Guest Teachers Recruitment: 5,000 ಅತಿಥಿ ಶಿಕ್ಷಕರ ನೇಮಕಾತಿ ಬಗ್ಗೆ ಶಿಕ್ಷಣ ಸಚಿವ ಮಹತ್ವದ ಮಾಹಿತಿ
ಅತಿಥಿ ಶಿಕ್ಷಕರಾಗುವ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದ್ದಾರೆ.
ಈ ಸಂಬಂಧ ವಿಧಾನಸಭೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಉತ್ತರ ನೀಡಿದ್ದಾರೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ವಿವರಿಸಿದ್ದಾರೆ.

ಇನ್ನು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ. 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲ ಮಕ್ಕಳಿಗೂ ಶೂ, ಸಾಕ್ಸ್ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
13 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ
ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳನ್ನು ನೇಮಕಾತಿ ಮಾಡಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ಗಳನ್ನು ನೇರ ನೇಮಕಾತಿ ಹಾಗೂ 14 ಪಿಎಸ್ಐಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅರಣ್ಯ ಇಲಾಖೆಯಲ್ಲಿ ಶೇ 3ರಷ್ಟು, ಪೊಲೀಸ್ ಇಲಾಖೆಯಲ್ಲಿ ಶೇ 3ರಷ್ಟು ಹಾಗೂ ವಿವಿಧ ಇಲಾಖೆಗಳಲ್ಲಿ ಶೇ 2ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದಿದ್ದಾರೆ.
ಪೌರಕಾರ್ಮಿಕರಿಗೆ ಸರ್ಕಾರದಿಂದ ವೇತನ
ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ. 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್ಎಫ್ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು. ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಶೇ 40ರಷ್ಟು ಸರ್ಕಾರದಿಂದ ಹಾಗೂ ಶೇ 60ರಷ್ಟು ನಗರ ಸ್ಥಳೀಯ ಸಂಸ್ಥೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications