10 ಸಾವಿರ ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಜೂನ್ 20 : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗಾಗಿ ನಡೆದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಒಂದು ಹುದ್ದೆಗೆ ಇಬ್ಬರು ಶಿಕ್ಷಕರು ಎನ್ನುವ ಅನುಪಾತದಲ್ಲಿ ಫಲಿತಾಂಶ ಬಿಡುಗಡೆ ಮಾಡಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಮಂಗಳವಾರ ಫಲಿತಾಂಶವನ್ನು ಪ್ರಕಟಿಸಿದ್ದಾರೆ. 2017ರ ನವೆಂಬರ್‌ನಲ್ಲಿ ಶಿಕ್ಷಕರ ನೇಮಕಾತಿಗಾಗಿ ಸಿಇಟಿ ಪರೀಕ್ಷಯನ್ನು ನಡೆಸಲಾಗಿತ್ತು.
'ಡಿಡಿಪಿಐಗಳು ಪರಿಶೀಲಿಸಿ ವರದಿ ನೀಡಿದ ಬಳಿಕ, ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಒಬ್ಬ ಶಿಕ್ಷಕ ಎಂಬ ಅನುಪಾತದಲ್ಲಿ ಅಂತಿಮ ಫಲಿತಾಂಶವನ್ನು ಜುಲೈ 29ಕ್ಕೆ ಪ್ರಕಟಿಸಲಾಗುತ್ತದೆ' ಎಂದು ಸಚಿವರು ಹೇಳಿದ್ದಾರೆ.

'ಆಗಸ್ಟ್ 5ರಿಂದ ಶಿಕ್ಷಕರ ನೇಮಕಾತಿಗಾಗಿ ಕೌನ್ಸಿಲಿಂಗ್ ನಡೆಸಲಾಗುತ್ತದೆ. ಅಂತಿಮ ಪಟ್ಟಿ ಪ್ರಕಟವಾದ ಒಂದು ತಿಂಗಳವೊಳಗೆ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತದೆ' ಎಂದು ಎನ್.ಮಹೇಶ್ ಹೇಳಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. 10 ಸಾವಿರ ಪದವೀಧರ ಶಿಕ್ಷಕರು ನೇಮಕವಾದ ಬಳಿಕ ಅತಿಥಿ ಶಿಕ್ಷಕರ ಹುದ್ದೆ ರದ್ದಾಗಲಿದೆ.












Click it and Unblock the Notifications