಗೆ 100% ಸೀಟು ಭರ್ತಿಗೆ ಅವಕಾಶ, ಸಿನಿಮಾ ಇಂಡಸ್ಟ್ರಿ ಮನವಿಗೆ ಒಪ್ಪಿಗೆ ಸೂಚಿಸಿದ ಸಿಎಂ | Oneindia Kannada

ಕರ್ನಾಟಕದಲ್ಲಿ ಕೊರೊನಾವೈರಸ್ ದಾಖಲೆ:
ರಾಜ್ಯದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲಿ 4553 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 15 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 2060 ಸೋಂಕಿತರು ಗುಣಮುಖರಾಗಿದ್ದಾರೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1015155ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 963419 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12625 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 39092 ಸಕ್ರಿಯ ಪ್ರಕರಣಗಳಿವೆ.

English summary
Karnataka Govt Allows To Open The Gym Center: Conditions Apply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X