ಗ್ರಾಮ ಸಹಾಯಕರ ವೇತನ 10 ಸಾವಿರ ರೂ.ಗೆ ಏರಿಕೆ

Posted By:
Subscribe to Oneindia Kannada

ಬೆಂಗಳೂರು, ಮೇ 18 : ಕರ್ನಾಟಕ ಸರ್ಕಾರ ಗ್ರಾಮ ಸಹಾಯಕರ ವೇತನವನ್ನು 10 ಸಾವಿರ ರೂ.ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 10,450 ಗ್ರಾಮ ಸಹಾಯಕರಿದ್ದು, ಏಪ್ರಿಲ್ 1ರಿಂದಲೇ ಜಾರಿಗೆ ಬರುವಂತೆ ವೇತನವನ್ನು ಹೆಚ್ಚಳ ಮಾಡಲಾಗಿದೆ.

2016-17ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ರಾಮ ಸಹಾಯಕರ ವೇತನವನ್ನು 7 ಸಾವಿರದಿಂದ 10 ಸಾವಿರ ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಣೆ ಮಾಡಿದ್ದರು. ಮೇ 13ರಂದು ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. [ಕರ್ನಾಟಕ ಬಜೆಟ್ 2016-17, ಮುಖ್ಯಾಂಶಗಳು]

vidhana soudha

ಗ್ರಾಮ ಸಹಾಯಕರು ಯಾರು?: ಕರ್ನಾಟಕ ಗ್ರಾಮ ಕಚೇರಿಗಳ ರದ್ಧತಿ ಕಾಯ್ದೆ 1961ರ ಜಾರಿಯ ನಂತರ ಗ್ರಾಮೀಣ ಹಂತದ ವಿಲೇಜ್ ಆಫೀಸರ್ಸ್ ಹುದ್ದೆಗಳು ರದ್ದಾಗಿದ್ದವು. ಈ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರರನ್ನು ಗ್ರಾಮ ಲೆಕ್ಕಿಗರಿಗೆ ಸಹಾಯ ಮಾಡುವ ಸಲುವಾಗಿ ಮಿತ ವೇತನದ ಆಧಾರದ ಮೇಲೆ ಸೇವೆಯಲ್ಲಿ ಮುಂದುವರೆಸಲಾಗಿತ್ತು. [ಸಿದ್ದರಾಮಯ್ಯ ಬಜೆಟ್: ಯಾವುದು ಏರಿಕೆ? ಯಾವುದು ಇಳಿಕೆ?]

ಗ್ರಾಮ ಸಹಾಯಕರ ವೇತನವನ್ನು ಕಾಲಕಾಲಕ್ಕೆ ಪರಿಷ್ಕರಣೆ ಮಾಡಲಾಗಿತ್ತು. 1/1/2013ರಲ್ಲಿ 3,500 ರೂ. ಇದ್ದ ವೇತನವನ್ನು 7 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ 7 ಸಾವಿರವಿರುವ ವೇತನವನ್ನು 10 ಸಾವಿರಕ್ಕೆ ಹೆಚ್ಚಳ ಮಾಡುವುದಾಗಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government on May 17, 2016 announced pay hike for Gram Sahayaka's. Salary hiked Rs 7000 to Rs 10,000. Chief Minister Siddaramaiah announced a pay hike in the budget 2016-17.
Please Wait while comments are loading...