Get Updates
Get notified of breaking news, exclusive insights, and must-see stories!

ಶರಣಾಗತಿ ನಕ್ಸಲರಿಗೆ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಎಷ್ಟು ಲಕ್ಷ ಹಣ ಗೊತ್ತಾ?

ಬೆಂಗಳೂರು, ಜನವರಿ 08: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವಿಯ ಮೇರೆಯ ಇಂದು(ಬುಧವಾರ) ಸಿಎಂ ಸಿದ್ಧರಾಮಯ್ಯ ಹಾಗೂ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರ ಸಮ್ಮುಖದಲ್ಲಿ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಬೆಂಗಳೂರಲ್ಲಿ ಶರಣಾಗುತ್ತಿದ್ದಾರೆ. ಇದೀಗ ಇಂತಹ ನಕ್ಸಲರಿಗೆ ರಾಜ್ಯ ಸರ್ಕಾರವು ಪ್ಯಾಕೇಜ್ ಘೋಷಣೆ ಮಾಡಿದೆ.

ಇಂದು(ಜನವರಿ 08) ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧರಿಸಿದ್ದರು. ಆದರೇ ದಿಢೀರ್ ಬದಲಾವಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮ್ಮುಖದಲ್ಲೇ ಶರಣಾಗುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇಂದು ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ 6 ನಕ್ಸಲರು ಶರಣಾಗಲಿದ್ದಾರೆ.

Karnataka Govt Announces Money Package To Naxals Who Comes out to surrender

ಈ ಮುಂಚೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು ಎಂದು ನಿಗದಿಯಾಗಿತ್ತು. ಆದರೆ, ಇದೀಗ ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗರಾಗುತ್ತಿದ್ದಾರೆ. ಇನ್ನು ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಕರ್ನಾಟಕ ಸರ್ಕಾರ ಪ್ಯಾಕೇಜ್ ನೀಡುತ್ತಿದೆ. ರಾಜ್ಯ ಸರ್ಕಾರದಿಂದ ಶರಣಾಗುತ್ತಿರುವಂತ ನಕ್ಸಲರಿಗೆ ಮೂರು ಕೆಟಗರಿಯಲ್ಲಿ ಪ್ಯಾಕೇಜ್ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಣೆ

* ಕೆಟಗರಿ ಎ ವರ್ಗದಡಿ ನಮ್ಮ ರಾಜ್ಯದವರೇ ಆಗಿದ್ದು, ನಕ್ಸಲ್ ಚಟುವಟಿಕೆಯಲ್ಲಿ ತೊಡಗಿ, ಕೇಸ್ ಇದ್ದು ಶರಣಾಗುತ್ತಿರುವವರಿಗೆ 7.50 ಲಕ್ಷ ಹಣ ನೀಡುತ್ತಿದೆ.

* ಕೆಟಗರಿ ಬಿ ವರ್ಗದಡಿ ಹೊರ ರಾಜ್ಯದ ನಕ್ಸಲರಿಗೆ ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೇ 4 ಲಕ್ಷ ಪ್ಯಾಕೇಜ್ ನೀಡುವುದಾಗಿ ತಿಳಿಸಿದೆ.

* ಕೆಟಗರಿ ಸಿ ವರ್ಗದಡಿ ನಕ್ಸಲ್ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದು, ಪ್ರಕರಣಗಳು ಇದ್ದರೂ 2 ಲಕ್ಷ ಹಣವನ್ನು ಪ್ಯಾಕೇಜ್ ನಡಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶರಣಾಗುವ ನಕ್ಸಲರು ಯಾರು?

1. ಬಾಳೆಹೊಳೆ ಕಳಸದ ವನಜಾಕ್ಷಿ
2. ಮುಂಡಗಾರು ಶೃಂಗೇರಿಯ ಲತಾ
3. ದಕ್ಷಿಣ ಕನ್ನಡದ ಕುಂತಲೂರಿನ ಸುಂದರಿ
4. ರಾಯಚೂರಿನ ಮಾರಪ್ಪೆ ಅರೋಳಿ
5. ತಮಿಳುನಾಡಿನ ವಸಂತ ಟಿ
6. ಕೇರಳದ ಎನ್.ಜೀಶಾ

ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್: ಸುನೀಲ್‌ ಕುಮಾರ್‌ ಕಿಡಿ

ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಅವರು ಕಿಡಿಕಾರಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ

ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರ್ಕಾರ ಶರಣಾಗಿದೆಯೋ ? ಭೂಗತ ಚಟುವಟಿಕೆ ನಡೆಸಿ ತಲೆಮರೆಸಿಕೊಂಡಿದ್ದ ನಕ್ಸಲರು ಶರಣಾಗಬೇಕಿರುವುದು ಸಂಬಂಧಪಟ್ಟ ಎಸ್ಪಿ ಕಚೇರಿ ಅಥವಾ ಸಬ್ ಇನ್ಸ್‌ಪೆಕ್ಟರ್ ಎದುರು. ಆದರೆ ಇಲ್ಲೇನಾಗುತ್ತಿದೆ ? ಆರು ಕೋಟಿ ಕನ್ನಡಿಗರ ಮುಖ್ಯಮಂತ್ರಿ ತಮ್ಮ ಅಧಿಕೃತ ಕಚೇರಿಯಲ್ಲಿ ಆರು ಮಂದಿ ನಕ್ಸಲರನ್ನು ಸ್ವಾಗತಿಸಲು ನಡು ಬಗ್ಗಿಸಿ ನಿಂತಿದ್ದಾರೆ. ಕರ್ನಾಟಕದಲ್ಲಿ ಕಾನೂನಿನ ಕೊಲೆಯಾಗಿದೆ. ಸರ್ಕಾರವೇ ಪ್ರಾಯೋಜಿಸಿದೆ.

ನಕ್ಸಲ್ ವಿಕ್ರಮ್ ಗೌಡರನ್ನು ಎನ್ ಕೌಂಟರ್ ಮಾಡಿದ ಪೊಲೀಸರ ದಿಟ್ಟ ಕ್ರಮಕ್ಕೆ ಮಾನ್ಯ ಸಿದ್ದರಾಮಯ್ಯ ಇಂದು ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ. ಮತ್ತು ಪೊಲೀಸ್'ರನ್ನ ಅಣಕಿಸುವ ರೀತಿ ರಾಜ್ಯದ ಮುಖ್ಯಮಂತ್ರಿ ನಡೆದುಕೊಂಡಿದ್ದಾರೆ. ಇಲ್ಲಿ ಯಾರ ಶರಣಾಗತಿ? ಸರ್ಕಾರದ ಮುಂದೆ ನಕ್ಸಲರ ಶರಣಾಗತಿಯೋ? ಅಥವಾ ಬುದ್ದಿಜೀವಗಳ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ಅವರು ನಕ್ಸಲರಿಗೆ ಶರಣಾದರೊ?

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+