ಕರ್ನಾಟಕದ 6 ಜಿಲ್ಲೆಗಳು ಅನ್‌ಲಾಕ್; ಸರ್ಕಾರದ ಹೊಸ ಆದೇಶ
ಬೆಂಗಳೂರು, ಜೂನ್ 21; ಕರ್ನಾಟಕ ಸರ್ಕಾರ ಅನ್‌ಲಾಕ್ 2.0 ಪಟ್ಟಿಗೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿದ ಆದೇಶ ಹೊರಡಿಸಿದೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ ರಾಜ್ಯದಲ್ಲಿ ಅನ್‌ಲಾಕ್ ಜಾರಿಗೆ ಬಂದಿದೆ.
ಸೋಮವಾರ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯಪುರ ಜಿಲ್ಲೆಗಳನ್ನು ಅನ್‌ಲಾಕ್ ಪಟ್ಟಿಗೆ ಸೇರಿಸಲಾಗಿದೆ.
ಜೂನ್ 19ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅನ್‌ಲಾಕ್ ಘೋಷಣೆ ಮಾಡಿದ್ದರು. ಕೋವಿಡ್ ಪಾಸಿಟಿವಿಟಿ ದರ ಶೇ 5ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಜುಲೈ 5ರ ತನಕ ಲಾಕ್‌ಡೌನ್ ನಿಯಮ ಮುಂದುವರೆಯಲಿದೆ ಎಂದು ಹೇಳಿದ್ದರು.
In continuation of the orders of even number dated 19-06-2021 and 20 06-2021.
— K'taka Health Dept (@DHFWKA) June 21, 2021
Udupi, Bengaluru Rural, Shivamogga, Ballari, Chitradurga and Vijayapura districts under Category I districts. pic.twitter.com/8265ldOAoz

ಆದರೆ ಜನಪ್ರತಿನಿಧಿಗಳ ಒತ್ತಾಯಕ್ಕೆ ಮಣಿದು ಸೋಮವಾರ 6 ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆ ಮಾಡಲಾಗಿದೆ. ಸೋಮವಾರದಿಂದ ಸರ್ಕಾರಿ ಬಸ್‌ಗಳ ಸಂಚಾರ ಆರಂಭವಾಗಿದೆ.
ಅನ್‌ಲಾಕ್ ಘೋಷಣೆಯಾದ ಜಿಲ್ಲೆಗಳಲ್ಲಿ ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆಯ ತನಕ ತೆರೆಯಲು ಅವಕಾಶ ನೀಡಲಾಗಿದೆ. ಎಸಿ ಇಲ್ಲದ ಹೋಟೆಲ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ 50ರಷ್ಟು ಸಾಮರ್ಥ್ಯದೊಂದಿಗೆ ಕುಳಿತು ತಿನ್ನಲು ಅವಕಾಶ ನೀಡಲಾಗಿದೆ.
ಅನ್‌ಲಾಕ್‌ಗೊಂಡ ಜಿಲ್ಲೆಗಳು; ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯಪುರ.












Click it and Unblock the Notifications