ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ

|
Google Oneindia Kannada News

ಬೆಂಗಳೂರು, ಜೂನ್ 14; ಕೋವಿಡ್ ಸೋಂಕಿನಿಂದಾಗಿ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಇಂತಹ ಘೋಷಣೆ ಮಾಡಿದ ಮೊದಲ ರಾಜ್ಯ ಕರ್ನಾಟಕ.

Recommended Video

ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ CM | Oneindia Kannada

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಈ ಕುರಿತು ಘೋಷಣೆ ಮಾಡಿದರು. ಕುಟುಂಬದಲ್ಲಿ ದುಡಿಯುವ ವ್ಯಕ್ತಿ ಮೃತಪಟ್ಟರೆ ಒಂದು ಕುಟುಂಬದಲ್ಲಿ ಒಬ್ಬರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದರು.

ದೇಶದಲ್ಲಿ ಹಠಾತ್‌ ಕೊರೊನಾ ಸಾವು ಸಂಖ್ಯೆ ಏರಿಕೆಗೆ ಕಾರಣವೇನು? ದೇಶದಲ್ಲಿ ಹಠಾತ್‌ ಕೊರೊನಾ ಸಾವು ಸಂಖ್ಯೆ ಏರಿಕೆಗೆ ಕಾರಣವೇನು?

Karnataka Govt announces Rs 1 lakh ex-gratia for kin of COVID-19 victims of BPL Card Holders

"ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕೋವಿಡ್‌ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು 20 ರಿಂದ 30 ಸಾವಿರ ಕುಟುಂಬಕ್ಕೆ ನೆರವು ಸಿಗಲಿದೆ" ಎಂದು ಯಡಿಯೂರಪ್ಪ ಹೇಳಿದರು.

ರಾಮನಗರ ಮ್ಯಾನ್‌ ಹೋಲ್ ದುರಂತ; ಪರಿಹಾರ ಘೋಷಣೆ ರಾಮನಗರ ಮ್ಯಾನ್‌ ಹೋಲ್ ದುರಂತ; ಪರಿಹಾರ ಘೋಷಣೆ

ಕೋವಿಡ್‌ ಸೋಂಕಿಗೆ ಕುಟುಂಬದಲ್ಲಿ ಅಪ್ರಾಪ್ತರು ಬಲಿಯಾಗಿದ್ದರೆ ಪರಿಹಾರ ಸಿಗುವುದಿಲ್ಲ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ 1 ಲಕ್ಷ ರೂ. ಪರಿಹಾರ ಸಿಗಲಿದೆ.

ವಿಶೇಷ ಪ್ಯಾಕೇಜ್ ಘೋಷಣೆ; ಯಡಿಯೂರಪ್ಪ ಪತ್ರಿಕಾಗೋಷ್ಠಿ ವಿವರ ವಿಶೇಷ ಪ್ಯಾಕೇಜ್ ಘೋಷಣೆ; ಯಡಿಯೂರಪ್ಪ ಪತ್ರಿಕಾಗೋಷ್ಠಿ ವಿವರ

ಯಡಿಯೂರಪ್ಪ ಈ ಕುರಿತು ಇಂದು ಘೋಷಣೆ ಮಾಡಿದ್ದು, ಈ ಕುರಿತ ವಿವರವಾದ ಮಾರ್ಗಸೂಚಿ ಇನ್ನೂ ಪ್ರಕಟವಾಗಬೇಕಿದೆ. ದೇಶದಲ್ಲಿಯೇ ಇಂತಹ ಘೋಷಣೆಯನ್ನು ಮಾಡಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ.

ಕೋವಿಡ್ ಕಾರಣದಿಂದಾಗಿ ಹಲವಾರು ಕುಟುಂಬದಲ್ಲಿ ದುಡಿಯುವವರು ಮೃತಪಟ್ಟಿದ್ದಾರೆ. ಕುಟುಂಬದ ಆಧಾರ ಸ್ತಂಭವನ್ನೇ ಕಳೆದುಕೊಂಡು ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಕುಟುಂಬಗಳ ನೆರವಿಗೆ ಸರ್ಕಾರ ಈಗ ಧಾವಿಸಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, "ಇದಕ್ಕಾಗಿ ಸುಮಾರು 250 ರಿಂದ 300 ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲು ಇಂತಹ ಹಣಕಾಸು ಯೋಜನೆಯನ್ನು ನಾವು ನೀಡುತ್ತಿದ್ದೇವೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ" ಎಂದರು.

ಈ ಘೋಷಣೆಗೂ ಮೊದಲು ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪ ಆರ್ಥಿಕ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ. ಎಸ್. ಎನ್. ಪ್ರಸಾದ್, ಇಲಾಖೆ ಕಾರ್ಯದರ್ಶಿಗಳಾದ ಪಿ. ಸಿ. ಜಾಫರ್, ಏಕ ರೂಪ್ ಕೌರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

English summary
karnataka COVID victim compensation: Rs 1 lakh ex-gratia for kin of COVID-19 victims of BPL Card Holders, Chief Minister Yediyurappa announced on june 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X